ಮಹತ್ವದ ಘೋಷಣೆ: ಎಸ್​ಸಿ, ಎಸ್​ಟಿ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್​ ನೀಡಿದ ಸಿಎಂ ಸಿದ್ದರಾಮಯ್ಯ

IAS, IRS ಸೇರಿ ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆ ನಡೆಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ. ಇಂದು (ಜುಲೈ 05) ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ಪರಿಷತ್ ನ ಸಭೆ ನಡೆಸಿದ್ದು, ಈ ಸಭೆಯಲ್ಲಿ ಕೆಲ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ. ಇನ್ನು SCSP/TSP ಪರಿಷತ್ ಸಭೆಯ ಕೊನೆಯಲ್ಲಿ ಮುಖ್ಯಮಂತ್ರಿಗಳು ಇಲಾಖೆಯ ಅಧಿಕಾರಿಗಳಿಗೆ ಕೊಟ್ಟ ಸ್ಪಷ್ಟ ಸೂಚನೆಗಳು ಏನೇನು ಎನ್ನುವ ವಿವರ ಇಲ್ಲಿದೆ.

ಮಹತ್ವದ ಘೋಷಣೆ: ಎಸ್​ಸಿ, ಎಸ್​ಟಿ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್​ ನೀಡಿದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us
|

Updated on:Jul 05, 2024 | 2:44 PM

ಬೆಂಗಳೂರು, (ಜುಲೈ 05): IAS, IRS ಸೇರಿ ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ದೆಹಲಿಯಲ್ಲಿ sC/st ಮಕ್ಕಳಿಗೆ ಉತ್ತಮ ಹಾಸ್ಟೆಲ್ ಕಟ್ಟಿಸುವ ಜೊತೆಗೆ ತಿಂಗಳಿಗೆ 15 ಸಾವಿರ ರೂಪಾಯಿ ಕೊಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ಸದ್ಯ 10 ಸಾವಿರ ಕೊಡಲಾಗುತ್ತಿದ್ದು, ಇದೀಗ ಅದನ್ನು 5 ಸಾವಿರ ಹೆಚ್ಚಿಸಲಾಗುವುದು. ಈ ಸಂಬಂಧ ತಕ್ಷಣ ಆದೇಶ ಹೊರಡಿಸಲಾಗುವುದು ಸಿ.ಎಂ.ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಇಂದು (ಜುಲೈ 05) ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ಪರಿಷತ್ ನ ಸಭೆ ನಡೆಸಿದ್ದ, SCSP/TSP ಪರಿಷತ್ ಸಭೆಯ ಕೊನೆಯಲ್ಲಿ ಮುಖ್ಯಮಂತ್ರಿಗಳು ಇಲಾಖೆಯ ಅಧಿಕಾರಿಗಳಿಗೆ ಕೊಟ್ಟ ಸ್ಪಷ್ಟ ಸೂಚನೆಗಳನ್ನು ನೀಡಿದ್ದು, ಅವು ಈ ಕೆಳಗಿನಂತಿವೆ.

ಇದನ್ನೂ ಓದಿ: 10 ಲಕ್ಷ ವಿದ್ಯಾರ್ಥಿಗಳಿಗೆ ಮೆಟಾ ಮಾಡಲಿದೆ ಡಿಜಿಟಲ್ ಸುರಕ್ಷತೆಯ ಪಾಠ: ಒಪ್ಪಂದಕ್ಕೆ ಸಹಿ ಹಾಕಿದ ಮೊದಲ ರಾಜ್ಯ ಕರ್ನಾಟಕ

