ಬೆಂಗಳೂರು, ಜನವರಿ 28: ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಏಕವಚನದಲ್ಲಿ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ಸಿಎಂ ಸಿದ್ದರಾಮಯ್ಯ (Siddaramaiah) ವಿಷಾದ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಗ್ರಾಮೀಣ ಪ್ರದೇಶದಿಂದ ಬಂದ ನನ್ನಂತಹವರು ಅಪ್ಪ-ಅಮ್ಮ ಸೇರಿದಂತೆ ಹಿರಿಯರನ್ನು ಕೂಡಾ ಏಕವಚನದಲ್ಲಿ ಸಂಭೋದಿಸುವುದು ರೂಢಿ. ಗೌರವಾನ್ವಿತ ರಾಷ್ಟ್ರಪತಿಗಳು ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ ಸಂಬೋಧಿಸಬಾರದಿತ್ತು ಎಂದು ಹೇಳಿದ್ದಾರೆ.
ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ
ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡದೆ ಬಿಜೆಪಿ ನಾಯಕರು ಅವಮಾನಿಸಿರುವುದು ನನಗೆ ತೀವ್ರ ನೋವು ಉಂಟುಮಾಡಿದ್ದು ಮಾತ್ರವಲ್ಲ ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು.
ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ
ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡದೆ @BJP4India ನಾಯಕರು ಅವಮಾನಿಸಿರುವುದು ನನಗೆ ತೀವ್ರ ನೋವು ಉಂಟುಮಾಡಿದ್ದು ಮಾತ್ರವಲ್ಲ ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು.ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು…
— Siddaramaiah (@siddaramaiah) January 28, 2024
ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು ಹೊರಹಾಕುವ ಭರದಲ್ಲಿ ಬಾಯ್ತಪ್ಪಿನಿಂದ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಭೋದಿಸಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ, ದೇಶದ ಪ್ರಥಮ ಪ್ರಜೆ ಆಗಿರುವ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ (ಆ ಪದವನ್ನು ಬರೆಯಲಾರೆ) ಎಂದು ತುಚ್ಛವಾಗಿ ಸಂಬೋಧಿಸಿದ ಕೀಳು, ವಿಕೃತ, ಹೀನ ನಾಲಗೆಯ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಚಿತ್ರದುರ್ಗದಲ್ಲಿ ನಡೆದ ಶೋಷಿತರ ಸಮಾವೇಶದಲ್ಲಿ ಭಾಷಣ ಮಾಡುವ ವೇಳೆ ಸಿದ್ದರಾಮಯ್ಯ ಅವರು ಎಡವಟ್ಟು ಮಾಡಿಕೊಂಡಿದ್ದಾರೆ. ಇವರ(ಬಿಜೆಪಿ) ಯೋಗ್ಯತೆಗೆ ಪಾಪಾ ದ್ರೌಪದಿ ಮುರ್ಮು ಶೋಷಿತ ವರ್ಗಕ್ಕೆ ಸೇರಿದವಳು. ಅವಳನ್ನ ಪಾರ್ಲಿಮೆಂಟ್ ಉದ್ಘಾಟನೆಗೆ ಕರೆದಿಲ್ಲ ಎಂದು ಏಕವಚನದಲ್ಲಿ ಸಂಭೋಧಿಸಿದ್ದಾರೆ. ಇದೀಗ ಈ ವಿಡಿಯೋವನ್ನು ವಿಪಕ್ಷಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:46 pm, Sun, 28 January 24