ಕಾವೇರಿ ನೀರು ಸಂಕಷ್ಟ: ದೆಹಲಿ ಸಭೆಯಲ್ಲಿ ಮಹತ್ವದ ತೀರ್ಮಾನ, ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಹೇಳಿದ್ದಿಷ್ಟು

ಕಾವೇರಿ ನದಿ ನೀರು ಬಿಡುಗಡೆ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ದೆಹಲಿಯ ತಾಜ್ ಹೋಟೆಲ್ ನಲ್ಲಿ ಇಂದು(ಸೆ.20) ಕರ್ನಾಟಕದ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರ ಜತೆ ಸಭೆ ಮಾಡಿದ್ದು, ಸಭೆಯಲ್ಲಿ ಮುಂದಿನ ನಡೆ ಬಗ್ಗೆ ಮಹತ್ವದ ಸಮಾಲೋಚನೆ ನಡೆಸಿದ್ದಾರೆ. ಇನ್ನು ಸಭೆ ಮುಗಿದ ಬಳಿಕ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಅದು ಈ ಕೆಳಗಿನಂತಿದೆ.

ಕಾವೇರಿ ನೀರು ಸಂಕಷ್ಟ: ದೆಹಲಿ ಸಭೆಯಲ್ಲಿ ಮಹತ್ವದ ತೀರ್ಮಾನ, ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಹೇಳಿದ್ದಿಷ್ಟು
ಮುಖ್ಯಮಂತ್ರಿ ಸಿದ್ದರಾಮಯ್ಯ
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: ರಮೇಶ್ ಬಿ. ಜವಳಗೇರಾ

Updated on:Sep 20, 2023 | 11:29 AM

ನವದೆಹಲಿ, (ಸೆಪ್ಟೆಂಬರ್ 20): ಕಾವೇರಿ ನೀರು ಸಂಕಷ್ಟ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ದೆಹಲಿಯ ತಾಜ್ ಹೋಟೆಲ್ ನಲ್ಲಿ ಇಂದು(ಸೆ.20) ಕರ್ನಾಟಕದ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರ ಜತೆ ಸಮಾಲೋಚನೆ ನಡೆಸಿದರು. ರಾಜ್ಯದಲ್ಲಿ ಕುಡಿಯುವ ನೀರು ಮತ್ತು ರೈತರಿಗೆ ಅಭಾವ ಇರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣೆ ಪ್ರಾಧಿಕಾರವು (CWMA) ಅದೇಶಿರುವುದರಿಂದ ಉಂಟಾಗಿರುವ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಅಲ್ಲದೇ ಕಾವೇರಿ ನದಿ ನೀರು ನಿರ್ವಹಣ ಪ್ರಾಧಿಕಾರದ ಆದೇಶಕ್ಕೆ ತಡೆ ನೀಡುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಲು ತೀರ್ಮಾನಿಸಲಾಗಿದೆ.

ಇನ್ನು ಸಭೆ  ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್, ಕಾವೇರಿ ನೀರು ವಿಚಾರವಾಗಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಗಿದೆ. ಸಭೆಯಲ್ಲಿ ಎಲ್ಲ ಪಕ್ಷದ ಸಂಸದರು, ಜನಪ್ರತಿನಿಧಿಗಳು ಭಾಗಿಯಾಗಿದ್ದು, ಎಲ್ಲರೂ ಒಗ್ಗಟ್ಟು ಪ್ರದರ್ಶಿಸಲು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜಕೀಯ ಮರೆತು ಎಲ್ಲರೂ ಒಗ್ಗಟ್ಟಾಗಿದ್ದೇವೆ. ಇಂದು ಸಂಜೆ 4 ಗಂಟೆಗೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಲು ಎಲ್ಲರೂ ಒಮ್ಮತದಿಂದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.

