ಮುಡಾ ಹಗರಣ: ತಮ್ಮ ಕುಟುಂಬದ ಮೇಲಿನ ಆರೋಪವನ್ನು ಸಚಿವ ಸಂಪುಟದ ಗಮನಕ್ಕೆ ತಂದ ಸಿಎಂ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸೈಟ್ ಹಂಚಿಕೆಯಲ್ಲಿ ಬಹುಕೋಟಿ ಹಗರಣ ನಡೆದಿರುವುದು ಬೆಳಕಿಗೆ ಬಂದಿದ್ದು, ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಟುಂಬ ಭಾಗಿಯಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಹೀಗಾಗಿ ಈ ಹಗರಣ ರಾಜ್ಯ ರಾಜಕಾರನದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಈ ಸಂಬಂಧ ವಿಪಕ್ಷಗಳು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಇದು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಸಿಎಂ, ಇಂದಿನ ಸಚಿವ ಸಂಪುಟದಲ್ಲಿ ಮುಡಾ ಹಗರಣದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಹಾಗಾದ್ರೆ, ಸದಸ್ಯರ ಮುಂದೆ ಏನೆಲ್ಲಾ ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.
ಬೆಂಗಳೂರು, (ಜುಲೈ 04): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸೈಟ್ ಹಂಚಿಕೆಯಲ್ಲಿ ಬಹುಕೋಟಿ ಹಗರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಹಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಹೆಸರು ಕೇಳಿಬಂದಿದ್ದರಿಂದ ರಾಜ್ಯ ರಾಜಕಾರಣದಲ್ಲಿ ಹಲ್ಚಲ್ ಎಬ್ಬಿಸಿದೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಇಂದು(ಜುಲೈ 04) ನಡೆದ ಸಚಿವ ಸಂಪುಟದಲ್ಲಿ ಮುಡಾ ಹಗರಣದ ಬಗ್ಗೆ ಪ್ರಸ್ತಾಪಿಸಿದ್ದಾರೆ. ಅಲ್ಲದೇ ತಮ್ಮ ಕುಟುಂಬದ ಮೇಲೆ ಬಂದಿರುವ ಆರೋಪದ ಬಗ್ಗೆ ಸಚಿವರ ಗಮನಕ್ಕೆ ತಂದಿದ್ದಾರೆ. ಮುಡಾ ಹಗರಣ ಆರೋಪದಲ್ಲಿ ಹರುಳಿಲ್ಲ. ಕಾನೂನಿನ ಅನ್ವಯ ಪರಿಹಾರ ರೂಪದ ನಿವೇಶನ ಪಡೆದಿರುವುದು ಸ್ಪಷ್ಟ. ಬಿಜೆಪಿ ಸರ್ಕಾರದ ಕಾಲದಲ್ಲೇ ನಡಾವಳಿ ಆಗಿದೆ, ಪರಿಹಾರಕ್ಕೆ ಒಪ್ಪಿಗೆ ಸಿಕ್ಕಿದೆ ಎಂದು ಸಚಿವ ಸಂಪುಟ ಸಭೆಯಲ್ಲಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಸಚಿವರಲ್ಲಿ ಇದ್ದ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಮುಡಾ ಹಗರಣ ಆರೋಪದಲ್ಲಿ ಹರುಳಿಲ್ಲ. ಕಾನೂನಿನ ಅನ್ವಯ ಪರಿಹಾರ ರೂಪದ ನಿವೇಶನ ಪಡೆದಿರುವುದು ಸ್ಪಷ್ಟ. ಬಿಜೆಪಿ ಸರ್ಕಾರದ ಕಾಲದಲ್ಲೇ ನಡಾವಳಿ ಆಗಿದೆ, ಪರಿಹಾರಕ್ಕೆ ಒಪ್ಪಿಗೆ ಸಿಕ್ಕಿದೆ. ನಮ್ಮ ಸರ್ಕಾರ ಬಂದ ಮೇಲೆ 2023, ಅಕ್ಟೋಬರ್ ನಲ್ಲೇ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದ್ದು, ಅದಕ್ಕೂ ಮುನ್ನವೇ ಪರಿಹಾರ ರೂಪದ ನಿವೇಶನ ನೀಡಲಾಗಿದೆ, ಯಾವುದೇ ಕಾನೂನು ಮೀರಿಲ್ಲ. ನಮ್ಮ ಮೇಲೆ ಬರುತ್ತಿರುವ ಆರೋಪಗಳೆಲ್ಲವೂ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಕ್ಯಾಬಿನೆಟ್ಗೆ ಸ್ಪಷ್ಟನೆ ನೀಡಿದರು.
