ನಿಗಮ-ಮಂಡಳಿಗಳಿಗೆ ನಿರ್ದೇಶಕರು, ಸದಸ್ಯರ ಆಯ್ಕೆಗೆ ಸಮಿತಿ ರಚಿಸಿದ ಸಿಎಂ ಸಿದ್ದರಾಮಯ್ಯ

ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ನಿಗಮ-ಮಂಡಳಿಗಳಿಗೆ ನಿರ್ದೇಶಕರು, ಸದಸ್ಯರ ಆಯ್ಕೆಗೆ ಸಮಿತಿ ರಚನೆ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಸಚಿವ ಸಂತೋಷ್ ಲಾಡ್, ಶಾಸಕ ರಿಜ್ವಾನ್ ಅರ್ಷದ್ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಒಂದು ತಿಂಗಳೊಳಗೆ ಪಟ್ಟಿ ಸಿದ್ಧಪಡಿಸಿ ಸಲ್ಲಿಕೆ ಮಾಡಲು ಸಿದ್ದರಾಮಯ್ಯ ಸೂಚಿಸಿದ್ದಾರೆ. ಪರಮೇಶ್ವರ್ ನೇತೃತ್ವದಲ್ಲೇ ಸಮಿತಿ ರಚನೆ ಆದರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ನಿಗಮ-ಮಂಡಳಿಗಳಿಗೆ ನಿರ್ದೇಶಕರು, ಸದಸ್ಯರ ಆಯ್ಕೆಗೆ ಸಮಿತಿ ರಚಿಸಿದ ಸಿಎಂ ಸಿದ್ದರಾಮಯ್ಯ
ನಿಗಮ-ಮಂಡಳಿಗಳಿಗೆ ನಿರ್ದೇಶಕರು, ಸದಸ್ಯರ ಆಯ್ಕೆಗೆ ಸಮಿತಿ ರಚಿಸಿದ ಸಿಎಂ ಸಿದ್ದರಾಮಯ್ಯ
Follow us
ಪ್ರಸನ್ನ ಗಾಂವ್ಕರ್​
| Updated By: ಗಂಗಾಧರ​ ಬ. ಸಾಬೋಜಿ

Updated on: Jun 24, 2024 | 6:58 PM

ಬೆಂಗಳೂರು, ಜೂನ್​ 24: ಡಾ.ಜಿ.ಪರಮೇಶ್ವರ್ (G. Parameshwara) ಅಧ್ಯಕ್ಷತೆಯಲ್ಲಿ ವಿವಿಧ ನಿಗಮ ಮಂಡಳಿಗಳಿಗೆ ನಿರ್ದೇಶಕರು ಮತ್ತು ಸದಸ್ಯರ ಆಯ್ಕೆಗೆ ಸಮಿತಿ ರಚನೆ ಮಾಡಿ ಸಿಎಂ ಸಿದ್ದರಾಮಯ್ಯ (Siddaramaiah) ಸೋಮವಾರ ಆದೇಶ ಹೊರಡಿಸಿದ್ದಾರೆ. ಸಮಿತಿ ಸದಸ್ಯರಾಗಿ ಸಚಿವ ಸಂತೋಷ್ ಲಾಡ್, ಶಾಸಕ ರಿಜ್ವಾನ್ ಅರ್ಷದ್ ಅವರನ್ನು ನೇಮಕ ಮಾಡಲಾಗಿದೆ. ಒಂದು ತಿಂಗಳೊಳಗೆ ನಿರ್ದೇಶಕರು, ಸದಸ್ಯರನ್ನ ಆಯ್ಕೆ ಮಾಡಿ ಪಟ್ಟಿ ಸಿದ್ಧಪಡಿಸಿ ಸಲ್ಲಿಕೆ ಮಾಡಲು ಸಿಎಂ ಸೂಚಿಸಿದ್ದಾರೆ.

ಇನ್ನು ಡಾ.ಪರಮೇಶ್ವರ್ ನೇತೃತ್ವದಲ್ಲೇ ಸಮಿತಿ ರಚನೆ ಆದರೂ ಕೂಡ ನಿಗಮ ಮಂಡಳಿ ಅಧ್ಯಕ್ಷರ ನೇಮಕ ವಿಚಾರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ, ಪಟ್ಟಿ ಇಲ್ಲಿದೆ

ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಚಿತ್ರದುರ್ಗದ ಕಾಂಗ್ರೆಸ್ ಮುಖಂಡ ಜಿ.ಎಸ್.ಮಂಜುನಾಥ್ ನೇಮಕಗೊಂಡಿದ್ದಾರೆ. ಕಂಪನಿ ಆಕ್ಟ್​ 2013ರ ಆರ್ಟಿಕಲ್ಸ್​ ಆಫ್​ ಅಸೋಸಿಯೇಷನ್​ ಆಫ್ ದಿ ಕರ್ನಾಟಕ  ಆದಿಜಾಂಬವ ಅಭಿವೃದ್ಧಿ ನಿಗಮದ ಕಲಂ 29(1)ರನ್ವಯ ಮುಂದಿನ ಆದೇಶದವರೆಗೆ ತಕ್ಷಣ ಜಾರಿಗೆ ಬರುವಂತೆ ಅಧ್ಯಕ್ಷರಾಗಿ ನೇಮಿಸಿ ಆದೇಶಿಸಲಾಗಿದೆ.

ಇದನ್ನೂ ಓದಿ: ಕಾರ್ಯಕರ್ತರಿಗೆ ಕಾಂಗ್ರೆಸ್ ಸಿಹಿ ಸುದ್ದಿ: 44 ಮಂದಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ

ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಎನ್.ಜಯದೇವ ನಾಯ್ಕ್​ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ಕಂಪನಿ ಆಕ್ಟ್​ 1956ರ ಮೆಮೊರಂಡಮ್​ ಆಫ್​ ಅಸೋಸಿಯೇಷನ್​ ಆಫ್ ದಿ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿಯ ಬೆಂಗಳೂರಿಗೆ  ಮುಂದಿನ ಆದೇಶದವರೆಗೆ ತಕ್ಷಣ ಜಾರಿಗೆ ಬರುವಂತೆ ಅಧ್ಯಕ್ಷರಾಗಿ ನೇಮಿಸಿ ಆದೇಶಿಸಲಾಗಿದೆ.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನಾಳೆ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದಾರೆ. ನಾಳೆ ಮಧ್ಯಾಹ್ನ 12 ಗಂಟೆಗೆ ಡಿಜಿ&ಐಜಿಪಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಿರುವ ಸಿಎಂ, ಕಾನೂನು ಮತ್ತು ಸುವ್ಯವಸ್ಥೆ ಬಗ್ಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು