AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಪ್ಯಾಕ್ಟ್ ಚೆಕ್ ಘಟಕ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ

Fact Check Unit; ಸುಳ್ಳು ಸುದ್ದಿಗಳ ಮತ್ತು ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್​​ಗಳ ಪತ್ತೆ, ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂರು ಹಂತಗಳ ಕ್ರಮಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ ನೀಡಿದರು.

ಕರ್ನಾಟಕದಲ್ಲಿ ಪ್ಯಾಕ್ಟ್ ಚೆಕ್ ಘಟಕ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದನೆ
ಸಿದ್ದರಾಮಯ್ಯ (ಸಂಗ್ರಹ ಚಿತ್ರ)
TV9 Web
| Updated By: Ganapathi Sharma|

Updated on:Aug 21, 2023 | 8:07 PM

Share

ಬೆಂಗಳೂರು, ಆಗಸ್ಟ್ 21: ಸುಳ್ಳು ಸುದ್ದಿಗಳು ಪ್ರಜಾಪ್ರಭುತ್ವಕ್ಕೆ ಬೆದರಿಕೆಯೊಡ್ಡುವುದರ ಜತೆಗೆ ಸಮಾಜದ ಧ್ರುವೀಕರಣಕ್ಕೆ ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅಭಿಪ್ರಾಯಪಟ್ಟರು. ಜತೆಗೆ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ (Fact Check) ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ ನಿಯಮ ಮತ್ತು ಕಾನೂನು ರೂಪಿಸುವ ಪ್ರಯತ್ನಕ್ಕೆ ಅನುಮೋದನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸೈಬರ್ ಸುರಕ್ಷತೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಅವರು

ಸುಳ್ಳು ಸುದ್ದಿಗಳ ಮತ್ತು ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್​​ಗಳ ಪತ್ತೆ, ಸುಳ್ಳು ಸುದ್ದಿ ಪ್ರಸಾರಕ್ಕೆ ತಡೆ, ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವ ಮೂರು ಹಂತಗಳ ಕ್ರಮಕ್ಕೆ ಅನುಮೋದನೆ ನೀಡಿದರು.

ರಾಜ್ಯದಲ್ಲಿ ಪ್ಯಾಕ್ಟ್ ಚೆಕ್ ಘಟಕ ಸ್ಥಾಪನೆ

ಪ್ಯಾಕ್ಟ್ ಚೆಕ್ ಘಟಕವು ಮೇಲುಸ್ತುವಾರಿ ಸಮಿತಿ, ಎಸ್​​ಒಪಿಸಿ ಪರಿಶೀಲನೆ, ನೋಡಲ್ ಅಧಿಕಾರಿಗಳ ನೇಮಕ ಸೇರಿದಂತೆ ಸತ್ಯ ತಪಾಸಣೆ ತಂಡ ವಿಶ್ಲೇಷಣ ತಂಡವನ್ನು ಒಳಗೊಳ್ಳಲಿದೆ. ಹಾಗೂ ಸಾಮರ್ಥ್ಯ ವರ್ಧನೆ ತಂಡ ರಚನೆ ಮಾಡಿ ವ್ಯವಸ್ಥಿತವಾಗಿ ತಂತ್ರಜ್ಞಾನ ಬಳಕೆ ಮಾಡಬಹುದು ಎಂದು ಸಭೆಯಲ್ಲಿ ವಿವರಿಸಲಾಯಿತು.

ಬೆಂಗಳೂರು ಪೊಲೀಸ್ ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಿದ್ದರೂ, ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಅಗತ್ಯವಿದೆ. ಎಐ ಬಳಕೆ ಮಾಡಿ ಡೀಪ್ ಫೇಕ್ ಕೂಡ ಉಪಯೋಗ ಮಾಡಲಾಗುತ್ತಿದೆ. ಇದು ಸುಳ್ಳು ಸುದ್ದಿ ಹರಡುವವರಿಗೆ ಅನುಕೂಲ ವಾಗುತ್ತದೆ ಎಂದು ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು.

ಫೇಕ್ ಸುದ್ದಿ ಜಾಲ ಜಾಗತಿಕವಾಗಿ ಬಾಲ್ಯಾವಸ್ಥೆಯಲ್ಲಿದ್ದರೂ ಕಾಲಾಂತರದಲ್ಲಿ ವ್ಯಾಪಕವಾಗಿ ಬಳಕೆಯಾಗುವ ಸಾಧ್ಯತೆಯೂ ಇದೆ. ಸುಳ್ಳು ಸುದ್ದಿ ಬಳಕೆ ಮಾಡುವವರಿಗೆ ಶಿಕ್ಷೆ ಕೂಡ ಆಗಬೇಕು. ಈ ಸಮಿತಿ ಕೂಡಲೇ ರಚಿಸಿ ಸಾಮರ್ಥ್ಯ ಹೆಚ್ಚಿಸುವ ಕೆಲಸ ಆಗಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಅಭಿಪ್ರಾಯಪಟ್ಟರು.

