ಕರ್ನಾಟಕದಲ್ಲಿ ಮಳೆ ಸ್ಥಿತಿಗತಿ ಬಗ್ಗೆ ಮುಖ್ಯಕಾರ್ಯದರ್ಶಿ ಬಳಿ ವರದಿ ಕೇಳಿದ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟದಲ್ಲಾಗುತ್ತಿರುವ ಮಳೆ ಬಗ್ಗೆ ಸರ್ಕಾರದ ಮುಖ್ಯಕಾರ್ಯದರ್ಶಿಯಿಂದ ವರದಿ ಕೇಳಿದ್ದಾರೆ.
ಬೆಂಗಳೂರು, (ಜುಲೈ 24): ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು (rain), ಹಲವೆಡೆ ಸೇತುವೆ, ಹಳ್ಳ-ಕೊಳ್ಳಗಳು, ಕರೆ-ಕಟ್ಟೆಗಳು ತುಂಬಿ ಹರಿಯುತ್ತಿವೆ. ಅದರಲ್ಲೂ ಮುಖ್ಯವಾಗಿ ಬೆಳಗಾವಿ ಸೇರಿದಂತೆ ಮಲೆನಾಡು, ಕರಾವಳಿ ಭಾಗದಲ್ಲಿ ಜನಜೀವನ ಅಸ್ತವವ್ಯಸ್ತವಾಗಿದೆ. ಇನ್ನು ಈ ಮಳೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಬಳಿ ವರದಿ ಕೇಳಿದ್ದಾರೆ. ಕೆಲವೆಡೆ ಮಳೆಯಾದರೆ ಕೆಲ ಜಿಲ್ಲೆಗಳಲ್ಲಿ ಸರಿಯಾಗಿ ಮಳೆಯಾಗಿಲ್ಲ. ಭಾರಿ ಮಳೆಯಿಂದ ಯಾವ್ಯಾವ ಜಿಲ್ಲೆಗಳಲ್ಲಿ ತೊಂದರೆಯಾಗಿದೆ? ಮಳೆಯಾಗದ ಕ್ಷೇತ್ರಗಳಲ್ಲಿ ಹೇಗಿದೆ ಪರಿಸ್ಥಿತಿ? ಈ ಬಗ್ಗೆ ವರದಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಸಿಎಸ್ ವಂದಿತಾ ಶರ್ಮಾ ಸೂಚಿಸಿದ್ದಾರೆ.
ಒಂದು ಕಡೆ ವಿಪರೀತ ಮಳೆಯಾದ್ರೆ ಇನ್ನೂ ಕೆಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲೆಗಳಲ್ಲಿ ವಾಸ್ತವಾಂಶದ ಏನಿದೆ? ಮಳೆಯಿಂದ ಎಲ್ಲಿ ಏನು ತೊಂದರೆಯಾಗಿದೆ? ಮಳೆಯಾಗದ ಕ್ಷೇತ್ರಗಳಲ್ಲಿ ಹೇಗಿದೆ ಪರಿಸ್ಥಿತಿ? ಎಷ್ಟು ಪ್ರಮಾಣದಲ್ಲಿ ಬಿತ್ತನೆ ಕಾರ್ಯವಾಗಿದೆ? ಮಳೆಯಾದ ಪ್ರದೇಶ ಮತ್ತು ಮಳೆಯಾಗದ ಪ್ರದೇಶಗಳ ಬಗ್ಗೆ ವರದಿ ಸಂಪೂರ್ಣ ವರದಿ ನಿಡುವಂತೆ ಸೂಚಿಸಿದ್ದಾರೆ.
ನಾಳೆ ಸಿದ್ದರಾಮಯ್ಯ ಹಾವೇರಿ ಜಿಲ್ಲಾ ಪ್ರವಾಸ
ಬೆಂಗಳೂರು: ಸಿದ್ದರಾಮಯ್ಯ ಅವರು ಸಿಎಂ ಆದ ಬಳಿಕ ಮೈಸೂರು ಜಿಲ್ಲೆ ಬಿಟ್ಟರೆ ಇನ್ನುಳಿದ ಜಿಲ್ಲೆಗಳಿಗೆ ಭೇಟಿ ನೀಡಿಲ್ಲ. ಗ್ಯಾರಂಟಿ ಯೋಜನೆಗಳ ಜಾರಿ ಹಾಗೂ ಬಜೆಟ್ನಲ್ಲಿ ಬ್ಯುಸಿಯಾಗಿದ್ದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಹಾವೇರಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಹೌದು…ನಾಳೆ (ಜುಲೈ 25) ಸಿದ್ದರಾಮಯ್ಯ ಅವರು ಹಾವೇರಿಗೆ ಭೇಟಿ ನೀಡಲಿದ್ದು, ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಅಲ್ಲದೇ ಬಸವರಾಜ ಬೊಮ್ಮಾಯಿ ಅವಧಿಯ ಕಾಮಗಾರಿ ಪರಿಶೀಲನೆ ಜೊತೆ ಕೊಟ್ಯಾಂತರ ರೂಪಾಯಿ ವೆಚ್ಚದ ವೈದ್ಯಕೀಯ ಕಾಲೇಜ್ ಕಾಮಗಾರಿ ಸೇರಿದಂತೆ ಜಿಲ್ಲೆಯಲ್ಲಿ ಕೈಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಸಭೆ ನಡೆಸಲಿದ್ದಾರೆ.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 2:30 pm, Mon, 24 July 23