AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಸಚಿವರ ನೇಮಕ

ರಾಜ್ಯ ಸರ್ಕಾರದ ಸಾಧನೆ, ಕಾರ್ಯವೈಖರಿ ಮತ್ತು ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಸಚಿವರಾದ ದಿನೇಶ್ ಗುಂಡೂರಾವ್, ಕೃಷ್ಣಭೈರೇಗೌಡ, ಪ್ರಿಯಾಂಕ್​ ಖರ್ಗೆ ಈಶ್ವರ ಖಂಡ್ರೆ, ಸಂತೋಷ್ ಲಾಡ್ ಅವರನ್ನು ಸರ್ಕಾರದ ವಕ್ತಾರರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಮಿಸಿ ಆದೇಶ ಹೊರಡಿಸಿದ್ದಾರೆ.

ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಸಚಿವರ ನೇಮಕ
ಸಚಿವರಾದ ಕೃಷ್ಣಭೈರೇಗೌಡ, ಪ್ರಿಯಾಂಕ್​ ಖರ್ಗೆ, ಈಶ್ವರ್​ ಖಂಡ್ರೆ, ಗುಂಡೂರಾವ್​​, ಸಂತೋಷ್​ ಲಾಡ್​
Anil Kalkere
| Edited By: |

Updated on:Mar 13, 2024 | 1:12 PM

Share

ಬೆಂಗಳೂರು, ಮಾರ್ಚ್​ 13: ರಾಜ್ಯ ಸರ್ಕಾರದ (Karnataka Government) ಸಾಧನೆ, ಕಾರ್ಯವೈಖರಿ ಮತ್ತು ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಐವರು ಪ್ರಭಾವಿ ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಆದೇಶ ಹೊರಡಿಸಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundurao), ಕಂದಾಯ ಇಲಾಖೆ ಕೃಷ್ಣಭೈರೇಗೌಡ (Krishna Byre Gowda), ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್​ ಖರ್ಗೆ (Priyank Kharge), ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ (Eshwar Khandre) ಮತ್ತು ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಅವರನ್ನು ಸರ್ಕಾರದ ವಕ್ತಾರರಾಗಿ ನೇಮಿಸಲಾಗಿದೆ. ಈ ಐವರು ಸಚಿವರಿಗೆ ದಾಖಲೆಗಳು ಹಾಗೂ ಮಾಹಿತಿಗಳನ್ನು ಕಾಲ ಕಾಲಕ್ಕೆ ಒದಗಿಸುವಂತೆ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ.

ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ವಿರೋಧ ಪಕ್ಷಗಳು ಮಾಡುವ ಆರೋಪಗಳಿಗೆ ಸೂಕ್ತ ರೀತಿಯಲ್ಲಿ ಉತ್ತರ ನೀಡಲು ಈ ಐವರಿಗೆ ಜವಾಬ್ದಾರಿ ನೀಡಲಾಗಿದೆ. ವಿರೋಧ ಪಕ್ಷಗಳು ಸರ್ಕಾರದ ಮೇಲೆ ಮಾಡುವ ಆರೋಪಗಳಿ ಮತ್ತು ಟೀಕೆಗಳಿಗೆ ಈ ಐವರು ಸಚಿವರು ಸದನದ ಒಳಗೆ ಮತ್ತು ಹೊರಗೆ ಎರಡೂ ಕಡೆ ಸೂಕ್ತ ರೀತಿಯಲ್ಲಿ ಪ್ರತ್ಯುತ್ತರ ನೀಡುತ್ತಲೇ ಬಂದಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಅಡ್ಜಸ್ಟ್‌ಮೆಂಟ್‌ ರಾಜಕಾರಣ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಗರಂ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಈ ಐವರು ಸಚಿವರು ಸಾಕಷ್ಟು ಆಕ್ಟಿವ್​ ಆಗಿ ಇದ್ದಾರೆ. ಬಿಜೆಪಿಯ ಮತೀಯ ಹೇಳಿಕೆಗಳಿಗೆ ಈ ಸಚಿವರು ತಕ್ಕ ಪ್ರತ್ಯುತ್ತರ ನೀಡುತ್ತಾ ಬಂದಿದ್ದಾರೆ. ಮತ್ತು ಈ ಐವರು ಸಚಿವರು ಸಿದ್ದರಾಮಯ್ಯ ಅವರ ಆಪ್ತ ಬಣದಲ್ಲೂ ಗುರುತಿಸಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:05 pm, Wed, 13 March 24

Follow Us
Anil Kalkere
Anil Kalkere
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!