ಇದನ್ನೂ ಓದಿ: ಮುಡಾ ಅಕ್ರಮ: ಸಿಎಂ ಸಿದ್ದರಾಮಯ್ಯ ಕಾನೂನು ಸಲಹೆಗಾರ ಎಎಸ್ ಪೊನ್ನಣ್ಣ ಹೇಳಿದ್ದಿಷ್ಟು
ಬಿಜೆಪಿ ಅವರಿಗೆ ಏನು ವಿಷಯ ಇಲ್ಲ. RSS ಹೇಳಿದಂತೆ ಚಳವಳಿ ಮಾಡುತ್ತಾರೆ. ಮೂಡಾದಲ್ಲಿ ಏನು ವಿಷಯ ಇದೆ..? 3.16 ಗುಂಟೆ ನಮ್ಮ ಜಮೀನು ಒತ್ತುವರಿ ಮಾಡಿದ್ದಾರೆ. ಸೈಟ್ ವಾಪಸ್ ತೆಗೆದುಕೊಂಡು ಪರಿಹಾರ ನೀಡಲಿ. ನಮ್ಮ ಕೇಸ್ ಪ್ರತ್ಯೇಕ, ಕಾನೂನು ಬಾಹಿರವಾಗಿ ಒತ್ತುವರಿ ಮಾಡಿದ್ದಾರೆ. ಆ ತಪ್ಪನ್ನು ಮೂಡಾದವರು ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ. ನಾವು 50-50 ನಿಯಮ ಒಪ್ಪಿಕೊಂಡಿದ್ದೇವೆ. ನಾವೇನು ಇಂತಹ ಕಡೆ ಕೊಡಿ ಎಂದು ಕೇಳಿಲ್ಲ. ನಾವೇನು ವಿಜಯನಗರದ 3-4 ಹಂತದಲ್ಲಿಕೊಡಿ ಎಂದು ನಾವು ಕೇಳಿಲ್ಲ. ನಮ್ಮ ಜಮೀನು ಸೈಟ್,ಪಾರ್ಕ್ ಮಾಡಿದ್ದಾರೆ. ನಾನು ಸಿಎಂ ಅಂತ ಬಿಡಲು ಆಗುತ್ತಾ? ಅಲ್ಲಿ ಜಾಗ ಇಲ್ಲ ಅಂತ ಇಲ್ಲಿ ಕೊಟ್ಟಿದ್ದಾರೆ. ಇದು ಮೂಡಾದ ತಪ್ಪು ಎಂದು ಹೇಳಿದ್ದಾರೆ.
50-50 ರದ್ದು ಮಾಡಿ ಎಂದು ಆದೇಶ ಮಾಡಿದ್ದಾರೆ. ನನಗೆ 62 ಕೋಟಿ ರೂಪಾಯಿ ಪರಿಹಾರ ಕೊಟ್ಟು ಬಿಡಲಿ. ಒಂದು ಎಕರೆಗಿಂತ ಕಡಿಮೆ ಕೊಟ್ಟಿದ್ದಾರೆ. ಈಗ ಕೊಟ್ಟಸೈಟ್ ದರ ಎಷ್ಟಿದೆ ಎಂದು ನನಗೆ ಗೊತ್ತಿಲ್ಲ. ಸಚಿವರು ಯಾವ ಫೈಲ್ ತಂದಿಲ್ಲ. ಇದು ರಾಜಕೀಯ ಪ್ರೇರಿತ ಆರೋಪಗಳು ಎಂದರು.
ಇದನ್ನೂ ಓದಿ: ಏನಿದು ಮುಡಾ ಪ್ರಕರಣ? ಸಿದ್ದರಾಮಯ್ಯ ಪತ್ನಿಗೆ ಸೈಟ್ ಸಿಕ್ಕಿದ್ದು ಹೇಗೆ? ಇಲ್ಲಿದೆ ಪೂರ್ಣ ವಿವರ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು ಅಕ್ರಮವಾಗಿ ಮುಡಾ ಸೈಟ್ ಪಡೆದುಕೊಂಡಿದ್ದಾರೆ. ಕಡಿಮೆ ಬೆಲೆಯ ತಮ್ಮ ಜಾಗವನ್ನು ಕೊಟ್ಟು, ಇದೀಗ ಹೆಚ್ಚಿನ ಬೆಲೆ ಬಾಳುವ ಸೈಟ್ಗಳನ್ನು ಪಡೆದುಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಸಂಬಂಧ ಬಿಜೆಪಿ ನಾಯಕರು ಪ್ರತಿಭಟನೆಗಿಳಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು. ಅಲ್ಲದೇ ಈ ಹಗರಣ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸುತ್ತಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