ಸಿದ್ದರಾಮಯ್ಯ ಹೇಳಿದ್ದಿಷ್ಟು

ಇನ್ನು ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಸಭೆಯಲ್ಲಿ ರಾಜ್ಯದ ಎಲ್ಲ ಪಕ್ಷದ ಸಂಸದರು, ಕೇಂದ್ರ ಸಚಿವರು ಭಾಗಿಯಾಗಿದ್ದರು. ಅನ್ಯ ಕೆಲಸ ಹಿನ್ನೆಲೆ ವಿತ್ತ ಸಚಿವೆ ನಿರ್ಮಲಾ ಸಭೆಗೆ ಬಂದಿರಲಿಲ್ಲ. ರಾಜ್ಯದಲ್ಲಿ ಮಳೆ ಕೊರತೆಯಿಂದ ಡ್ಯಾಮ್​ಗಳಲ್ಲಿ ನೀರು ಇಲ್ಲ. 123 ವರ್ಷಗಳಲ್ಲಿ ಎಂದೂ ಇಷ್ಟು ಮಳೆ ಕೊರತೆ ಆಗಿರಲಿಲ್ಲ. ರಾಜ್ಯದ ಕಾವೇರಿ ನದಿ ನೀರು ವಿಚಾರದಲ್ಲಿ ಸಂಕಷ್ಟ ಸೂತ್ರ ಅಗತ್ಯ. ಸಂಕಷ್ಟದ ಸೂತ್ರ ಏನು ಎನ್ದುನುವು ತಯಾರಿಯಾಗಿಲ್ಲ. ಇದು ದುರದುಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು.

ಸಂಕಷ್ಟ ಸೂತ್ರ ಸಿದ್ದವಾಗದೇ ಇರುವುದರಿಂದ ಕಾವೇರಿ ನೀರು ಹಂಚಿಕೆ ಎನ್ನುವುದು ನಮ್ಮ ರಾಜ್ಯಕ್ಕೆ ಕ್ಲಿಷ್ಟಕರವಾಗಿ ಪರಿಣಮಿಸಿದೆ. ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ. ಬಿಡಲು ನಮ್ಮಲ್ಲಿ ನೀರೇ ಇಲ್ಲ. ನಮಗೆ ಈಗ ಕುಡಿಯುವ ನೀರಿಗೆ 33 ಟಿಎಂಸಿ, ಬೆಳೆ ರಕ್ಷಣೆಗೆ 70 ಟಿಎಂಸಿ, ಕೈಗಾರಿಕೆಗಳಿಗೆ 3 ಟಿಎಂಸಿ ಸೇರಿ ಒಟ್ಟು 106 ಟಿಎಂಸಿ ನೀರು ನಮಗೆ ಅನಿವಾರ್ಯ. ಈಗ ನಮ್ಮ ಬಳಿ ಇರುವುದು 53 ಟಿಎಂಸಿ ನೀರು ಮಾತ್ರ. ಹೀಗಾಗಿ ತಮಿಳುನಾಡಿಗೆ ಬಿಡಲು ನೀರೇ ಇಲ್ಲ. ನಮಗೆ ಆಗಸ್ಟ್ ಬಳಿಕ ಮಳೆ ಬರಲ್ಲ. ತಮಿಳುನಾಡಿಗೆ ಆಗಸ್ಟ್ ಬಳಿಕದ ಮಳೆ ಬರುತ್ತದೆ. ಅಲ್ಲಿ ಅಂತರ್ಜಲ ಕೂಡ ಹೆಚ್ಚಿದೆ. ಆದ್ದರಿಂದ ನಾವು ಹೆಚ್ಚು ಸಂಕಷ್ಟದಲ್ಲಿದ್ದೇವೆ. ಈ ಪರಿಸ್ಥಿತಿಯನ್ನು ನಮ್ಮ ಕಾನೂನು ತಂಡ ಮತ್ತು ತಜ್ಞ ಹಾಗೂ ಅಧಿಕಾರಿಗಳ ತಂಡ CWMC ಎದುರು ಸಮರ್ಥವಾಗಿ ವಾದ ಮಂಡಿಸಿದ್ದಾರೆ ಎಂದರು.

ಕರ್ನಾಟಕದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:23 am, Wed, 20 September 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