AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಪತಿ ಮುರ್ಮುರನ್ನು ಏಕವಚನದಲ್ಲಿ ಸಂಬೋಧಿಸಿದ ವಿಚಾರ: ವಿಷಾದ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ

ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಏಕವಚನದಲ್ಲಿ ಸಂಬೋಧಿಸಿದ ವಿಚಾರವಾಗಿ ಟ್ವೀಟ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದ್ದಾರೆ. ಗ್ರಾಮೀಣ ಪ್ರದೇಶದಿಂದ ಬಂದ ನನ್ನಂತಹವರು ಅಪ್ಪ-ಅಮ್ಮ ಸೇರಿದಂತೆ ಹಿರಿಯರನ್ನು ಕೂಡಾ ಏಕವಚನದಲ್ಲಿ ಸಂಭೋದಿಸುವುದು ರೂಢಿ. ಗೌರವಾನ್ವಿತ ರಾಷ್ಟ್ರಪತಿಗಳು ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ‌ ಸಂಬೋಧಿಸಬಾರದಿತ್ತು ಎಂದು ಹೇಳಿದ್ದಾರೆ.

ರಾಷ್ಟ್ರಪತಿ ಮುರ್ಮುರನ್ನು ಏಕವಚನದಲ್ಲಿ ಸಂಬೋಧಿಸಿದ ವಿಚಾರ: ವಿಷಾದ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ
ರಾಷ್ಟ್ರಪತಿ ಮುರ್ಮು, ಮುಖ್ಯಮಂತ್ರಿ ಸಿದ್ದರಾಮಯ್ಯ
ಗಂಗಾಧರ​ ಬ. ಸಾಬೋಜಿ
|

Updated on:Jan 28, 2024 | 10:53 PM

Share

ಬೆಂಗಳೂರು, ಜನವರಿ 28: ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಏಕವಚನದಲ್ಲಿ‌ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ವಿಷಾದ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಗ್ರಾಮೀಣ ಪ್ರದೇಶದಿಂದ ಬಂದ ನನ್ನಂತಹವರು ಅಪ್ಪ-ಅಮ್ಮ ಸೇರಿದಂತೆ ಹಿರಿಯರನ್ನು ಕೂಡಾ ಏಕವಚನದಲ್ಲಿ ಸಂಭೋದಿಸುವುದು ರೂಢಿ. ಗೌರವಾನ್ವಿತ ರಾಷ್ಟ್ರಪತಿಗಳು ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ‌ ಸಂಬೋಧಿಸಬಾರದಿತ್ತು ಎಂದು ಹೇಳಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡದೆ ಬಿಜೆಪಿ ನಾಯಕರು ಅವಮಾನಿಸಿರುವುದು ನನಗೆ ತೀವ್ರ ನೋವು ಉಂಟುಮಾಡಿದ್ದು ಮಾತ್ರವಲ್ಲ ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು.

ಸಿಎಂ ಸಿದ್ದರಾಮಯ್ಯ ಟ್ವೀಟ್​ 

ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು ಹೊರಹಾಕುವ ಭರದಲ್ಲಿ ಬಾಯ್ತಪ್ಪಿನಿಂದ ರಾಷ್ಟ್ರಪತಿಗಳನ್ನು ಏಕವಚನದಲ್ಲಿ‌ ಸಂಭೋದಿಸಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಸಿಎಂ ಹುದ್ದೆಯಿಂದ ಕೂಡಲೇ ವಜಾ ಮಾಡುವಂತೆ ಕುಮಾರಸ್ವಾಮಿ ಆಗ್ರಹ

ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ದೇಶದ ಪ್ರಥಮ ಪ್ರಜೆ ಆಗಿರುವ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ (ಆ ಪದವನ್ನು ಬರೆಯಲಾರೆ) ಎಂದು ತುಚ್ಛವಾಗಿ ಸಂಬೋಧಿಸಿದ ಕೀಳು, ವಿಕೃತ, ಹೀನ ನಾಲಗೆಯ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ ಹೇಳಿದ್ದೇನು?

ಚಿತ್ರದುರ್ಗದಲ್ಲಿ ನಡೆದ ಶೋಷಿತರ ಸಮಾವೇಶದಲ್ಲಿ ಭಾಷಣ ಮಾಡುವ ವೇಳೆ ಸಿದ್ದರಾಮಯ್ಯ ಅವರು ಎಡವಟ್ಟು ಮಾಡಿಕೊಂಡಿದ್ದಾರೆ. ಇವರ(ಬಿಜೆಪಿ) ಯೋಗ್ಯತೆಗೆ ಪಾಪಾ ದ್ರೌಪದಿ ಮುರ್ಮು ಶೋಷಿತ ವರ್ಗಕ್ಕೆ ಸೇರಿದವಳು. ಅವಳನ್ನ ಪಾರ್ಲಿಮೆಂಟ್ ಉದ್ಘಾಟನೆಗೆ ಕರೆದಿಲ್ಲ ಎಂದು ಏಕವಚನದಲ್ಲಿ ಸಂಭೋಧಿಸಿದ್ದಾರೆ. ಇದೀಗ ಈ ವಿಡಿಯೋವನ್ನು ವಿಪಕ್ಷಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:46 pm, Sun, 28 January 24

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್