ಕರ್ನಾಟಕದ ವಿವಿಧ ದೇವಸ್ಥಾನಗಳ ಪ್ರಾಧಿಕಾರ ರಚನೆಗೆ ಸಚಿವ ಸಂಪುಟ ಅಸ್ತು

| Updated By: ಗಂಗಾಧರ​ ಬ. ಸಾಬೋಜಿ

Updated on: Feb 15, 2024 | 9:59 PM

ಘಾಟಿ ಸುಬ್ರಹ್ಮಣ್ಯ ಮತ್ತು ಹುಲಿಯೂರುದುರ್ಗ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಸೇರಿ ವಿವಿಧ ದೇವಸ್ಥಾನಗಳ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಗ್ರೀನ್​ಸಿಗ್ನಲ್ ನೀಡಲಾಗಿದೆ. ವಿಶ್ವಕರ್ಮ ಸಮುದಾಯದ ಪ್ರತಿನಿಧಿಗಳಿಗೆ ಪ್ರಾತಿನಿಧ್ಯ ನೀಡಲು ಸಂಪುಟ ಅನುಮೋದನೆ ನೀಡಿದೆ.

ಕರ್ನಾಟಕದ ವಿವಿಧ ದೇವಸ್ಥಾನಗಳ ಪ್ರಾಧಿಕಾರ ರಚನೆಗೆ ಸಚಿವ ಸಂಪುಟ ಅಸ್ತು
ವಿಧಾನಸೌಧ
Follow us on

ಬೆಂಗಳೂರು, ಫೆಬ್ರವರಿ 15: ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಅಂತ್ಯ ಆಗಿದೆ. ಸಚಿವ ಸಂಪುಟ ಸಭೆಯಲ್ಲಿ ವಿವಿಧ ದೇವಸ್ಥಾನಗಳ ಪ್ರಾಧಿಕಾರ ರಚನೆಗೆ ಅನುಮೋದನೆ ನೀಡಲಾಗಿದೆ. ಹುಲಿಯೂರುದುರ್ಗ ದೇವಸ್ಥಾನ ಪ್ರಾಧಿಕಾರ, ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಸೇರಿ ವಿವಿಧ ದೇವಸ್ಥಾನಗಳ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕ್ಯಾಬಿನೆಟ್ ಗ್ರೀನ್ ಸಿಗ್ನಲ್ ನೀಡಿದೆ. ಮುಜರಾಯಿ ಇಲಾಖೆ ದೇವಸ್ಥಾನದ ಸಮಿತಿಗಳಲ್ಲಿ ವಿಶ್ವಕರ್ಮ ಸಮುದಾಯದ ಪ್ರತಿನಿಧಿಗಳಿಗೆ ಪ್ರಾತಿನಿಧ್ಯ ನೀಡಲು ಕ್ಯಾಬಿನೆಟ್ ಅನುಮೋದಿಸಿದೆ.

ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು 

ಕರ್ನಾಟಕದಲ್ಲಿ ಎ ದರ್ಜೆಯ 205, ಬಿ ದರ್ಜೆಯ 193 ಮತ್ತು ಸಿ ದರ್ಜೆ ಸೇರಿದಂತೆ ಒಟ್ಟು 35,000 ದೇವಾಲಯಗಳಿವೆ. ಅವುಗಳಲ್ಲಿ ಭಕ್ತರು ಭೇಟಿ ನೀಡುವ ಸಂಖ್ಯೆ ಆಧರಿಸಿ ಹಂತ ಹಂತವಾಗಿ ಪ್ರಾಧಿಕಾರವನ್ನು ರಚಿಸಲಾಗುವುದು.

ಇದನ್ನೂ ಓದಿ: ನಾಳೆ 15ನೇ ಬಜೆಟ್ ಮಂಡಿಸಲಿರುವ ಸಿದ್ದರಾಮಯ್ಯ; ಅಂತಿಮ ಕ್ಷಣದ ಸಿದ್ಧತೆಯ ಚಿತ್ರ ವೀಕ್ಷಣೆ

ಮೊದಲಿಗೆ ಅಧಿಕ ಭಕ್ತರು ಭೇಟಿ ನೀಡುವ ನಿಮಿಷಾಂಬ, ಮೇಲುಕೋಟೆ, ಹುಲಿಗೆಮ್ಮ ಸೇರಿ ಹಲವು ದೇವಾಲಯಗಳಿಗೆ ಪ್ರಾಧಿಕಾರಗಳನ್ನು ರಚನೆ ಮಾಡಲಾಗುವುದು. ಇದರಿಂದ ಆ ದೇವಾಲಯಗಳ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ರಾಮಲಿಂಗಾರೆಡ್ಡಿ ಸದನದಲ್ಲಿ ಹೇಳಿದ್ದಾರೆ.

ಇತ್ತೀಚೆಗೆ ರಾಜ್ಯದ ಖಾಸಗಿ ದೇವಾಲಯಗಳನ್ನು ಧಾರ್ಮಿಕ ದತ್ತಿ ಇಲಾಖೆಯ ಸುಪರ್ದಿಗೆ ತೆಗೆದುಕೊಳ್ಳಲು ಮುಜರಾಯಿ ಇಲಾಖೆ ಮುಂದಾಗಿತ್ತು. ಈಗಾಗಲೇ ಸಾಕಷ್ಟು ದೇವಾಲಯಗಳಿಗೆ ಮುಜರಾಯಿ ಇಲಾಖೆಯ ಅಧಿಕಾರಿಗಳು ತೆರಳಿ ನಿಮ್ಮ ದೇವಾಲಯವನ್ನು ರಾಜ್ಯ ಸರ್ಕಾರದ ಮುಜರಾಯಿ ಇಲಾಖೆ ವಶಕ್ಕೆ ಪಡೆದುಕೊಳ್ಳಲಿದೆ. ನೀವು ನಿಮ್ಮ ದೇವಾಲಯವನ್ನು ಬಿಟ್ಟು ಕೊಡಬೇಕೆಂದು ಹೇಳಲಾಗಿತ್ತು.

ಇದನ್ನೂ ಓದಿ: Karnataka Budget 2023: ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಪ್ರಾಧಿಕಾರ, ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ 100 ಕೋಟಿ ಅನುದಾನ

ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ರಾಜ್ಯದ ಎಲ್ಲಾ ಖಾಸಗಿ ದೇವಾಲಯಗಳ ಅರ್ಚಕರು ಸೇರಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ನಾವು ಯಾವುದೇ ಕಾರಣಕ್ಕೂ ನಮ್ಮ ದೇವಾಲಯಗಳನ್ನು ಮುಜರಾಯಿ ಇಲಾಖೆಗೆ ಬಿಟ್ಟು ಕೊಡುವುದಿಲ್ಲ. ನಮ್ಮ ದೇವಾಲಯಗಳನ್ನು ನಾವೇ ನಡೆಸಿಕೊಂಡು ಹೋಗುತ್ತೇವೆ ಎಂದು ತಮ್ಮ ವಾದ ಮಂಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.