ಸುಳ್ಳು ಸುದ್ದಿ ಗುರುತಿಸುವುದು, ಕಾನೂನು ಸುವ್ಯವಸ್ಥೆ ಕಾಪಾಡಲು ಇದು ಅತ್ಯಗತ್ಯ. ಆರಂಭಿಕ ಹಂತದಲ್ಲಿ ಐ.ಟಿ ಬಿಟಿ ಇಲಾಖೆ ಸಹಕರಿಸುತ್ತದೆ. ಕಾನೂನಿನ ವ್ಯಾಪ್ತಿಯಲ್ಲಿ ತರಲು ಕ್ರಮ ವಹಿಸಬೇಕು ನಂತರ ಘಟಕವು ಗೃಹ ಇಲಾಖೆಯ ವ್ಯಾಪ್ತಿಯಲ್ಲಿಯೇ ಇರುವುದು ಸೂಕ್ತ ಎಂದು ಸಚಿವ ಪ್ರಿಯಾಂಕ ಖರ್ಗೆ ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಬಿಬಿಎಂಪಿ ಕಾರ್ಯಾಚರಣೆ; ಅನಧಿಕೃತ ಬ್ಯಾನರ್​ ಅಳವಡಿಸಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷರಿಗೆ 50,000 ರೂ. ದಂಡ

ಸಚಿವರಾದ ಕೃಷ್ಣಬೈರೇಗೌಡ ಅವರು ಮಾತನಾಡಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆಯಿಂದ ಸುಳ್ಳುಸುದ್ದಿ ಹರಡುವುದನ್ನು ನಿಯಂತ್ರಿಸಿ ಇದು ಶಿಕ್ಷಾರ್ಹ ಅಪರಾಧ ಎಂದು ಜನರಿಗೆ ಮನವರಿಕೆಯಾಗಬೇಕು ಎಂದರು.

ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ರಜನೀಶ್ ಗೋಯಲ್, ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:06 pm, Mon, 21 August 23

ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಿಗ್ ಬಾಸ್​ಗೆ ಹೋಗೋಕೆ ಡಿ ಫ್ಯಾನ್ಸ್​ನ ಎದುರು ಹಾಕ್ಕೊಂಡ್ರಾ ಸೋನು ಶೆಟ್ಟಿ?
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಬಾಲ್ಯದಲ್ಲೇ ನಿಸ್ಸಾರ್ ಮನೆಯಲ್ಲಿ ಲಿಂಗ ತಂದಿಟ್ಟು ಪೂಜೆ ಮಾಡುತ್ತಿದ್ದನಂತೆ
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಮೈಸೂರಿಗೆ ಹೊರಟಿದ್ದ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಉತ್ತರಕಾಶಿಯ ಧರಾಲಿ ಪ್ರದೇಶವಿಡೀ ಕೆಸರಾವೃತ, ಸಿಎಂ ಧಾಮಿ ವೈಮಾನಿಕ ಸಮೀಕ್ಷೆ
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ಕೃತಜ್ಞ ಮಗ ಸರ್ಕಾರೀ ನೌಕರ, ಕೆಎಸ್​ಅರ್​ಟಿಸಿಯಲ್ಲಿ ಚಾಲಕ!
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ವಾರಾಣಸಿಯಲ್ಲಿ ಪ್ರವಾಹ; ಮನೆ, ಅಂಗಡಿ, ಆಸ್ಪತ್ರೆಗೆ ನುಗ್ಗಿದ ಗಂಗಾ ನದಿ ನೀರು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ದರ್ಶನ್ ಅಭಿಮಾನಿಗಳನ್ನು ಕೊಚ್ಚೆಗೆ ಹೋಲಿಸಿದ ಮಾಡೆಲ್ ಸೋನು
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ವಿಕ್ಟೋರಿಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬಿಸಿನೀರಲ್ಲ ತಣ್ಣೀರೂ ಸಿಗಲ್ಲ!
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​
ಕೆ.ಆರ್ ಪುರ ಮೇಟ್ರೋ ಸ್ಟೇಷನ್ ಬಳಿ ಕೆಲಕಾಲ ಆತಂಕ ಸೃಷ್ಟಿದ ಸೂಟ್​​​ಕೇಸ್​
ಸೆಲ್ಫಿ, ಆಟೋಗ್ರಾಫ್​ಗಾಗಿ ಸಿರಾಜ್ ಹಿಂದೆ ಬಿದ್ದ ಫ್ಯಾನ್ಸ್
ಸೆಲ್ಫಿ, ಆಟೋಗ್ರಾಫ್​ಗಾಗಿ ಸಿರಾಜ್ ಹಿಂದೆ ಬಿದ್ದ ಫ್ಯಾನ್ಸ್