AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆ ಪ್ರಗತಿ ಪರಿಶೀಲನೆಗೆ ಸಚಿವರ ಸಮಿತಿ ನೇಮಕ

ವಾಲ್ಮೀಕಿ ನಿಗಮ ಹಗರಣ ಮತ್ತು ಮುಡಾ ಹಗರಣ ಆರೋಪಗಳಿಗೆ ಪ್ರತಿಯಾಗಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಹಗರಣಗಳನ್ನು ಬಗೆಯಲು ಮುಂದಾಗಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇದೀಗ ಹಳೆಯ ಹಗರಣಗಳ ತನಿಖಾ ಪ್ರಗತಿ ಪರಿಶೀಲನೆಗೆ ಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದೆ. ಸಮಿತಿಯ ಕುರಿತಾದ ವಿವರ ಇಲ್ಲಿದೆ.

ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆ ಪ್ರಗತಿ ಪರಿಶೀಲನೆಗೆ ಸಚಿವರ ಸಮಿತಿ ನೇಮಕ
ಗೃಹ ಸಚಿವ ಡಾ. ಜಿ ಪರಮೇಶ್ವರ
Ganapathi Sharma
|

Updated on: Sep 11, 2024 | 9:35 AM

Share

ಬೆಂಗಳೂರು, ಸೆಪ್ಟೆಂಬರ್ 11: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಮತ್ತು ಇತರ ಹಗರಣಗಳ ತನಿಖೆಯ ಪ್ರಗತಿ ಪರಿಶೀಲನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಈ ವಿಚಾರವಾಗಿ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಆದೇಶ ಹೊರಡಿಸಿದ್ದಾರೆ.

ಸಿದ್ದರಾಮಯ್ಯ ಆದೇಶದಲ್ಲೇನಿದೆ?

ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಮುಂತಾದ ಕಾರ್ಯಗಳಿಗೆ ಸಂಬಂಧಿಸಿದಂತೆ ಕ್ರಮ ವಹಿಸಲು ಈ ಕೆಳಕಂಡಂತೆ ಮಾನ್ಯ ಸಚಿವರುಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ ಎಂದು ಉಲ್ಲೇಖಿಸಿರುವ ಸಿದ್ದರಾಮಯ್ಯ, ಸಮಿತಿಯ ಸದಸ್ಯರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ.

ಸಚಿವರ ಸಮಿತಿಯ ಸದಸ್ಯರು

  • ಎಚ್.ಕೆ. ಪಾಟೀಲ – ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು.
  • ಕೃಷ್ಣ ಬೈರೇಗೌಡ – ಕಂದಾಯ ಸಚಿವರು.
  • ಪ್ರಿಯಾಂಕ್ ಖರ್ಗೆ – ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು.
  • ಸಂತೋಷ್ ಎಸ್ ಲಾಡ್ – ಕಾರ್ಮಿಕ ಸಚಿವರು

ಸದರಿ ಸಮಿತಿಯು ಮುಂದಿನ ಎರಡು ತಿಂಗಳಲ್ಲಿ ತನಗೆ ವಹಿಸಿರುವ ಜವಾಬ್ದಾರಿಯನ್ನು ಪೂರ್ಣಗೊಳಿಸುವಂತೆ ಕೋರಿದೆ ಎಂದು ಆದೇಶದಲ್ಲಿ ಸಿಎಂ ಉಲ್ಲೇಖಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಮತ್ತು ಮುಡಾ ಹಗರಣ ವಿಚಾರವಾಗಿ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರದ ವಿರುದ್ಧ ಮುಗಿಬಿದ್ದ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಹಳೆಯ ಹಗರಣಗಳನ್ನು ಮುನ್ನೆಲೆಗೆ ತರಲು ಯತ್ನಿಸುತ್ತಿದೆ. ಈಗಾಗಲೇ ಮಾಜಿ ಸಚಿವರು, ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಕಾಂಗ್ರೆಸ್ ನಾಯಕರು ರಾಜ್ಯಪಾಲರನ್ನು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ: ಸಿದ್ದರಾಮಯ್ಯಗೆ ನಾಳೆ ನಿರ್ಣಾಯಕ ದಿನ, ಹೈಕೋರ್ಟ್‌ನಲ್ಲಿ ಏನಾಗಲಿದೆ ಪ್ರಾಸಿಕ್ಯೂಷನ್ ಭವಿಷ್ಯ?

ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಹಿಂದಿನ ಸರ್ಕಾರಗಳ ಹಗರಣಗಳ ತನಿಖೆಗೆ ಸಮಿತಿ ರಚಿಸುವುದಾಗಿ ಕಾಂಗ್ರೆಸ್ ಸರ್ಕಾರ ಹೇಳಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್