ಸಭೆಯಲ್ಲಿ ಅಧಿಕಾರಿಗಳಿಗೆ ನೀಡಿದ ಸೂಚನೆಗಳು

 • 2024-25 ನೇ ಸಾಲಿಗೆ scsp/tsp ನಲ್ಲಿ ಲಭ್ಯ ಇರುವ ಹಣವನ್ನು ಖರ್ಚು ಮಾಡಲು action plan ಅನುಮೋದನೆ ಮಾಡಲಾಗಿದೆ.
 • ರಾಜ್ಯದ ಅಭಿವೃದ್ಧಿ ಆಯವ್ಯಯ ಈ ಸಾಲಿನಲ್ಲಿ ಒಟ್ಟು 160000 ಕೋಟಿ. ಇದರಲ್ಲಿ scsp/tsp ಗೆ ಸುಮಾರು 39121.46 ಕೋಟಿ scsp/tsp ಅಡಿ 34 ಇಲಾಖೆಗಳಿಗೆ ಹಂಚಿಕೆ ಮಾಡಿರುವ ಹಣ action plan ನಲ್ಲಿದೆ.
 • ಹಿಂದಿನ ವರ್ಷ 97.81 ಕೋಟಿ ಉಳಿತಾಯವಾಗಿದೆ. ಈ ಹಣವೂ ಸೇರಿದೆ.
 • ಕಳೆದ ವರ್ಷಕ್ಕಿಂತ ಈ ವರ್ಷ 3900 ಕೋಟಿ ಹೆಚ್ಚಾಗಿದೆ. 3900 ಕೋಟಿ ಹೆಚ್ಚುವರಿ ಹಣ ಈ ವರ್ಷ ನೀಡಿದ್ದೇವೆ. ಈ ಹಣ ಇಲಾಖೆಗಳಿಗೆ ಹಂಚಿಕೆಯಾಗಿದ್ದು ಇದರ ಸದುಪಯೋಗ ಆಗಬೇಕು. ಸಮಾಜ ಕಲ್ಯಾಣ ಇಲಾಖೆ, ನಿಗಮಗಳು ಕಾಯ್ದೆಯ ಉದ್ಸೇಶಕ್ಕೆ ಪೂರಕವಾಗಿ ಕೆಲಸ ಮಾಡಬೇಕು.
 • ಶೇ100 ಸಾಧನೆ ಆಗಬೇಕು. ಇದರಲ್ಲಿ ನಿರ್ಲಕ್ಷ್ಯ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ.
 • ಕಾಯ್ದೆಯಲ್ಲಿದ್ದ 7D ರದ್ದು ಮಾಡಿದ ರೀತಿಯಲ್ಲೇ 7C ಕೂಡ ರದ್ದು ಮಾಡಬೇಕು ಎನ್ನುವ ಶಾಸಕ ನರೇಂದ್ರಸ್ವಾಮಿ ಅವರು ಸಲಹೆ ನೀಡಿದ್ದಾರೆ. ಈ ಸಲಹೆಯ ಸಾಧಕ ಬಾದಕಗಳನ್ನು ಪರಿಶೀಲಿಸಲಾಗುವುದು ಎಂದರು.
 • ಖಾಲಿ ಇರುವ ಹೋಬಳಿಗಳಲ್ಲೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಆರಂಭಿಸಲೇಬೇಕು.
 • ಆಯಾ ಹೋಬಳಿಯ ವಿದ್ಯಾರ್ಥಿಗಳಿಗೆ ಶೇ75 ರಷ್ಟು ಸೀಟು, ಉಳಿದ ಶೇ25 ರಷ್ಟು ಸೀಟುಗಳನ್ನು ಇತರೆ ಪ್ರದೇಶದ ವಿಧ್ಯಾರ್ಥಿಗಳಿಗೆ ವಸತಿ ಶಾಲೆಗಳಲ್ಲಿ ನೀಡಬೇಕು.
 • ಸರ್ಕಾರಿ ಶಾಲೆಗಿಂತ ಕ್ರೈಸ್ ನಲ್ಲಿ ಓದಿರುವ ಬಡ ವಿಧ್ಯಾರ್ಥಿನಿ ಕ್ರೈಸ್ ಶಾಲೆಯಲ್ಲಿ ಓದಿ ಮೊದಲ ರ್ಯಾಂಕ್ ಪಡೆದಿದ್ದಾರೆ. ಇದನ್ನು ಪ್ರೋತ್ಸಾಹಿಸುತ್ತಲೇ ಇತರೆ ನ್ಯೂನ್ಯತೆಗಳನ್ನು ಸರಿಪಡಿಸಲು ಅಧಿಕಾರಿಗಳು ಶ್ರಮಿಸಬೇಕು.
 • ಬಜೆಟ್ ನಲ್ಲಿ ನಾವು ಘೋಷಿಸಿರುವ ಎಲ್ಲಾ ಕಾರ್ಯಕ್ರಮಗಳನ್ನೂ ನೀವು ಜಾರಿ ಮಾಡಲೇಬೇಕು.
 • ಹಿಂದಿನ ಬಿಜೆಪಿ ಸರ್ಕಾರ ಮೂರು ವರ್ಷ ಕ್ರೈಸ್ ಮಕ್ಕಳಿಗೆ ಬಾತ್ ರೂಮ್ ಕಿಟ್ ಕೊಡ್ಲೇ ಇಲ್ಲ. ಈಗ ನಾವು ಸರಿಯಾಗಿ ವಿತರಿಸುತ್ತಿದ್ದೇವೆ.
