ಹೈಕೋರ್ಟ್​ನಿಂದ 10 ಸಾವಿರ ದಂಡ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಿಎಂ ಸಿದ್ದರಾಮಯ್ಯ

CM Siddaramaiah: ಪ್ರತಿಭಟನೆ ವೇಳೆ ರಸ್ತೆ ತಡೆ ಮಾಡಿದ್ದ ವಿಚಾರವಾಗಿ ಕರ್ನಾಟಕ ಹೈಕೋರ್ಟ್ ವಿಧಿಸಿದ್ದ ದಂಡವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕಾನೂನುಬದ್ಧವಾಗಿ ಪ್ರತಿಭಟನೆ ನಡೆಸಿದ್ದೆವು. ಆದರೂ ಹೈಕೋರ್ಟ್​ ದಂಡ ವಿಧಿಸಿದೆ ಎಂದು ಸಿದ್ದರಾಮಯ್ಯ ಸುಪ್ರೀಂ ಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

ಹೈಕೋರ್ಟ್​ನಿಂದ 10 ಸಾವಿರ ದಂಡ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
Follow us
TV9 Web
| Updated By: Ganapathi Sharma

Updated on: Feb 14, 2024 | 2:18 PM

ಬೆಂಗಳೂರು, ಫೆಬ್ರವರಿ 14: ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ವಿಚಾರವಾಗಿ ಕರ್ನಾಟಕ ಹೈಕೋರ್ಟ್ (Karnataka High Court)​ 10 ಸಾವಿರ ರೂ. ದಂಡ ವಿಧಿಸಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸುಪ್ರೀಂ ಕೋರ್ಟ್​ನಲ್ಲಿ (Supreme Court) ಪ್ರಶ್ನಿಸಿದ್ದಾರೆ. ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಕೆಲ ನಾಯಕರಿಗೆ ದಂಡ ವಿಧಲಾಗಿತ್ತು. ಅಲ್ಲದೆ, ಮಾರ್ಚ್ 6 ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿತ್ತು.

2022ರ ಏಪ್ರಿಲ್​ನಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದ ಪ್ರಕರಣ ಅದಾಗಿತ್ತು. ಕೆಎಸ್ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಕಾಂಗ್ರೆಸ್‌ ನಾಯಕರು ವಿಧಾನಸೌಧದ ಚಲೋ ಕೈಗೊಂಡಿದ್ದರು. ಅಂದಿನ ಬಿಜೆಪಿ ಸರ್ಕಾರ ‘ಕೈ’ ನಾಯಕರ ವಿರುದ್ಧ ದೂರು ನೀಡಿತ್ತು.

ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್​ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕೆಲವು ನಾಯಕರಿಗೆ ದಂಡ ವಿಧಿಸಿತ್ತು. ಆದರೆ, ನಮ್ಮ ಪ್ರತಿಭಟನೆ ಕಾನೂನು ಬದ್ಧವಾಗಿತ್ತು ಎಂದಿರುವ ಸಿದ್ದರಾಮಯ್ಯ, ಸುಪ್ರೀಂ ಕೋರ್ಟ್​​ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

ಸಿದ್ದರಾಮಯ್ಯ ಮಾತ್ರವಲ್ಲದೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ​ ರಣದೀಪ್ ಸುರ್ಜೇವಾಲಾ, ಸಚಿವ ಎಂ.ಬಿ.ಪಾಟೀಲ್, ಸಚಿವ ರಾಮಲಿಂಗಾರೆಡ್ಡಿ ಅವರಿಗೂ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠ ಆದೇಶ ಹೊರಡಿಸಿತ್ತು.

ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವವರೆಗೆ ಆದೇಶವನ್ನು ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪರ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದ್ದರಾದರೂ ಈ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು.

ಜನಪ್ರತಿನಿಧಿಗಳಿಗೆ ಚಾಟಿ ಬೀಸಿದ್ದ ಕೋರ್ಟ್

ಜನಪ್ರತಿನಿಧಿಗಳಾದವರು ಕಾನೂನು ಪಾಲಿಸಿದರೆ ಜನರೂ ಸಹ ಕಾನೂನು ಪಾಲಿಸುತ್ತಾರೆ. ಸಾರ್ವಜನಿಕರಿಗೆ ತೊಂದರೆಯಾಗುವಂತೆ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರೆ ಜನರಿಗೆ ಕಷ್ಟವಾಗುತ್ತದೆ. ಸಿಟಿ ಲೈಫ್ ಈಸ್ ಟಾರ್ಚರ್,‌ ಪ್ರತಿಭಟನೆಗಳಿಂದ‌ ಜನರಿಗೆ ಮತ್ತಷ್ಟು ತೊಂದರೆಯಾಗುತ್ತದೆ. ಜನಪ್ರತಿನಿಧಿಯಾದ ಕಾರಣಕ್ಕೆ ರಸ್ತೆ ಅಡ್ಡಗಟ್ಟುವುದನ್ನು ಒಪ್ಪಲು ಸಾಧ್ಯವಿಲ್ಲ. ಜನ ನಾಯಕರಾದವರು ಮೊದಲು ಕಾನೂನು ಪಾಲಿಸಬೇಕು ಎಂದು ನ್ಯಾಯಾಲಯ ಚಾಟಿ ಬೀಸಿತ್ತು.

ಇದನ್ನೂ ಓದಿ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ 10 ಸಾವಿರ ದಂಡ ವಿಧಿಸಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್​ ಸೂಚನೆ

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ, ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಅವರ ರಾಜಿನಾಮೆ ಆಗ್ರಹಿಸಿ 2022ರ ಏಪ್ರಿಲ್ 14 ರಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿ ಸಿದ್ದರಾಮಯ್ಯ, ಸಚಿವ ಎಂಬಿ ಪಾಟೀಲ್​ ಸೇರಿದಂತೆ ಕಾಂಗ್ರೆಸ್​ನ ನಾಯಕರು ಮತ್ತು ಕಾರ್ಯಕರ್ತರು ಬೃಹತ್​ ಪ್ರತಿಭಟನೆ ನಡೆಸಿದ್ದರು. ಈ ವೇಳೆ ರಸ್ತೆ ತಡೆಯಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ವಾಹನ ಸಾವರರು ಪರದಾಡುವಂತಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