‘ನನ್ನ ತೆರಿಗೆ ನನ್ನ ಹಕ್ಕು’ಅಭಿಯಾನ: ಸಾರ್ವಜನಿಕರ ಪ್ರಶ್ನೆಗಳಿಗೆ ಅಂಕಿ-ಸಂಖ್ಯೆ ಸಮೇತ ಉತ್ತರಿಸಿದ ಸಿಎಂ

‘ನನ್ನ ತೆರಿಗೆ ನನ್ನ ಹಕ್ಕು’ ಅಭಿಯಾನದ ಬಗ್ಗೆ ಸಿಎಂ ಸಿದ್ದರಾಮಯ್ಯ ಇಂದು ಟ್ವಿಟರ್​ ಲೈವ್​ನಲ್ಲಿ ಮಾತನಾಡಿದ್ದು, ಜನಸಾಮಾನ್ಯರ ಮೇಲೆ ತೆರಿಗೆ ಪ್ರಮಾಣ ಹೆಚ್ಚಳ ಮಾಡಿದ್ದಾರೆ. ಸಾಮಾನ್ಯರಿಂದ ತೆರಿಗೆ ವಸೂಲಿ ಹೆಚ್ಚು ಮಾಡುತ್ತಲೇ ಹೋಗುತ್ತಿದ್ದಾರೆ. ಕೇಂದ್ರ ಸರ್ಕಾರಕ್ಕೆ ಒಂದು ರೂ. ತೆರಿಗೆಯನ್ನೂ ಕೊಡುವುದಿಲ್ಲ. ಎಲ್ಲವನ್ನೂ ರಾಜ್ಯವೇ ಇಟ್ಟುಕೊಳ್ಳುತ್ತೇವೆ ಎಂದು ಇದೇ ಮೋದಿ ಹೇಳಿದ್ದರು. ಆದರೆ ಮೋದಿ ಪ್ರಧಾನಿ ಆದ ಮೇಲೆ ಉಲ್ಟಾ ಮಾತಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ. 

‘ನನ್ನ ತೆರಿಗೆ ನನ್ನ ಹಕ್ಕು’ಅಭಿಯಾನ: ಸಾರ್ವಜನಿಕರ ಪ್ರಶ್ನೆಗಳಿಗೆ ಅಂಕಿ-ಸಂಖ್ಯೆ ಸಮೇತ ಉತ್ತರಿಸಿದ ಸಿಎಂ
ಸಿಎಂ ಸಿದ್ದರಾಮಯ್ಯ
Follow us
Anil Kalkere
| Updated By: ಗಂಗಾಧರ​ ಬ. ಸಾಬೋಜಿ

Updated on: Feb 14, 2024 | 9:25 PM

ಬೆಂಗಳೂರು, ಫೆಬ್ರವರಿ 14: ಇಂದು ಟ್ವಿಟರ್​ ಲೈವ್​ನಲ್ಲಿ ‘ನನ್ನ ತೆರಿಗೆ ನನ್ನ ಹಕ್ಕು’ ಅಭಿಯಾನದ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ (Siddaramaiah) ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಕಾರ್ಪೊರೇಟ್ ಕಂಪನಿಗಳ ಮೇಲಿನ ತೆರಿಗೆ ಪ್ರಮಾಣ ಶೇ.22.5ಕ್ಕೆ ಇಳಿಸಿದರು. ಜನಸಾಮಾನ್ಯರ ಮೇಲೆ ತೆರಿಗೆ ಪ್ರಮಾಣ ಹೆಚ್ಚಳ ಮಾಡಿದ್ದಾರೆ. ಸಾಮಾನ್ಯರಿಂದ ತೆರಿಗೆ ವಸೂಲಿ ಹೆಚ್ಚು ಮಾಡುತ್ತಲೇ ಹೋಗುತ್ತಿದ್ದಾರೆ. ನಮ್ಮ ಸಂಸದರು ದೆಹಲಿಯಲ್ಲಿ ಈ ಅನ್ಯಾಯವನ್ನು ಪ್ರಶ್ನಿಸುವುದೇ ಇಲ್ಲ. ಸಾಮಾನ್ಯ ಜನರ ಖರ್ಚಿನ ಮೇಲೆ ಹಾಕುವ GST ಪ್ರಮಾಣ ಕಡಿಮೆಮಾಡಿ. ಶ್ರೀಮಂತರು ಬಳಸುವ ಐಷಾರಾಮಿ ವಸ್ತುಗಳ ಮೇಲೆ GST ಹೆಚ್ಚಿಸಬೇಕು. ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಅರ್ಥ ಮಾಡಿಕೊಳ್ಳಬೇಕು. ಮೋದಿ ಗುಜರಾತ್ ಸಿಎಂ ಆಗಿದ್ದಾಗ 50% ತೆರಿಗೆ ಪಾಲು ಕೊಡಿ ಎಂದಿದ್ದರು.

