AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿ ಮೀಸಲಾತಿ ಬೇಡಿಕೆ: ತಮ್ಮ ಸರ್ಕಾರದ ನಿಲುವು ಸ್ಪಷ್ಟಪಡಿಸಿದ ಸಿಎಂ

ಪಂಚಮಸಾಲಿ ಮೀಸಲು ಹೋರಾಟ ಸಮಿತಿ ಇಂದು(ಅಕ್ಟೋಬರ್ 18) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿತು. ಬಳಿಕ ಸಿಎಂ ಸಿದ್ದರಾಮಯ್ಯನವರು ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಕೂಡಲ ಸಂಗಮದ ಪಂಚಮಸಾಲಿ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದ ನಿಯೋಗದೊಂದಿಗೆ ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಸಿಎಂ ಏನೆಲ್ಲಾ ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.

ಪಂಚಮಸಾಲಿ ಮೀಸಲಾತಿ ಬೇಡಿಕೆ: ತಮ್ಮ ಸರ್ಕಾರದ ನಿಲುವು ಸ್ಪಷ್ಟಪಡಿಸಿದ ಸಿಎಂ
ರಮೇಶ್ ಬಿ. ಜವಳಗೇರಾ
|

Updated on: Oct 18, 2024 | 4:53 PM

Share

ಬೆಂಗಳೂರು, (ಅಕ್ಟೋಬರ್ 18):  ಸರ್ಕಾರ ಮೀಸಲಾತಿ ವಿಷಯದಲ್ಲಿ ಮುಕ್ತ ಮನಸ್ಸು ಹೊಂದಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುವುದು ನಮ್ಮ ಸರ್ಕಾರದ ನಿಲುವು. ಶಾಶ್ವತವಾದ ಹಿಂದುಳಿದ ವರ್ಗಗಳ ಆಯೋಗವಿದೆ. ಅದರ ಅಂತಿಮ ಶಿಫಾರಸ್ಸು ಇನ್ನೂ ನಮ್ಮ ಕೈಗೆ ತಲುಪಿಲ್ಲ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಮೀಸಲಾತಿ ಕುರಿತಾಗಿ ಅಡ್ವೊಕೇಟ್‌ ಜನರಲ್‌, ಕಾನೂನು ಇಲಾಖೆ, ತಜ್ಞರೊಂದಿಗೆ, ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಈಗಲೇ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತಾಗಿ ಶುಕ್ರವಾರ ಭೇಟಿಯಾಗಿದ್ದ ನಿಯೋಗಕ್ಕೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ನಿಲುವು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಮರುಜೀವ: ಜಯ ಮೃತ್ಯುಂಜಯ ಸ್ವಾಮೀಜಿ ಶಕ್ತಿ ಪ್ರದರ್ಶನ, ಸಿಎಂ ನಿವಾಸದಲ್ಲಿ ಸಭೆ

ಸಭೆಯ ಮುಖ್ಯಾಂಶಗಳು

  • ಪ್ರವರ್ಗ-2ಎ ಅಡಿ ಮೀಸಲಾತಿ ಒದಗಿಸುವಂತೆ ಪಂಚಮಸಾಲಿ ಲಿಂಗಾಯತ ಸಮುದಾಯದ ಬೇಡಿಕೆ ಕುರಿತು ಕಾನೂನು ಪ್ರಕಾರ, ಸಂವಿಧಾನದ ಆಶಯಕ್ಕೆ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅವರು ಹೇಳಿದರು.
  • ಸರ್ಕಾರ ಮೀಸಲಾತಿ ವಿಷಯದಲ್ಲಿ ಮುಕ್ತ ಮನಸ್ಸು ಹೊಂದಿದೆ. ನಮ್ಮ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿದೆ. ಎಲ್ಲಾ ದುರ್ಬಲ ವರ್ಗದವರಿಗೂ ನ್ಯಾಯ ದೊರೆಯಬೇಕು ಎಂಬುವುದು ನಮ್ಮ ಸರ್ಕಾರದ ನಿಲುವು.
  • ಶಾಶ್ವತವಾದ ಹಿಂದುಳಿದ ವರ್ಗಗಳ ಆಯೋಗವಿದೆ. ಅದರ ಅಂತಿಮ ಶಿಫಾರಸ್ಸು ಇನ್ನೂ ನಮ್ಮ ಕೈಗೆ ತಲುಪಿಲ್ಲ. ಚುನಾವಣೆ ನೀತಿ ಸಂಹಿತೆ ಇರುವುದರಿಂದ ಮೀಸಲಾತಿ ಕುರಿತಾಗಿ ಅಡ್ವೊಕೇಟ್‌ ಜನರಲ್‌, ಕಾನೂನು ಇಲಾಖೆ, ತಜ್ಞರೊಂದಿಗೆ, ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.

ಈಗಲೇ ಯಾವುದೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ.

