Gruha Lakshmi Scheme: ಗೃಹ ಲಕ್ಷ್ಮೀ ಯೋಜನೆ; ಷರತ್ತು, ನಿಯಮಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ

ರಾಜ್ಯದ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡುದಾರರ ಪ್ರತಿಯೊಂದು ಕುಟುಂಬದ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ವರ್ಗಾವಣೆ ಮಾಡಲಾಗುವುದು. ಆಗಸ್ಟ್ 15ರಿಂದ ಈ ಯೋಜನೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದರು.

Gruha Lakshmi Scheme: ಗೃಹ ಲಕ್ಷ್ಮೀ ಯೋಜನೆ; ಷರತ್ತು, ನಿಯಮಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ
ಗೃಹ ಲಕ್ಷ್ಮೀ ಯೋಜನೆ
Follow us
Ganapathi Sharma
|

Updated on:Jun 02, 2023 | 3:55 PM

ಬೆಂಗಳೂರು: ರಾಜ್ಯದ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡುದಾರರ (BPL And APL Card) ಪ್ರತಿಯೊಂದು ಕುಟುಂಬದ ಯಜಮಾನಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ವರ್ಗಾವಣೆ ಮಾಡಲಾಗುವುದು. ಆಗಸ್ಟ್ 15ರಿಂದ ಗೃಹ ಲಕ್ಷ್ಮೀ (Gruha Lakshmi Scheme) ಯೋಜನೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಘೋಷಿಸಿದರು. ಸಚಿವ ಸಂಪುಟ ಸಭೆಯ ಬಳಿಕ  ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಯೋಜನೆ ಘೋಷಣೆ ಮಾಡಿದರು. ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಆದರೆ, ಇದಕ್ಕೆ ಬ್ಯಾಂಕ್ ಖಾತೆ, ಆಧಾರ್ ಕಾರ್ಡ್​ ಒದಗಿಸಬೇಕಾಗುತ್ತದೆ. ಮನೆಯ ಯಜಮಾನಿ ಯಾರು ಎಂಬುದರ ಮಾಹಿತಿಯನ್ನೂ ಒದಗಿಸಬೇಕಾಗುತ್ತದೆ. ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ ತಿಂಗಳಿಗೆ 2000 ವರ್ಗಾವಣೆ ಮಾಡುತ್ತೇವೆ ಎಂದು ನಾವು ಹೇಳಿದ್ದೆವು. ಹೀಗಾಗಿ ಯಜಮಾನಿಯ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದರು.

ಗೃಹ ಲಕ್ಷ್ಮೀ ಯೋಜನೆ ಮುಖ್ಯಾಂಶಗಳು

  • ಜೂನ್ 15ರಿಂದ ಜುಲೈ 15ರ ಒಳಗೆ ಅರ್ಜಿ ನೀಡಬೇಕು.
  • ಆನ್​ಲೈನ್ ಮೂಲಕ ಅರ್ಜಿಗಳನ್ನು ತಲುಪಿಸಬೇಕು.
  • ಜುಲೈ 15ರಿಂದ ಆಗಸ್ಟ್ 15 ರ ಒಳಗೆ ಅರ್ಜಿಗಳನ್ನು ಪರಿಶೀಲಿಸಿ ಆಗಸ್ಟ್ 15ರಂದು ಯೋಜನೆ ಜಾರಿಗೊಳಿಸುತ್ತೇವೆ.
  • ಅರ್ಜಿಯಲ್ಲಿ ಕೊಟ್ಟ ಮಾಹಿತಿಯ ಆಧಾರದಲ್ಲಿ ಯೋಜನೆ ಜಾರಿಗೊಳಿಸಲಾಗುವುದು
  • ಪರಿಶೀಲನೆ ಪ್ರಕ್ರಿಯೆಗೆ ಸಮಯ ತೆಗೆದುಕೊಳ್ಳುವುದರಿಂದ ಈ ತಿಂಗಳಿನಿಂದಲೇ ಜಾರಿಗೆ ತರಲಾಗದು

ಇದನ್ನೂ ಓದಿ: Karnataka Guarantee Schemes: 5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ: ಕಂಡೀಷನ್​ಗಳೇನು? ಇಲ್ಲಿದೆ ವಿವರ

ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನ ನೀಡಿದ ಐದು ಭರವಸೆಗಳಲ್ಲಿ ಗೃಹ ಲಕ್ಷ್ಮೀ ಯೋಜನೆಯೂ ಒಂದು. 2023 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಭಾರಿ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಮರಳಿತು.

5 ಗ್ಯಾರಂಟಿಗಳ ಜಾರಿಗೆ ಯಾವುದೇ ಗೊಂದಲವಿಲ್ಲದಂತೆ ಪರಿಹರಿಸಲು ಪ್ರತ್ಯೇಕ ಮಾರ್ಗಸೂಚಿಯನ್ನು ಸರ್ಕಾರ ಪ್ರಕಟಿಸಲಿದೆ. ಗೃಹಲಕ್ಷ್ಮೀ, ಗೃಹಜ್ಯೋತಿ, ಯುವನಿಧಿ, ಶಕ್ತಿ, ಅನ್ನಭಾಗ್ಯಕ್ಕೆ ಪ್ರತ್ಯೇಕವಾಗಿ ಮಾರ್ಗಸೂಚಿ ಪ್ರಕಟಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:09 pm, Fri, 2 June 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್