 • ಆಶ್ರಮ ಶಾಲೆಗಳಲ್ಲಿ ರಾತ್ರಿ ವೇಳೆ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಾರೆ ಎನ್ನುವುದು ಕಂಡುಬಂದಿದೆ. ಇದಕ್ಕೆ ಅವಕಾಶ ಆಗಬಾರದು. ಮನೆಗೆ ಕರೆದೊಯ್ಯದಂತೆ ಪೋಷಕರಿಗೆ ಒಪ್ಪಿಸಬೇಕು.
 • ಹಳ್ಳಿಗಾಡು, ಬಡ ಕುಟುಂಬಗಳಿಗೆ ಸರ್ಕಾರದಿಂದ ಬರುವ ಸವಲತ್ತುಗಳನ್ನು ಸರಿಯಾಗಿ ತಲುಪಿಸಬೇಕು. ಇದರಲ್ಲಿ ವಿಫಲರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
 • ನಾವು ಕೊಟ್ಟ ಅನುದಾನ ಆಯಾ ಉದ್ದೇಶಗಳಿಗೇ ಬಳಕೆಯಾಗಬೇಕು. ಇದರಲ್ಲಿ ಯಾವುದೇ ರಾಜಿ ಇಲ್ಲದಂತೆ ಆಯಾ ಸಮುದಾಯಗಳಿಗೆ ಸವಲತ್ತು ತಲುಪಿಸಬೇಕು.
 • ಹಾಸ್ಟೆಲ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸದಿದ್ದರೆ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗುವುದು.
 • 10 ವರ್ಷದಲ್ಲಿ ಈ ಯೋಜನೆಯಿಂದ ಸಮುದಾಯದ ಮೇಲೆ ಬೀರಿರುವ ಪರಿಣಾಮ, ಸಮುದಾಯಕ್ಕೆ ಯೋಜನೆ ತಲುಪಿರುವ ಪ್ರಮಾಣದ ಬಗ್ಗೆ, ಹಾಗೂ ಅವರ ಆರ್ಥಿಕ‌ ಸ್ಥಿತಿ ಪ್ರಗತಿ ಆಗಿರುವ ಬಗ್ಗೆ ಮೌಲ್ಯಮಾಪನ ಮಾಡಲಾಗುವುದು.
 •  3 ತಿಂಗಳ ಬಳಿಕ ಮತ್ತೊಮ್ಮೆ ಪರಿಷತ್ ಸಭೆ ಕರೆಯುತ್ತೇವೆ. ಯಾರಿಂದ ಲೋಪ ಆಗಿದೆ ಎಂದು ಗೊತ್ತಾದರೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು.
 • IAS, IRS ಮತ್ತಿತರೆ ಸ್ಪರ್ಧಾತ್ಮಕ ಪರೀಕ್ಷೆ ಸಿದ್ದತೆಗಳಿಗಾಗಿ ದೆಹಲಿಯಲ್ಲಿ sC/st ಮಕ್ಕಳಿಗೆ ಉತ್ತಮ ಹಾಸ್ಟೆಲ್ ಕಟ್ಟಿಸುವ ಜೊತೆಗೆ ತಿಂಗಳಿಗೆ 15 ಸಾವಿರ ರೂಪಾಯಿ ಕೊಡಲಾಗುವುದು (ಸದ್ಯ 10 ಸಾವಿರ ಕೊಡಲಾಗುತ್ತಿದ್ದು 5 ಸಾವಿರ ಹೆಚ್ಚಿಸಲಾಗುವುದು. ಈ ಸಂಬಂಧ ತಕ್ಷಣ ಆದೇಶ ಹೊರಡಿಸಲಾಗುವುದು) ದೆಹಲಿ ಹಾಸ್ಟೆಲ್ ನಲ್ಲಿ ಹೈಟೆಕ್ ಲೈಬ್ರೆರಿ ಮಾಡಲಾಗುವುದು. ಅಲ್ಲಿ ಎಲ್ಲಾ ರೀತಿಯ ಪುಸ್ತಕಗಳು ಸಿಗಬೇಕು.
 • ಈ ವರ್ಷದ action plan ಅನ್ನು ಈ ಸಭೆಯಲ್ಲಿ ಶಾಸಕರು/ಸಚಿವರು/ ಅಧಿಕಾರಿಗಳು ನೀಡಿದ ಸಲಹೆಗಳ ಸಮೇತ ಜಾರಿ ಆಗಬೇಕು ಎನ್ನುವ ಸೂಚನೆಯನ್ನು ಮುಖ್ಯಮಂತ್ರಿಗಳು ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:40 pm, Fri, 5 July 24