  • ಸಂವಿಧಾನದ ಆಶಯದಂತೆ ಕ್ರಮ. ಯಾವುದೇ ತೀರ್ಮಾನ ಕೈಗೊಳ್ಳುವುದಿದ್ದರೂ, ಕಾನೂನು ಪ್ರಕಾರ ಪ್ರಾಮಾಣಿಕವಾಗಿ ಕೈಗೊಳ್ಳಲಾಗುವುದು.
  •  ಮೀಸಲಾತಿ ಕುರಿತು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಮುಂದೆ ಪ್ರಸ್ತಾವನೆ ಸಲ್ಲಿಸಬೇಕು, ಅದರ ಶಿಫಾರಸು ಅನ್ವಯ ಕ್ರಮ ಕೈಗೊಳ್ಳಬೇಕು ಎಂದು ಈ ಹಿಂದೆ ಪಂಚಮಸಾಲಿ ಸಮುದಾಯದ ಮುಖಂಡರು ಭೇಟಿಯಾದಾಗ ನಾನು ಸಲಹೆ ನೀಡಿದ್ದೆ. ಯಾವುದೇ ತೀರ್ಮಾನ ನ್ಯಾಯಯುತವಾಗಿ ಎಲ್ಲರಿಗೂ ಒಪ್ಪಿತವಾಗುವಂತೆ, ನ್ಯಾಯಾಲಯಕ್ಕೂ ಒಪ್ಪಿಗೆಯಾಗುವಂತಿರಬೇಕು ಎಂದರು.
  • ಹಿಂದಿನ ಸರ್ಕಾರ ನಿಮ್ಮ ಮನವಿ ಮೇರೆಗೆ 2ಸಿ ಮತ್ತು 2ಡಿ ಹೊಸ ಪ್ರವರ್ಗ ಮಾಡಿತು. 3ಎ ನಲ್ಲಿರುವ ಒಕ್ಕಲಿಗರನ್ನು 2ಸಿ ಗೆ ಸೇರಿಸುವುದು. 3ಬಿಯಲ್ಲಿರುವ ಲಿಂಗಾಯತರನ್ನು 2ಡಿಗೆ ಸೇರಿಸುವ ಪ್ರಸ್ತಾಪ ಮುಂದಿರಿಸಿತು. ಮುಸ್ಲಿಮರ ಮೀಸಲಾತಿಯನ್ನು ತೆಗೆದು ಹಾಕಿತ್ತು. ಮುಸ್ಲಿಮರು ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದಾಗ, ಯಥಾಸ್ಥಿತಿ ಮುಂದುವರೆಸಲು ರಾಜ್ಯ ಸರ್ಕಾರ ಒಪ್ಪಿಕೊಂಡಿತ್ತು. ಆದ್ದರಿಂದ ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ ಎಂದರು.
  •  ಈಗ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಆದರೆ ಪೂರ್ವನಿಗದಿಯಂತೆ ಸಮುದಾಯದ ಮುಖಂಡರೊಂದಿಗೆ ಇಂದು ಸಭೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಅವರು ಹೇಳಿದರು.
  •  ಪಂಚಮಸಾಲಿ ಸಮುದಾಯ ಪ್ರಸ್ತುತ ಪ್ರವರ್ಗ-3 ಬಿ ಯಲ್ಲಿದೆ. ಈ ಪ್ರವರ್ಗದಡಿ ಲಿಂಗಾಯತ ಹಾಗೂ ಅದರ ಉಪಜಾತಿಗಳೇ ಮೀಸಲಾತಿ ಸೌಲಭ್ಯ ಪಡೆಯುತ್ತಿವೆ. ಹಾಗಾಗಿ 2ಎ ಪ್ರವರ್ಗದಡಿ ಪಂಚಮಸಾಲಿಗರನ್ನು ಸೇರಿಸಬೇಕೆಂದು ನಿಯೋಗ ಒತ್ತಾಯಿಸಿತು.
  •  ಸೂಕ್ತ ಮೀಸಲಾತಿ ಇಲ್ಲದ ಕಾರಣ ಸಮುದಾಯದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಕೃಷಿ ಕಾರ್ಮಿಕರು ಹೆಚ್ಚಾಗಿರುವ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎ ಸೇರಿಸಿ ಸಾಮಾಜಿಕ ನ್ಯಾಯ ಒದಗಿಸಲು ನಿಯೋಗ ಮನವಿ ಮಾಡಿತು.
  •  ಪಂಚಮಸಾಲಿಗಳಿಗೆ ಮೀಸಲಾತಿ ನೀಡುವ ಸಂಬಂಧ ವರದಿ ಸಲ್ಲಿಸಲು ಜಯಪ್ರಕಾಶ್‌ ಹೆಗಡೆ ಅಧ್ಯಕ್ಷತೆಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಯನ ನಡೆಸಿ, ಮಧ್ಯಂತರ ವರದಿಯನ್ನು ಸಲ್ಲಿಸಿದ್ದರೂ, ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮಧ್ಯಂತರ ವರದಿ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಲು ಮನವಿ ಮಾಡಿತು.

ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌, ಶಿವರಾಜ ತಂಗಡಗಿ, ಶಾಸಕರುಗಳಾದ ವಿನಯ್ ಕುಲಕರ್ಣಿ, ವಿಜಯ್ ಕಾಶಪ್ಪನವರ್, ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು, ಸಮುದಾಯದ 40 ಕ್ಕೂ ಹೆಚ್ಚು ಮುಖಂಡರು, ವಕೀಲರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?