ಕ್ರೀಡಾಪಟುಗಳಿಗೆ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಸಿಹಿಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಮಿನಿ ಒಲಿಂಪಿಕ್ಸ್​ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಿಎಂ, ರಾಜ್ಯಮಟ್ಟದ ಕ್ರೀಡಾಪಟುಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ.

ಕ್ರೀಡಾಪಟುಗಳಿಗೆ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಸಿಹಿಸುದ್ದಿ ನೀಡಿದ ಸಿಎಂ ಸಿದ್ದರಾಮಯ್ಯ
Follow us
Vinayak Hanamant Gurav
| Updated By: ರಮೇಶ್ ಬಿ. ಜವಳಗೇರಾ

Updated on: Nov 14, 2024 | 6:53 PM

ಬೆಂಗಳೂರು, (ನವೆಂಬರ್ 14): ರಾಜ್ಯಮಟ್ಟದ ಕ್ರೀಡಾಪಟುಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲು ಚಿಂತನೆ ಮಾಡುತ್ತೇವೆ. ಶೀಘ್ರವೇ ಪರಿಶೀಲಿಸಿ ಕ್ರೀಡಾಪಟುಗಳಿಗೆ ಗ್ರೇಸ್ ಮಾರ್ಕ್ಸ್ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿದ್ದಾರೆ. ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಮಿನಿ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿಎಂ. ರಾಜ್ಯಮಟ್ಟದ ಕ್ರೀಡಾಪಟುಗಳಿಗೆ ವಾರ್ಷಿಕ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ನೀಡಲು ಚಿಂತನೆ ನಡೆದಿದೆ. ಶೀಘ್ರವೇ ಇದರ ಬಗ್ಗೆ ಪರಿಶೀಲಿಸಿ ಪ್ರಕಟಿಸುತ್ತೇವೆ ಎಂದು ತಿಳಿಸಿದರು.

ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ 3% ಮೀಸಲಾತಿ ಇದೆ. ಇತರೆ ಇಲಾಖೆಯಲ್ಲಿ 2% ಮೀಸಲಾತಿ ಇದೆ. ರಾಜ್ಯದ ಕ್ರೀಡಾಪಟುಗಳು ಕಾಮನ್​ವೆಲ್ತ್​, ಒಲಿಂಪಿಕ್ಸ್​ನಲ್ಲಿ ಭಾಗವಹಿಸಿ. ಒಲಿಂಪಿಕ್ಸ್​ನಲ್ಲಿ ಪದಕ ಗೆದ್ದ ರಾಜ್ಯದ ಕೀಡಾಪಟುಗಳಿಗೆ ಬಹುಮಾನ ನೀಡಲಾಗುತ್ತೆ. ಚಿನ್ನ ಗೆದ್ರೆ 5 ಕೋಟಿ, ಬೆಳ್ಳಿ ಗೆದ್ರೆ 3 ಕೋಟಿ ಬಹುಮಾನ ನೀಡುತ್ತೇವೆ ಎಂದರು.

ಮಿನಿ ಒಲಿಂಪಿಕ್ ಕ್ರೀಡಾಕೂಟ ಇಂದಿನಿಂದ ಪ್ರಾರಂಭ ಆಗ್ತಿದೆ. ಈ‌ ಕ್ರೀಡಾಕೂಟ ಕ್ರೀಡಾ ಇಲಾಖೆಯ ವತಿಯಿಂದ ಏರ್ಪಾಡು ಮಾಡಲಾಗಿದೆ. ಈ ಕ್ರೀಡಾಕೂಟ ವನ್ನ ಅತ್ಯಂತ ಸಂತೋಷ ದಿಂದ‌ ಉದ್ಘಾಟನೆ ಮಾಡಿದ್ದೇನೆ. ರಾಜ್ಯದ ಮೂಲೆ‌ಮೂಲೆ ಗಳಿಂದ‌ ಭಾಗವಹಿಸಿದ್ದಾರೆ. ಸುಮಾರು‌ ಐದು ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುತ್ತಿದ್ದಾರೆ. ನಿಮ್ಮೆಲ್ಲರಿಗೂ ಶುಭಾಶಯ ಹೇಳುತ್ತೇನೆ. ಕ್ರೀಡಾಂಗಣದಲ್ಲಿ ಭಾಗಿಯಾದ ಎಲ್ಲರೂ ಗೆಲ್ಲೋದಕ್ಕೆ ಸಾಧ್ಯವಿಲ್ಲ. ಆದ್ರೆ ಕ್ರೀಡಾಕೂಟದಲ್ಲಿ ಭಾಗಿಯಾಗೋದು ಮುಖ್ಯ ಎಂದು ಹೇಳಿದರು.

ಮುಂದಿನ ಭರವಸೆಗಳನ್ನು ನಾನು ಇಲ್ಲಿ ನೋಡುತ್ತಿದ್ದೇನೆ . ಒಲಿಂಪಿಕ್ಸ್ ನಲ್ಲಿ ಚಿನ್ನ ಗೆದ್ರೆ ಐದು ಕೋಟಿ, ಬೆಳ್ಳಿ ಗೆದ್ರೆ ಮೂರು ಕೋಟಿ ಕೊಡ್ತಿದ್ದೇವೆ. ನೀವು ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗಿಯಾಗುವಷ್ಟರ ಮಟ್ಟಿಗೆ ಬೆಳೆಯಬೇಕು. ಕಾಮನ್ ವೆಲ್ತ್, ಏಷಿಯನ್ ಗೇಮ್ಸ್, ಒಲಿಂಪಿಕ್ಸ್ ನಂತಹ ದೊಡ್ಡ ದೊಡ್ಡ ವೇದಿಕೆಗೆ ಹೋಗಬೇಕು. ಜೊತೆಗೆ ಭಾರತವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಧಿಸಿದರೆ ಸರ್ಕಾರ ಕೆಲಸ ಕೂಡ ಕೊಡುತ್ತಿದ್ದೇವೆ. ಪೊಲೀಸ್ ಇಲಾಖೆಯಲ್ಲಿ 3% ಮೀಸಲಾತಿ ಇದೆ, ಇತರೆ ಇಲಾಖೆಯಲ್ಲಿ 2% ಮೀಸಲಾತಿ ಇದೆ. ಇದರೆಲ್ಲವುದರ ಸದುಪಯೋಗೆ ಯುವಕ, ಯುವತಿಯರು ಪಡೆದುಕೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ಕಿವಿ ಮಾತು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಫಲಿತಾಂಶಕ್ಕೆ ಮೊದಲೇ ಗೂಬೆ ಕೂರಿಸುವ ಕೆಲಸ ಶುರುಮಾಡಿದ ಯೋಗೇಶ್ವರ್
ಜಮೀರ್ ಅಹ್ಮದ್ ಮಾಡಿದ ಕಾಮೆಂಟ್​​ಗೆ ನಾವ್ಯಾರೂ ಪ್ರತಿಕ್ರಿಯಿಸಿಲ್ಲ: ನಿಖಿಲ್
ಜಮೀರ್ ಅಹ್ಮದ್ ಮಾಡಿದ ಕಾಮೆಂಟ್​​ಗೆ ನಾವ್ಯಾರೂ ಪ್ರತಿಕ್ರಿಯಿಸಿಲ್ಲ: ನಿಖಿಲ್
ವಿಡಿಯೋ: ಬಿಗ್​ಬಾಸ್​ ಮನೆಯಲ್ಲಿ ಬಿಚ್ಚಿಕೊಂಡ ಬಾಲ್ಯದ ನೆನಪುಗಳು
ವಿಡಿಯೋ: ಬಿಗ್​ಬಾಸ್​ ಮನೆಯಲ್ಲಿ ಬಿಚ್ಚಿಕೊಂಡ ಬಾಲ್ಯದ ನೆನಪುಗಳು
ಮೊದಲ ಎಸೆತದಲ್ಲೇ ಸಿಕ್ಸರ್: ಸೂರ್ಯನ ದಾಖಲೆ ಸರಿಗಟ್ಟಿದ ರಮಣದೀಪ್
ಮೊದಲ ಎಸೆತದಲ್ಲೇ ಸಿಕ್ಸರ್: ಸೂರ್ಯನ ದಾಖಲೆ ಸರಿಗಟ್ಟಿದ ರಮಣದೀಪ್
ಚನ್ನಪಟ್ಟಣದಲ್ಲಿ ಜಿದ್ದಾಜಿದ್ದಿನ ಹೋರಾಟ ನಡೆದಿದೆ: ಚಲುವರಾಯಸ್ವಾಮಿ
ಚನ್ನಪಟ್ಟಣದಲ್ಲಿ ಜಿದ್ದಾಜಿದ್ದಿನ ಹೋರಾಟ ನಡೆದಿದೆ: ಚಲುವರಾಯಸ್ವಾಮಿ
ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತದೆ ಅಂತ ನೆಹರೂ ಅರಿತಿದ್ದರು: ಡಿಕೆಶಿ
ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತದೆ ಅಂತ ನೆಹರೂ ಅರಿತಿದ್ದರು: ಡಿಕೆಶಿ
ಬಿಬಿಎಂಪಿ ಶಾಲಾಮಕ್ಕಳೊಂದಿಗೆ ಮಕ್ಕಳ ದಿನಾಚರಣೆ ಆಚರಿಸಿದ ಡಿಕೆ ಶಿವಕುಮಾರ್
ಬಿಬಿಎಂಪಿ ಶಾಲಾಮಕ್ಕಳೊಂದಿಗೆ ಮಕ್ಕಳ ದಿನಾಚರಣೆ ಆಚರಿಸಿದ ಡಿಕೆ ಶಿವಕುಮಾರ್
ಜನರ ಭಾವನೆಗಳಿಗೆ ವಿರುದ್ಧವಾಗಿ ಸಿದ್ದರಾಮಯ್ಯ ಮಾತಾಡುತ್ತಾರೆ: ಸೋಮಣ್ಣ
ಜನರ ಭಾವನೆಗಳಿಗೆ ವಿರುದ್ಧವಾಗಿ ಸಿದ್ದರಾಮಯ್ಯ ಮಾತಾಡುತ್ತಾರೆ: ಸೋಮಣ್ಣ
"ನಾನಾಗಿದ್ದರೆ ಸಿದ್ದರಾಮಯ್ಯ ಕಪಾಳಕ್ಕೆ ಹೊಡೆಯುತ್ತಿದ್ದೆ": ಸ್ವಾಮೀಜಿ