ರಾಜ್ಯಗಳು ಭಿಕ್ಷುಕರಾ ಎಂದು ನರೇಂದ್ರ ಮೋದಿಯವರು ಕೇಳಿದ್ದರು. ಕೇಂದ್ರ ಸರ್ಕಾರಕ್ಕೆ ಒಂದು ರೂಪಾಯಿ ತೆರಿಗೆಯನ್ನೂ ಕೊಡುವುದಿಲ್ಲ, ಎಲ್ಲವನ್ನೂ ರಾಜ್ಯವೇ ಇಟ್ಟುಕೊಳ್ಳುತ್ತೇವೆ ಎಂದು ಇದೇ ಮೋದಿ ಹೇಳಿದ್ದರು. ನರೇಂದ್ರ ಮೋದಿ ಪ್ರಧಾನಿ ಆದ ಮೇಲೆ ಉಲ್ಟಾ ಮಾತಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಕಳೆದ 10 ವರ್ಷಗಳ ಪ್ರಧಾನಿ ಮೋದಿ ಆಡಳಿತವನ್ನು ‘ವಿನಾಶ ಕಾಲ‘ ಎಂದ ಸಿಎಂ ಸಿದ್ದರಾಮಯ್ಯ

ಅಭಿಯಾನ ಕುರಿತು ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಸದನದಲ್ಲಿ ಪದೇಪದೆ ಹೇಳಿದ್ದೆ. ಸಿಎಂ ಆಗಿದ್ದ ಯಡಿಯೂರಪ್ಪ, ಬೊಮ್ಮಾಯಿ ರಾಜ್ಯದ ಪಾಲನ್ನು ತರಲು ಯತ್ನಿಸಲಿಲ್ಲ. ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಪ್ರಶ್ನಿಸದೆ ಅನ್ಯಾಯವನ್ನು ಸಮರ್ಥಿಸುತ್ತಿದ್ದಾರೆ. ಇವರು ರಾಜ್ಯವನ್ನು ಪ್ರತಿನಿಧಿಸುತ್ತಿದ್ದಾರೆ ಎನ್ನುವುದನ್ನೇ ಮರೆತು ಮಾತಾಡಿದ್ದಾರೆ ಎಂದಿದ್ದಾರೆ.

ಕನ್ನಡದ ಮೇಲೆ ಇತರೆ ಭಾಷೆಯ ಹೇರಿಕೆ ಸಹಿಸಲು ಸಾಧ್ಯವಿಲ್ಲ ಸಿಎಂ ಸಿದ್ದರಾಮಯ್ಯ 

ನಾವು ಪ್ರಜಾಪ್ರಭುತ್ವ, ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡಿದ್ದೇವೆ. ಹೀಗಿದ್ದಾಗ ಚೀನಾ ರೀತಿಯ ಕೇಂದ್ರದ ಏಕಸ್ವಾಮ್ಯ ಮತ್ತು ಅಮೆರಿಕದ ಅಧ್ಯಕ್ಷೀಯ ಮಾದರಿಯ ಆಡಳಿತವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ನಾವು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆ ಪರವಾಗಿ ಇರುವವರು ಎಂದು ಸ್ಪಷ್ಟಪಡಿಸಿದರು. ಕನ್ನಡ ಬಾವುಟ ಮತ್ತು ದ್ವಿಭಾಷಾ ನೀತಿಯ ವಿಚಾರದಲ್ಲೂ ಜನ ಎಚ್ಚೆತ್ತುಕೊಂಡು ಹೋರಾಟ ಮಾಡುವ ಅಗತ್ಯವಿದೆ. ಭಾಷೆಯಾಗಿ ಯವ ಭಾಷೆಯನ್ನಾದರೂ ಕಲಿಯಬಹುದು ಆದರೆ ಕನ್ನಡದ ಮೇಲೆ ಹಿಂದಿ ಅಥವಾ ಇತರೆ ಭಾಷೆಯ ಹೇರಿಕೆ, ಸಾಂಸ್ಕೃತಿಕ ಹೇರಿಕೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕಕ್ಕೆ ಕಾಲಿಡುವ ಮೊದಲು ಈ ಪ್ರಶ್ನೆಗೆ ಉತ್ತರಿಸಿರುವಿರಾ? ಅಮಿತ್ ಶಾಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

ನಾವು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡ ಮೇಲೆ ಚೀನಾ ಮಾದರಿ ಏಕಸ್ವಾಮ್ಯವನ್ನು ಸಹಿಸಲು ಅಮೆರಿಕದ ಅಧ್ಯಕ್ಷೀಯ ಮಾದರಿ ಆಡಳಿತವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಅತಿ ಹೆಚ್ಚು ತೆರಿಗೆ ಕಟ್ಟುವ ನಮ್ಮ ರಾಜ್ಯಕ್ಕೆ ಅನ್ಯಾಯ ಆಗದಂತೆ ತಡೆಯಲು ಸಂವಿಧಾನ ತಿದ್ದುಪಡಿ ಮಾಡಿ ಸೆಸ್ ಮತ್ತು ಸರ್ ಚಾರ್ಜ್​ನಲ್ಲೂ ನಮಗೆ ಪಾಲು ಕೊಡಬೇಕೆಂದು ಒತ್ತಾಯಿಸಿದ್ದಾರೆ. ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಮಂತ್ರಿಗಳು-ನಮ್ಮ‌ ಸಂಸದರು ನಮಗಾಗುತ್ತಿರುವ ಅನ್ಯಾಯದ ವಿರುದ್ಧ ಬಾಯಿ ಬಿಡದೆ ಅನ್ಯಾಯವನ್ನು ಸಮರ್ಥಿಸುತ್ತಿದ್ದರೆ ರಾಜ್ಯದ ಭವಿಷ್ಯದ ಗತಿ ಏನೆಂದು ಪ್ರಶ್ನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು