AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ನಿವಾಸದಲ್ಲಿ ಜಾತಿ ಗಣತಿ: ಚಿಂತೆ ಬಿಡಿ, ಮಾಹಿತಿ ಕೊಡಿ ಎಂದು ಸಿದ್ದರಾಮಯ್ಯ ಕರೆ

ಹಿಂದುಳಿದ ವರ್ಗಗಳ ಆಯೋಗದ ನಡೆಸುತ್ತಿರುವ ಜಾತಿ ಗಣತಿ ಹಿನ್ನಲೆ ಸಿಎಂ ಸಿದ್ದರಾಮಯ್ಯ ಅವರ ನಿವಾಸದಲ್ಲೂ ಸಮೀಕ್ಷೆ ನಡೆಸಲಾಯಿತು. ಮುಖ್ಯಮಂತ್ರಿಗಳ ಬೆಂಗಳೂರಿನ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ್ದ ಒಟ್ಟು 5 ಜನರನ್ನು ಒಳಗೊಂಡಿದ್ದ ಸಮೀಕ್ಷಾ ತಂಡ ಮಾಹಿತಿ ಸಂಗ್ರಹಿಸಿದೆ. ಆ ಬಳಿಕ ತಮ್ಮ ‘ಎಕ್ಸ್‌’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ, ಚಿಂತೆ ಬಿಟ್ಟು ಮಾಹಿತಿ ನೀಡಿ ಎಂದು ಕರೆ ನೀಡಿದ್ದಾರೆ.

ಸಿಎಂ ನಿವಾಸದಲ್ಲಿ ಜಾತಿ ಗಣತಿ: ಚಿಂತೆ ಬಿಡಿ, ಮಾಹಿತಿ ಕೊಡಿ ಎಂದು ಸಿದ್ದರಾಮಯ್ಯ ಕರೆ
ಸಿಎಂ ಮನೆಯಲ್ಲಿ ಗಣತಿ
ಪ್ರಸನ್ನ ಗಾಂವ್ಕರ್​
| Edited By: |

Updated on: Oct 16, 2025 | 6:42 PM

Share

ಬೆಂಗಳೂರು, ಅಕ್ಟೋಬರ್​ 16: ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿ ಗಣತಿ ಹಿನ್ನಲೆ ಸಿಎಂ ಸಿದ್ದರಾಮಯ್ಯ (Siddaramaiah)  ಅವರ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಮೀಕ್ಷೆ ನಡೆಸಲಾಗಿದೆ. ಸುಮಾರು 45 ನಿಮಿಷಗಳ ಕಾಲ ಗಣತಿದಾರರಿಗೆ ಸಿಎಂ ಮಾಹಿತಿ ನೀಡಿದ್ದು, ಸಿಬ್ಬಂದಿ ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಿದ್ದಾರೆ. ಒಟ್ಟು 5 ಜನರನ್ನು ಒಳಗೊಂಡಿದ್ದ ಸಮೀಕ್ಷಾ ತಂಡ ಸಿಎಂ ಮನೆಯಲ್ಲಿ ಗಣತಿ ಕಾರ್ಯ ನಡೆಸಿದೆ. ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ತಮ್ಮ ‘ಎಕ್ಸ್‌’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ನಮ್ಮ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಮೀಕ್ಷೆಗಾಗಿ ನನ್ನ ಮನೆಗೆ ಭೇಟಿ ನೀಡಿದ ಸಿಬ್ಬಂದಿಗೆ ಮಾಹಿತಿ ನೀಡಿ ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದ್ದೇನೆ. ಅಸಮಾನತೆ, ಬಡತನವನ್ನು ನಿವಾರಣೆ ಮಾಡಿ ಸಮಸಮಾಜ ನಿರ್ಮಿಸುವ ಉದ್ದೇಶದೊಂದಿಗೆ ನಮ್ಮ ಸರ್ಕಾರವು ಈ ಸಮೀಕ್ಷೆಯನ್ನು ಕೈಗೊಂಡಿದೆ. ಪ್ರತಿಯೊಬ್ಬರೂ ಈ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಂಡು ತಮ್ಮ ಮಾಹಿತಿಯನ್ನು ಪ್ರಾಮಾಣಿಕವಾಗಿ ನೀಡಬೇಕು ಎಂದು ಸಿಎಂ ಕರೆ ನೀಡಿದ್ದಾರೆ.

ಮುಖ್ಯಮಂತ್ರಿಗಳಿಂದ ಮಾಹಿತಿ ಪಡೆದ ಗಣತಿದಾರರು

ಸಮೀಕ್ಷೆ ವೇಳೆ ಪ್ರತಿಯೊಬ್ಬರು ಮಾಹಿತಿ ಕೊಟ್ಟಾಗ ಮಾತ್ರ ಸಮಾಜದ ವಾಸ್ತವ ಸ್ಥಿತಿಗತಿ ಬಗ್ಗೆ ನಿಖರ ಮಾಹಿತಿ ದೊರೆತು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಜನರನ್ನು ಗುರುತಿಸಿ ಅವರ ಪ್ರಗತಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ. ಇದು ಯಾವುದೇ ಒಂದು ಜಾತಿಗೆ ಸೀಮಿತವಾದ ಸಮೀಕ್ಷೆಯಲ್ಲ, ರಾಜ್ಯದ ಪ್ರತಿಯೊಬ್ಬರ ಜೀವನದ ಮೇಲೆ ಬೆಳಕು ಚೆಲ್ಲುವ ವೈಜ್ಞಾನಿಕ ಪ್ರಯತ್ನ. ಸಮೀಕ್ಷೆಯಲ್ಲಿ ಭಾಗಿಯಾದ್ರೆ ನಿಮ್ಮ ವೈಯಕ್ತಿಕ ಮಾಹಿತಿ ದುರ್ಬಳಕೆ ಆಗಲ್ಲ. ಹೀಗಾಗಿ ಚಿಂತೆ ಬಿಟ್ಟು, ಧೈರ್ಯವಾಗಿ ಸಿಬ್ಬಂದಿ ಜೊತೆ ಮಾಹಿತಿ ಹಂಚಿಕೊಳ್ಳಿ ಎಂದು ಸಿಎಂ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು