AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2024: ವೃದ್ಧರಿಗೆ ಅನ್ನ ಸುವಿಧಾ ಘೋಷಿಸಿದ ಸಿದ್ದರಾಮಯ್ಯ: ಮನೆ ಬಾಗಿಲಿಗೆ ಬರಲಿದೆ ಆಹಾರ ಧಾನ್ಯ

Anna Suvidha in Karnataka Budget: 80 ವರ್ಷ ಮೇಲ್ಪಟ್ಟ ವೃದ್ಧ, ವೃದ್ಧೆಯರು ಮಾತ್ರ ಇರುವ ಮನೆಗಳನ್ನು ಗಮನದಲ್ಲಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ ಕರ್ನಾಟಕ ಬಜೆಟ್​​ನಲ್ಲಿ ಮಹತ್ವದ ಯೋಜನೆ ಘೋಷಣೆ ಮಾಡಿದ್ದಾರೆ. ಅನ್ನ ಸುವಿಧಾ ಹೆಸರಿನ ಈ ಹೊಸ ಯೋಜನೆಯು 80 ವರ್ಷ ಮೇಲ್ಪಟ್ಟ ವೃದ್ಧ, ವೃದ್ಧೆಯರು ಮಾತ್ರ ಇರುವ ಮನೆಗಳ ಬಾಗಿಲಿಗೆ ಆಹಾರ ಧಾನ್ಯವನ್ನು ತಲುಪಿಸಲು ನೆರವಾಗಲಿದೆ.

Karnataka Budget 2024: ವೃದ್ಧರಿಗೆ ಅನ್ನ ಸುವಿಧಾ ಘೋಷಿಸಿದ ಸಿದ್ದರಾಮಯ್ಯ: ಮನೆ ಬಾಗಿಲಿಗೆ ಬರಲಿದೆ ಆಹಾರ ಧಾನ್ಯ
ವೃದ್ಧರಿಗೆ ಅನ್ನ ಸುವಿಧಾ ಘೋಷಿಸಿದ ಸಿದ್ದರಾಮಯ್ಯ: ಮನೆ ಬಾಗಿಲಿಗೆ ಬರಲಿದೆ ಆಹಾರ ಧಾನ್ಯ
Ganapathi Sharma
|

Updated on: Feb 16, 2024 | 12:47 PM

Share

ಬೆಂಗಳೂರು, ಫೆಬ್ರವರಿ 16: ಮನೆಯಿಂದ ಹೊರ ಹೋಗಿ ದಿನಬಳಕೆಯ ಸಾಮಗ್ರಿ ಖರೀದಿಸಲು ಕಷ್ಟವಾಗುವ ವೃದ್ಧರನ್ನು ಗಮನದಲ್ಲಿಟ್ಟುಕೊಂಡು ಸಿಎಂ ಸಿದ್ದರಾಮಯ್ಯ  (Siddaramaiah) ಅವರು ಬಜೆಟ್​​ನಲ್ಲಿ (Karnataka Budget) ಮಹತ್ವದ ಘೋಷಣೆ ಮಾಡಿದ್ದಾರೆ. 80 ವರ್ಷ ಮೇಲ್ಪಟ್ಟ ವಯಸ್ಸಿನವರೇ ಇರುವ ಮನೆಗಳಿಗೆ ಆಹಾರ ಧಾನ್ಯ ವಿತರಣೆ ಮಾಡುವ ಅನ್ನ ಸುವಿಧಾ (Anna Suvidha) ಯೋಜನೆಯನ್ನು ಅವರು ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ. ಹಸಿವು ಮುಕ್ತ ಕರ್ನಾಟಕವೇ ನಮ್ಮ ಆಶಯ. ಸಾಮಾಜಿಕ ಭದ್ರತೆಯ ಕಳಕಳಿಯೊಂದಿಗೆ ಈ ಯೋಜನೆ ಘೋಷಣೆ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಅನ್ನ ಸುವಿಧಾ ಯೋಜನೆಯು ಹೋಮ್ ಡೆಲಿವರಿ ಆ್ಯಪ್ ಮೂಲಕ ಜಾರಿಗೆ ತರಲಾಗುವುದು. ಈ ಯೋಜನೆ ಮೂಲಕ 80 ವರ್ಷ ವಯಸ್ಸು ದಾಟಿದ ವೃದ್ಧರ ಅಥವಾ ವೃದ್ಧೆಯರು ಮಾತ್ರ ಇರುವ ಮನೆಗಳಿಗೆ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತದೆ.

ಅನ್ನಭಾಗ್ಯ ಯೋಜನೆಯಡಿ 2024ರ ಜನವರಿ ಅಂತ್ಯದ ವರೆಗೆ 4.02 ಕೋಟಿ ಫಲಾನುಭವಿಗಳಿಗೆ 4,595 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ ಎಂದೂ ಸಿಎಂ ಬಜೆಟ್​​ನಲ್ಲಿ ತಿಳಿಸಿದರು.

ವಲಸೆ ಕಾರ್ಮಿಕರಿಗೂ ಭರ್ಜರಿ ಕೊಡುಗೆ

10 ಜಿಲ್ಲೆಗಳಲ್ಲಿ ವಲಸೆ ನಿರ್ಮಾಣ ಕಾರ್ಮಿಕರಿಗೆ ವಸತಿ ಸಮುಚ್ಚಯ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ. ವಲಸೆ ಕಾರ್ಮಿಕರಿಗೆ ತಾತ್ಕಾಲಿಕ ವಸತಿ ಸಮುಚ್ಚಯಕ್ಕಾಗಿ 100 ಕೋಟಿ ರೂ. ಅನುದಾನ ನೀಡಲಾಗುವುದು. ಕೊಳಗೇರಿ ನಿವಾಸಿಗಳಿಗೆ ಶೀಘ್ರದಲ್ಲೇ 48,796 ಮನೆಗಳ ಹಸ್ತಾಂತರ ಮಾಡಲಾಗುವುದು. ಕಾರ್ಮಿಕರಿಗೆ ಇಎಸ್​ಐ ಯೋಜನೆಯಡಿ ಸೂಪರ್​ಸ್ಪೆಷಾಲಿಟಿ ಸೇವೆಗೆ 313 ಕೋಟಿ ರೂ. ಅನುದಾನ ಮೀಸಲು ಇಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್, ಗ್ರ್ಯಾಚುಯಿಟಿ: ಬಜೆಟ್​​ನಲ್ಲಿ ಸಿಎಂ ಘೋಷಣೆ

ಬಜೆಟ್​​ನಲ್ಲಿ ಕಾರ್ಮಿಕರಿಗೆ ಇನ್ನೂ ಏನೇನೆಲ್ಲ ಘೋಷಣೆ?

ಆಶಾದೀಪ ಯೋಜನೆಯಡಿ ಅಪ್ರೆಂಟಿಸ್ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಸೌಲಭ್ಯ ವಿಸ್ತರಣೆ ಮೂಲಕ ಶಿಷ್ಯವೇತನ ಅವಧಿ ಒಂದು ವರ್ಷಕ್ಕೆ ಹೆಚ್ಚಳ. ಖಾಯಂ ನೇಮಕಾತಿ ಮಾಡಿಕೊಂಡಲ್ಲಿ ವೇತನ ಮರುಪಾವತಿ ಅವಧಿ ಎರಡು ವರ್ಷಕ್ಕೆ ಹೆಚ್ಚಳ ಹಾಗೂ ವೇತನದ ಗರಿಷ್ಠ ಮಿತಿ 7,000 ರೂ. ಗಳಿಗೆ ಹೆಚ್ಚಳ.

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಮೂಲಕ ಸಾರಿಗೆ ವಾಹನಗಳ ಕಾರ್ಮಿಕರಿಗೆ ಭದ್ರತಾ ಮತ್ತು ಕಲ್ಯಾಣ ಕಾರ್ಯಕ್ರಮಗಳ ಜಾರಿ

ಇಎಸ್ಐ ಯೋಜನೆಯಡಿ ಒಟ್ಟಾರೆ 311 ಕೋಟಿ ರೂ. ವೆಚ್ಚದಲ್ಲಿ ವಿವಿಧ ಸೇವೆ ಹಾಗೂ ಸೌಲಭ್ಯಗಳ ವಿಸ್ತರಣೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