ಬೆಳಗಾವಿ (ಡಿಸೆಂಬರ್ 15): ಸಹಕಾರಿ ಬ್ಯಾಂಕ್‌ಗಳ (cooperative bank) ಸಾಲ ಮೇಲಿನ ಬಡ್ಡಿ ಮನ್ನಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಘೋಷಿಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದ ಕೊನೆ ದಿನವಾದ ಇಂದು (ಡಿಸೆಂಬರ್ 15) ಈ ಘೋಷಣೆ ಮಾಡಿದ್ದು. ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಸಂಬಂಧಿಸಿದಂತೆ ಅವಧಿಯೊಳಗೆ ಸಾಲ ಮರುಪಾವತಿ ಮಾಡಿದವರ ಬಡ್ಡಿ ಮನ್ನಾ ಆಗಲಿದೆ ಎಂದು ಮಾಹಿತಿ ನೀಡಿದರು.
ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ ಉತ್ತರ ನೀಡುತ್ತಿರುವ ವೇಳೆ ಸಿಎಂ ಸಿದ್ದರಾಮಯ್ಯ ಹಲವು ಘೋಷಣೆಗಳನ್ನು ಮಾಡಿದರು. ಅದರಲ್ಲಿ ಬಡ್ಡಿ ಮನ್ನಾ ಸಹ ಒಂದು. ಹಾಗಾದ್ರೆ ಅಧಿವೇಶನದ ಕೊನೆ ದಿನವಾದ ಇಂದು ಸಿಎಂ ಏನೆಲ್ಲಾ ಘೋಷಣೆಗಳನ್ನು ಮಾಡಿದ್ದಾರೆ ಎನ್ನುವ ವಿವರ ಈ ಕೆಳಗಿನಂತಿದೆ.
ಇವುಗಳಲ್ಲಿ ಬಡ್ಡಿ ಮನ್ನಾ ಪ್ರಮುಖವಾಗಿದೆ. ಆದ್ರ ಇದಕ್ಕೆ ವಿರೋಧ ಪಕ್ಷದ ನಾಯಕ ಆರ್ ಶೋಕ್ ಟೀಕಿಸಿದ್ದು, ರೈತರು ಅವಧಿಯೊಳಗೆ ಸಾಲ ಕಟ್ಟಲ್ಲ, ನೀವು ಬಡ್ಡಿ ಮನ್ನಾ ಮಾಡಲ್ಲ. ರೈತರ ಎರಡು ಲಕ್ಷ ರೂಪಾಯಿವರೆಗಿನ ಸಾಲ ಮನ್ನಾ ಮಾಡಬೇಕು/ ಬರದಿಂದ ಕಂಗೆಟ್ಟ ರೈತರಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಿ ಎಂದು ಆಗ್ರಹಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:05 pm, Fri, 15 December 23