ಸಾತ್ವಿಕ್​ನನ್ನ ಕಾಪಾಡಿದ ರಕ್ಷಣಾ ತಂಡಕ್ಕೆ ಸಿಎಂ ಅಭಿನಂದನೆ: ಜತೆಗೊಂದು ಜನರಿಗೆ ಸಂದೇಶ ನೀಡಿದ ಸಿದ್ದರಾಮಯ್ಯ

ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್‌ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆ ಪ್ರಶಂಸನೀಯ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸಾತ್ವಿಕ್​ನನ್ನ ಕಾಪಾಡಿದ ರಕ್ಷಣಾ ತಂಡಕ್ಕೆ ಸಿಎಂ ಅಭಿನಂದನೆ: ಜತೆಗೊಂದು ಜನರಿಗೆ ಸಂದೇಶ ನೀಡಿದ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us
Anil Kalkere
| Updated By: ಗಂಗಾಧರ​ ಬ. ಸಾಬೋಜಿ

Updated on: Apr 04, 2024 | 4:45 PM

ಬೆಂಗಳೂರು, ಮಾರ್ಚ್​ 04: ವಿಜಯಪುರ (Vijayapura) ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿಗೆ (Borewell) ಬಿದಿದ್ದ ಮಗು ಸಾತ್ವಿಕ 20 ಗಂಟೆ ಅನ್ನ, ನೀರು, ಗಾಳಿ-ಬೆಳಕು ಇಲ್ಲದೇ ಪವಾಡ ಸದೃಶ್ಯವೆಂಬಂತೆ ಬದುಕಿ ಬಂದಿದ್ದಾನೆ. ಆ ಮೂಲಕ ನಾಡಿನ ಕೋಟ್ಯಂತರ ಜನರ ಹರಕೆ, ಹಾರೈಕೆಗಳು ಫಲಿಸಿವೆ. ವೈದ್ಯರು ಕೂಡ ಸಾತ್ವಿಕ್​ಗೆ ಚಿಕಿತ್ಸೆ ನೀಡಿದ್ದು, ನಾರ್ಮಲ್​ ಆಗಿದ್ದಾನೆ, ಯಾವುದೇ ಗಾಯವಾಗಿಲ್ಲ ಎಂದು ಹೇಳಿದ್ದಾರೆ. ಇತ್ತ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಸಾತ್ವಿಕ್​ನನ್ನ ಕಾಪಾಡಿದ ರಕ್ಷಣಾ ತಂಡಕ್ಕೆ ಅಭಿನಂದನೆ ತಿಳಿಸಿದ್ದಾರೆ. ಜೊತೆಗೆ ಜನರಿಗೆ ಸಂದೇಶ ಕೂಡ ನೀಡಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್‌ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆ ಪ್ರಶಂಸನೀಯ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್ 

ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ – ಹಾರೈಕೆಗಳು ಫಲಿಸಿದೆ, ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು ಎಂದರು.

ಜನರಿಗೆ ಸಿದ್ದರಾಮಯ್ಯ ಸಂದೇಶ 

ನೀರು ಬಾರದ ಅಥವಾ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಯಾರದೋ ಅಮಾಯಕ ಜೀವ ಬಲಿಯಾಗುತ್ತದೆ, ಇಂತಹ ಘಟನೆಗಳು ಕಾಲಕಾಲಕ್ಕೆ ಪುನರಾವರ್ತನೆಯಾಗುತ್ತಿದ್ದರೂ ಜನ ಜಾಗೃತರಾಗದೆ ನಿರ್ಲಕ್ಷ್ಯ ತೋರುವುದು ಬೇಸರದ ಸಂಗತಿ. ಸಮಾಜ ಈ ಬಗ್ಗೆ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಜನರಿಗೆ ಸಂದೇಶ ನೀಡಿದ್ದಾರೆ.

ಇದನ್ನೂ ಓದಿ: 20 ಗಂಟೆಗಳ ಕಾಲ ಅನ್ನ, ನೀರು ಇಲ್ಲದೆ ಕಗ್ಗತ್ತಲಲ್ಲಿದ್ದ ಸಾತ್ವಿಕ್​ ಆರೋಗ್ಯ ಸ್ಥಿತಿ ಹೇಗಿದೆ? ಡಾಕ್ಟರ್ ಹೇಳಿದ್ದಿಷ್ಟು

ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಮಾತನಾಡಿ, ತೆರೆದ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಸಾತ್ವಿಕ್​​ನನ್ನು ಜೀವಂತವಾಗಿ ಹೊರತೆಗೆದ NDRF​, SDRF​​​, ವೈದ್ಯರ ತಂಡ ಹಾಗೂ ಗ್ರಾಮಸ್ಥರಿಗೆ ಅಭಿನಂದನೆ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