ಮುಡಾ ಹಗರಣ ಸಂಕಷ್ಟದ ನಡುವೆ ವರುಣಾ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಬಿಗ್ ಗಿಫ್ಟ್

ಮುಡಾ ಹಗರಣ ಸಂಬಂಧ ಒಂದೆಡೆ ಜಾರಿ ನಿರ್ದೇಶನಾಲಯ ತನಿಖೆ ಚುರುಕುಗೊಳಿಸಿದೆ. ಮೈಸೂರಿನ ಮುಡಾ ಕಚೇರಿ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಇಡಿ ಅಧಿಕಾರಿಗಳು ಕೊಂಡೊಯ್ದಿದ್ದಾರೆ. ಈ ಮಧ್ಯೆ, ಸಿಎಂ ಸಿದ್ದರಾಮಯ್ಯ ಸ್ವಕ್ಷೇತ್ರ ವರುಣಾಕ್ಕೆ ಭರ್ಜರಿ ಕೊಡುಗೆ ಘೋಷಣೆ ಮಾಡಿದ್ದಾರೆ.

ಮುಡಾ ಹಗರಣ ಸಂಕಷ್ಟದ ನಡುವೆ ವರುಣಾ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಬಿಗ್ ಗಿಫ್ಟ್
ಸಿದ್ದರಾಮಯ್ಯ
Edited By:

Updated on: Oct 21, 2024 | 4:48 PM

ಮೈಸೂರು, ಅಕ್ಟೋಬರ್ 21: ಮುಡಾ ಹಗರಣದ ಸಂಕಷ್ಟ ಎದುರಿಸುತ್ತಿರುವ ಮಧ್ಯೆಯೇ ಸಿಎಂ ಸಿದ್ದರಾಮಯ್ಯ (Siddaramaiah) ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಭರ್ಜರಿ ಉಡುಗೊರೆ ಘೋಷಣೆ ಮಾಡಿದ್ದಾರೆ. ಸಿದ್ದರಾಮಯ್ಯ ಸ್ವಕ್ಷೇತ್ರಕ್ಕೆ 486.98 ಕೋಟಿ ರೂಪಾಯಿ ಹಣ ಘೋಷಣೆ ಮಾಡಿದ್ದು, 313 ಕಾಮಗಾರಿಗಳಿಗೆ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಟಿ.ನರಸೀಪುರ-ನಂಜನಗೂಡು ರಸ್ತೆಯ ತಾಯೂರು ಗೇಟ್ ಬಳಿ ಮಂಗಳವಾರ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಮೈಸೂರು ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಇಲಾಖೆಗಳಿಂದ 2024-25ನೇ ಸಾಲಿಗೆ ಸರ್ಕಾರ ನೀಡಿರುವ ಅನುದಾನದ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಕಟ್ಟಡಗಳ ಉದ್ಘಾಟನೆ ವಿವರ ಹೀಗಿದೆ.

  • 471.20 ಕೋಟಿ ರೂ. ಅಂದಾಜು ಮೊತ್ತದ ಕಾಮಗಾರಿಗಳ ಶಂಕುಸ್ಥಾಪನೆ
  • 19.78 ಕೋಟಿ ರೂ. ವೆಚ್ಚದ ಕಟ್ಟಡಗಳ ಉದ್ಘಾಟನೆ
  • 10.83 ಕೋಟಿ ರೂ. ಅಂದಾಜು ಮೊತ್ತ – ವಿವಿಧ ಇಲಾಖೆಗಳ ಸವಲತ್ತು ವಿತರಣೆ.
  • 2615 ಒಟ್ಟು ಫಲಾನುಭವಿಗಳು
  • 501.81 ಕೋಟಿ ರೂ. ಮೌಲ್ಯದ ವಿವಿಧ ಇಲಾಖೆಗಳ ಕಾಮಗಾರಿಗಳ ಶಂಕುಸ್ಥಾಪನೆ, ಕಟ್ಟಡಗಳ ಉದ್ಘಾಟನೆ ಮತ್ತು ಫಲಾನುಭವಿಗಳ ಸವಲತ್ತು ವಿತರಣೆ.

ಇದನ್ನೂ ಓದಿ: ಮುಡಾ ಮೇಲಿನ ಇಡಿ ದಾಳಿ ಅಂತ್ಯ: ಸತತ 29 ಗಂಟೆ ಶೋಧ, ಮಹತ್ವದ ದಾಖಲೆ ಸಂಗ್ರಹ

ಇನ್ನು ಸಣ್ಣ ನೀರಾವರಿ ಇಲಾಖೆಯಲ್ಲಿ ಶಂಕುಸ್ಥಾಪನೆಗೆ ಸಿದ್ಧವಿರುವ ಕಾಮಗಾರಿಗಳ ಅಂದಾಜು ಮೊತ್ತ 3914.99 ಲಕ್ಷ ರೂ., ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಅಂದಾಜು ಮೊತ್ತ 12330.00 ಲಕ್ಷ ರೂ.,

ಇದನ್ನೂ ಓದಿ: ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಭೂ ಅಕ್ರಮ ಆರೋಪ: ರಾಜ್ಯಪಾಲರಿಗೆ ದೂರು ನೀಡಲು ಆರ್​ಟಿಐ ಕಾರ್ಯಕರ್ತ ಸಿದ್ಧತೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಶಂಕುಸ್ಥಾಪನೆಗೆ ಸಿದ್ಧವಿರುವ ಕಾಮಗಾರಿಗಳ ಅಂದಾಜು ಮೊತ್ತ 1300.00 ಲಕ್ಷ ರೂ. ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಅಡಿಯಲ್ಲಿ ಅಂದಾಜು ಮೊತ್ತ ರೂ.2000.00 ಲಕ್ಷ ರೂ. ನೀಡಲಾಗಿದೆ. ಇದೇ ರೀತಿಯಾಗಿ ಇತರೆ ಇಲಾಖೆಗಳಿಗೂ ಅನುದಾನ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:08 pm, Mon, 21 October 24

ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
Loading...
Unable to load recommendations.
Follow Us