ಅಂಗನವಾಡಿ ಕಾರ್ಯಕರ್ತೆಯರು, ವಿಕಲಚೇತನರಿಗೆ ಮಹತ್ವದ ಭರವಸೆ ನೀಡಿದ ಸಿಎಂ

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಮತ್ತು ವಿಕಲ ಚೇತನರ ಸಂಘಟನೆಗಳ ನಿಯೋಗದವರು ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದ್ದಾರೆ. ಹಂತ ಹಂತವಾಗಿ ಬೇಡಿಕೆ ಈಡೇರಿಕೆಯ ಪ್ರಯತ್ನ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರು, ವಿಕಲಚೇತನರಿಗೆ ಮಹತ್ವದ ಭರವಸೆ ನೀಡಿದ ಸಿಎಂ
ಸಿಎಂ ಸಭೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Mar 11, 2024 | 8:10 PM

ಬೆಂಗಳೂರು, ಮಾರ್ಚ್​​ 11: ಅಂಗನವಾಡಿ ಕಾರ್ಯಕರ್ತೆಯರು ಮತ್ತು ವಿಕಲಚೇತನರ ಸಂಘಟನೆಗಳ ನಿಯೋಗದ ಜೊತೆ ಸಿಎಂ ಸಿದ್ದರಾಮಯ್ಯ (Siddaramaiah) ವಿಧಾನಸೌಧದಲ್ಲಿ ಸಭೆ ಮಾಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು-ಸಹಾಯಕಿಯರು, ಆಶಾ ಕಾರ್ಯಕರ್ತೆಯರ, ವಿಕಲ ಚೇತನರ ಬೇಡಿಕೆಗಳಿಗೆ ಸಿಎಂ ಸ್ಪಂದನೆ ಮಾಡಿದ್ದಾರೆ. ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ತಮ್ಮ‌ ಕುಟುಂಬಗಳಿಗೆ, ತಮ್ಮ ಸಮುದಾಯಕ್ಕೆ ಆಗಿರುವ ಅನುಕೂಲಗಳನ್ನು ಕಾರ್ಯಕರ್ತೆಯರು ವಿವರಿಸಿದ್ದಾರೆ. ಹಂತ ಹಂತವಾಗಿ ಬೇಡಿಕೆ ಈಡೇರಿಕೆಯ ಪ್ರಯತ್ನ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಈ ಕುರಿತಾಗಿ ಟ್ವೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ, ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಮತ್ತು ವಿಕಲ ಚೇತನರ ಸಂಘಟನೆಗಳ ನಿಯೋಗದವರು ಅವರನ್ನು ಭೇಟಿಯಾಗಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾತುಗಳು.

ಸಿಎಂ ಸಿದ್ದರಾಮಯ್ಯ ಟ್ವೀಟ್​​

ತಮ್ಮೆಲ್ಲರ ನ್ಯಾಯಯುತ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಈಡೇರಿಸಲು ಪ್ರಯತ್ನಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ₹11,500, ₹10,000 ಹಾಗೂ ಸಹಾಯಕಿಯರಿಗೆ ₹6,000 ರೂ.ಗಳು ಸದ್ಯ ದೊರಕುತ್ತಿದೆ. ಗೌರವ ಧನವನ್ನು ಹೆಚ್ಚಿಸಬೇಕೆಂಬ ಮನವಿ ಇದೆ. ಕೇಂದ್ರದಿಂದ ಬರಬೇಕಾದ ಅನುದಾನ ಬರುತ್ತಿಲ್ಲವಾದ್ದರಿಂದ ತಕ್ಷಣಕ್ಕೆ ಬೇಡಿಕೆ ಈಡೇರಿಸುವುದು ಕಷ್ಟಸಾಧ್ಯ ಎಂದಿದ್ದಾರೆ.

ಇದನ್ನೂ ಓದಿ: ಮನೆ ಕಟ್ಟುವವರಿಗೆ ‘ನಂಬಿಕೆ ರಕ್ಷೆ’ ವಿತರಣೆ: ಬಿಬಿಎಂಪಿ ಹೊಸ ಆಸ್ತಿ ತೆರಿಗೆ ಪದ್ಧತಿ ಜಾರಿ

ಈಗಾಗಲೇ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಘೋಷಿಸಲಾಗಿದೆ. ಅದೇ ರೀತಿ ಅಂಗನವಾಡಿ ಕೇಂದ್ರಗಳಿಗೆ ಉಚಿತ ವಿದ್ಯುತ್ ನೀಡುವ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನವನ್ನು 1,000 ರೂ. ಹೆಚ್ಚಿಸುವ ಬಗ್ಗೆ ಮುಂದಿನ ದಿನಗಳಲ್ಲಿ ಸಕಾರಾತ್ಮಕ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಗೃಹಲಕ್ಷ್ಮೀ ಯೋಜನೆಯಡಿ 2,000 ರೂ.ಗಳನ್ನು ಮನೆ ಯಜಮಾನಿಯಾಗಿರುವ ಅಂಗನವಾಡಿ ಕಾರ್ಯಕರ್ತೆಯರಿಗೂ ಒದಗಿಸಲಾಗುತ್ತಿದೆ. ಶೇ.60 ಅಂಗನವಾಡಿಯಲ್ಲಿ‌ ಕೆಲಸ ಮಾಡುವ ಮಹಿಳೆಯರಿಗೆ ಗೃಹ ಲಕ್ಷ್ಮೀ ಯೋಜನೆಯಡಿ ಹಣ ದೊರೆಯುತ್ತಿದೆ.

ಇದನ್ನೂ ಓದಿ: ಚುನಾವಣೆಯಲ್ಲಿ ನನ್ನ ಸ್ಪರ್ಧೆ ನಿಶ್ಚಿತ ಎಂದ ಶೋಭಾ; ಎರಡೂ ಬಾರಿ ಗೆಲ್ಲಿಸಿದ್ದು ಮೋದಿ ಮುಖ ನೋಡಿ ಎಂದ ಸಿಟಿ ರವಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಅವರೊಂದಿಗೆ ಸುಮಾರು 20ಕ್ಕೂ ಹೆಚ್ಚು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ತಾಜಾ ಸುದ್ದಿ
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