ತಾಜಾ ಸುದ್ದಿ
ಶಿರೂರು ದುರಂತ ನಡೆದು ವಾರ ಕಳೆದರೂ ಪತ್ತೆಯಾಗದ ಇನ್ನೂ ಮೂರು ದೇಹಗಳು
ಶಿರೂರು ದುರಂತ ನಡೆದು ವಾರ ಕಳೆದರೂ ಪತ್ತೆಯಾಗದ ಇನ್ನೂ ಮೂರು ದೇಹಗಳು
ಪ್ರೀಮಿಯಂ ಸ್ಮಾರ್ಟ್​ವಾಚ್ ಲಾಂಚ್ ಮಾಡಿದ ಸ್ಯಾಮ್​ಸಂಗ್
ಪ್ರೀಮಿಯಂ ಸ್ಮಾರ್ಟ್​ವಾಚ್ ಲಾಂಚ್ ಮಾಡಿದ ಸ್ಯಾಮ್​ಸಂಗ್
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಗ್ರಹಿಸಿ ವಿರೋಧ ಪಕ್ಷದ ಸದಸ್ಯರಿಂದ ಸಭಾತ್ಯಾಗ
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಗ್ರಹಿಸಿ ವಿರೋಧ ಪಕ್ಷದ ಸದಸ್ಯರಿಂದ ಸಭಾತ್ಯಾಗ
ಪ್ರೀತಿ ಪ್ರಾರಂಭದಲ್ಲೇ ಸೋನಲ್-ತರುಣ್ ಪ್ರೀ-ವೆಡ್ಡಿಂಗ್ ವಿಡಿಯೋ
ಪ್ರೀತಿ ಪ್ರಾರಂಭದಲ್ಲೇ ಸೋನಲ್-ತರುಣ್ ಪ್ರೀ-ವೆಡ್ಡಿಂಗ್ ವಿಡಿಯೋ
ವಿಧಾನಮಂಡಲ ಅಧಿವೇಶನ ಪುನರಾರಂಭ; ಇಲ್ಲಿ ಲೈವ್ ವೀಕ್ಷಿಸಿ
ವಿಧಾನಮಂಡಲ ಅಧಿವೇಶನ ಪುನರಾರಂಭ; ಇಲ್ಲಿ ಲೈವ್ ವೀಕ್ಷಿಸಿ
ಬೆಂಗಳೂರು: ಡಬಲ್ ಡೆಕ್ಕರ್ ಫ್ಲೈಓವರ್ ಮೇಲೆ ಬಿ ದಯಾನಂದ್​ ಬುಲೆಟ್ ರೈಡ್​​
ಬೆಂಗಳೂರು: ಡಬಲ್ ಡೆಕ್ಕರ್ ಫ್ಲೈಓವರ್ ಮೇಲೆ ಬಿ ದಯಾನಂದ್​ ಬುಲೆಟ್ ರೈಡ್​​
ಬಾಸ್ ಎಂದು ಹೋಗಿದ್ದೇ ತಪ್ಪಾಯ್ತು; ಪ್ರದೋಶ್ ಸಿಕ್ಕಿಬಿದ್ದಿದ್ದು ಹೀಗೆ
ಬಾಸ್ ಎಂದು ಹೋಗಿದ್ದೇ ತಪ್ಪಾಯ್ತು; ಪ್ರದೋಶ್ ಸಿಕ್ಕಿಬಿದ್ದಿದ್ದು ಹೀಗೆ
Daily Devotional: ಶತ್ರು ಕಾಟದಿಂದ ಪಾರಾಗಲು ಗೃಹಿಣಿಯರು ಈ ಕಾರ್ಯ ಮಾಡಿ
Daily Devotional: ಶತ್ರು ಕಾಟದಿಂದ ಪಾರಾಗಲು ಗೃಹಿಣಿಯರು ಈ ಕಾರ್ಯ ಮಾಡಿ
Nithya Bhavishya: ಈ ರಾಶಿಯವರಿಗೆ ಮೋಸ ಆಗುವ ಸಾಧ್ಯತೆ ಹೆಚ್ಚಿದೆ, ಎಚ್ಚರ
Nithya Bhavishya: ಈ ರಾಶಿಯವರಿಗೆ ಮೋಸ ಆಗುವ ಸಾಧ್ಯತೆ ಹೆಚ್ಚಿದೆ, ಎಚ್ಚರ
ಚಾಮರಾಜನಗರ: ಸೆಲ್ಫಿ ಶೋಕಿಗೆ ಡೆಡ್ಲಿ ಸ್ಪಾಟ್ ತಲುಪಿ ಪ್ರವಾಸಿಗರ ಹುಚ್ಚಾಟ!
ಚಾಮರಾಜನಗರ: ಸೆಲ್ಫಿ ಶೋಕಿಗೆ ಡೆಡ್ಲಿ ಸ್ಪಾಟ್ ತಲುಪಿ ಪ್ರವಾಸಿಗರ ಹುಚ್ಚಾಟ!