ಹಿಂದುಳಿದ ವರ್ಗಗಳ ಸಮುದಾಯ ಭವನ ನಿರ್ಮಾಣಕ್ಕೆ 16.40 ಕೋಟಿ ರೂ. ಅನುದಾನ ಬಿಡುಗಡೆ

ಹಾಸನ ಜಿಲ್ಲೆಯ ಅರಸೀಕೆರೆ, ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಕ್ಷೇತ್ರ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಹಾಗೂ ಗದಗ ಜಿಲ್ಲೆಯ ರೋಣ ಕ್ಷೇತ್ರಕ್ಕೆ ಸರ್ಕಾರದಿಂದ ಒಟ್ಟು 16.40 ಕೋಟಿ ರೂ. ವಿಶೇಷ ಅನುದಾನವನ್ನು ಸಿಎಂ ಸಿದ್ದರಾಮಯ್ಯ ಬಿಡುಗಡೆ ಮಾಡಿದ್ದಾರೆ.

ಹಿಂದುಳಿದ ವರ್ಗಗಳ ಸಮುದಾಯ ಭವನ ನಿರ್ಮಾಣಕ್ಕೆ 16.40 ಕೋಟಿ ರೂ. ಅನುದಾನ ಬಿಡುಗಡೆ
ಸಿದ್ದರಾಮಯ್ಯ
Edited By:

Updated on: Feb 23, 2024 | 1:38 PM

ಬೆಂಗಳೂರು, ಫೆಬ್ರವರಿ 23: ಹಿಂದುಳಿದ ವರ್ಗಗಳ ಸಮುದಾಯ ಭವನ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ವಿಶೇಷ ಅನುದಾನ ಬಿಡುಗಡೆ ಮಾಡಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆ, ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಕ್ಷೇತ್ರ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಹಾಗೂ ಗದಗ ಜಿಲ್ಲೆಯ ರೋಣ ಕ್ಷೇತ್ರಕ್ಕೆ ಸರ್ಕಾರದಿಂದ ಒಟ್ಟು 16.40 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ.

ಕರ್ನಾಟಕಕ್ಕೆ ಶಿಫಾರಸ್ಸು ಮಾಡಲಾಗಿದ್ದ 5495 ಕೋಟಿ ರೂ. ವಿಶೇಷ ಅನುದಾನ ಇದುವರೆಗೆ ಕೇಂದ್ರ ನೀಡಿಲ್ಲ. ಇನ್ನು ಬರ ಪರಿಹಾರಕ್ಕಾಗಿ ಮನವಿ ಸಲ್ಲಿಸಿ ತಿಂಗಳುಗಳು ಸರಿದವು. ಗೃಹಮಂತ್ರಿಗಳ ಅಧ್ಯಕ್ಷತೆಯ ಹೈಪವರ್‌ ಕಮಿಟಿಯೇ ಅದಕ್ಕೆ ಅನುಮೋದನೆ ಕೊಡ್ಬೇಕು. ಆದರೆ ಗೃಹಮಂತ್ರಿಗಳಾದ ತಾವು ಇದುವರೆಗೆ ಸಭೆ ಕರೆದಿಲ್ಲ. ಪರಿಹಾರವೂ ಬಂದಿಲ್ಲ.

ಇದನ್ನೂ ಓದಿ: ಕನ್ನಡಿಗರಿಗೆ ಕಂಪನಿಗಳಲ್ಲಿ ಉದ್ಯೋಗ ಮೀಸಲಾತಿಗಾಗಿ ಮುಂದಿನ ಹೋರಾಟ: ಕರವೇ ನಾರಾಯಣಗೌಡ

ಇತ್ತ ಕನ್ನಡಿಗರ ಅನ್ನಭಾಗ್ಯಕ್ಕೆ ಅಕ್ಕಿ ಕೊಡಲಾಗದು ಎಂದಿದ್ದ ಕೇಂದ್ರ, ಈಗ ಅದೇ ಅಕ್ಕಿಯನ್ನು ಭಾರತ್‌ ಬ್ರಾಂಡ್‌ ಹೆಸರಲ್ಲಿ ಚುನಾವಣಾ ಪ್ರಚಾರಕ್ಕಾಗಿ ಮಾರುತ್ತಿದೆ. ಅಮಿತ್ ಶಾ ಅವರೇ, ಕನ್ನಡಿಗರ ಹಸಿವು ಹಸಿವಲ್ಲವೇ? ಹೇಳಿ ಶಾ, ಕನ್ನಡಿಗರ ಮೇಲೆ ಬಿಜೆಪಿಗೆ ಯಾಕಿಷ್ಟು ತಾತ್ಸಾರ? ಅಂತಾ ಪ್ರಶ್ನೆ ಮಾಡಿದ್ದಾರೆ.

‘ಎಸ್ಸಿ, ಎಸ್ಟಿ 11,144 ಕೋಟಿ ರೂ. ಅನುದಾನ ದುರ್ಬಳಕೆ’

ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳು ಕಳೆದಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮಂಜೂರಾದ 11,144 ಕೋಟಿ ರೂ. ಅನುದಾನವನ್ನು ಬೇರೆ ಕಡೆ ವರ್ಗಾಯಿಸಿ ದುರ್ಬಳಕೆ ಮಾಡಿಕೊಂಡಿದ್ದನ್ನು ಖಂಡಿಸಿ ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕರೆಯನ್ವಯ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಲಿದೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ತಿಳಿಸಿದ್ದರು.

ಇದನ್ನೂ ಓದಿ: ಲೂಟಿಗಳಿಂದ ಖಜಾನೆ ಖಾಲಿಯಾಗಿದೆ, ಗ್ಯಾರಂಟಿ ಯೋಜನೆಗಳಿಂದಲ್ಲ: ಹೆಚ್ ಡಿ ಕುಮಾರಸ್ವಾಮಿ

ಬಿಜೆಪಿ ಶಾಸಕರ ವಿರೋಧದ ನಡುವೆಯೂ ನಿರ್ಣಯ ಓದಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 68,200 ಕೋಟಿ ರೂಪಾಯಿ ತೆರಿಗೆ ನಷ್ಟ ಆಗಿದೆ ಎಂದು ಆರೋಪಿಸಿದರು. ಜೊತೆಗೆ ಕೇಂದ್ರದಿಂದ ಬರಬೇಕಾದ ಅನುದಾನ ತೆರಿಗೆ ಪಾಲು ಹಾಗೂ ಬರದ ಅಂಕಿ ಅಂಶ ಕುರಿತು ನಿರ್ಣಯ ಮಂಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:20 pm, Fri, 23 February 24