ನಾಳೆಯಿಂದ 2 ದಿನ ಮೈಸೂರು, ಕೊಡಗು ಜಿಲ್ಲಾ ಪ್ರವಾಸ ಕೈಗೊಂಡ ಸಿಎಂ ಸಿದ್ದರಾಮಯ್ಯ

| Updated By: ಗಂಗಾಧರ​ ಬ. ಸಾಬೋಜಿ

Updated on: Jan 23, 2024 | 10:33 PM

ಸಿಎಂ ಸಿದ್ದರಾಮಯ್ಯ ಅವರು ನಾಳೆಯಿಂದ 2 ದಿನ ಮೈಸೂರು ಮತ್ತು ಕೊಡಗು ಜಿಲ್ಲಾ ಪ್ರವಾಸದಲ್ಲಿದ್ದಾರೆ. ಮೈಸೂರಿನಲ್ಲಿ ಜಲಸಂಪನ್ಮೂಲ ಮತ್ತು ಕಾವೇರಿ ನೀರಾವರಿ ನಿಗಮ ನಿಯಮಿತ ಮತ್ತು 150 ಕೆರೆ, ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ಉದ್ಘಾಟನೆ ಸಭೆ ಮಾಡಲಿದ್ದಾರೆ. ಬಳಿಕ ಜ. 25 ರಂದು ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ಕೊಡಗು ಜಿಲ್ಲೆಗೆ ತೆರಳಲಿದ್ದಾರೆ.

ನಾಳೆಯಿಂದ 2 ದಿನ ಮೈಸೂರು, ಕೊಡಗು ಜಿಲ್ಲಾ ಪ್ರವಾಸ ಕೈಗೊಂಡ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us on

ಬೆಂಗಳೂರು, ಜನವರಿ 23: ನಾಳೆಯಿಂದ 2 ದಿನ ಸಿಎಂ ಸಿದ್ದರಾಮಯ್ಯ (Siddaramaiah) ಮೈಸೂರು ಮತ್ತು ಕೊಡಗು ಜಿಲ್ಲಾ ಪ್ರವಾಸದಲ್ಲಿದ್ದು, ಬೆಳಿಗ್ಗೆ 10 ಗಂಟೆಗೆ HAL ನಿಂದ ಮೈಸೂರಿಗೆ ತೆರಳಲಿದ್ದಾರೆ. ಜಲಸಂಪನ್ಮೂಲ ಮತ್ತು ಕಾವೇರಿ ನೀರಾವರಿ ನಿಗಮ ನಿಯಮಿತ ಮತ್ತು 150 ಕೆರೆ, ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ಉದ್ಘಾಟನೆ ಸಭೆ ಮಾಡಲಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ ಮುತ್ತಿನಮುಳುಸೋಗೆ ಗ್ರಾಮದ ಹತ್ತಿರ ಕಾವೇರಿ ನದಿನಿಂದ ನೀರೆತ್ತಿ 79 ಗ್ರಾಮಗಳಲ್ಲಿ ಬರುವ 150 ಕೆರೆಗಳು ಹಾಗೂ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯ ಉದ್ಘಾಟನೆ ಮತ್ತು ಸಾರ್ವಜನಿಕ ಸಭೆ ಮುಗಿಸಿ ನಾಳೆ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ಜ. 25 ರಂದು ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ಕೊಡಗು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ ಬೆಳೆಸಲಿದ್ದು, ಕೊಡಗಿನಲ್ಲಿ ಕಾನೂನು ಸಲಹೆಗಾರ/ಶಾಸಕ ಎ.ಎಸ್ ಪೊನ್ನಣ್ಣ ನಿವಾಸಕ್ಕೆ ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಅವರೇ! ನಿಮ್ಮ ನಾಯಕನನ್ನ ನೋಡಲು 2000 ಜನ ಬರ್ತಿಲ್ಲ, ಅಸ್ಸಾಂ ಸಿಎಂ ಟಾಂಗ್

ಗುರುವಾರ ಕೊಡಗು ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಬಳಿಕ ಸಂಜೆ ಬೆಂಗಳೂರಿಗೆ ಸಿಎಂ ಸಿದ್ದರಾಮಯ್ಯ ವಾಪಾಸ್ ಆಗಲಿದ್ದಾರೆ.

ರಾಮಮಂದಿರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡ್ತಿದೆ: ಸಿಎಂ

ಆಯೋಧ್ಯೆಗೆ ಜನರನ್ನ ಕಳುಹಿಸಲು ಬಿಜೆಪಿ ಪ್ಲ್ಯಾನ್ ವಿಚಾರವಾಗಿ ಇಂದು ನಗರದಲ್ಲಿ ಮಾತನಾಡಿರುವ ಅವರು, ರಾಮಮಂದಿರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ನಾವು ವಿರೋಧಿಸುತ್ತಿರುವುದು ಬಿಜೆಪಿ ರಾಜಕೀಯವನ್ನು. ನಾವು ಬಿಜೆಪಿಯ ಶ್ರೀರಾಮನನ್ನ ವಿರೋಧ ಮಾಡುತ್ತಿದ್ದೇವೆ ಎಂದು ವಾಗ್ದಾಳಿ ಮಾಡಿದ್ದಾರೆ.

ಮಹಾತ್ಮ ಗಾಂಧೀಜಿಯವರ ರಾಮನನ್ನ ಆರಾಧಿಸುತ್ತೇವೆ. ಕರ್ನಾಟಕದಲ್ಲಿ ರಾಮಮಂದಿರಗಳು ಇಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ. ಎಲ್ಲೆಲ್ಲೂ ರಾಮಮಂದಿರಗಳಿವೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಯಾತ್ರೆ ತಡೆಯುವ ಕೆಲಸ ಬಿಜೆಪಿ ಮಾಡುತ್ತಿದೆ

ಅಸ್ಸಾಂನ ಗುವಾಹಟಿಯಲ್ಲಿ ರಾಹುಲ್ ಗಾಂಧಿ ಯಾತ್ರೆಗೆ ತಡೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಪಾದಯಾತ್ರೆ ‌ಮಟ್ಟುಹಾಕುವುದು ಸ್ವಾತಂತ್ರ್ಯವನ್ನು ಕಸಿದ ಹಾಗೇ. ದೇಶದ ಸಮಸ್ಯೆಗಳಿಗಾಗಿ ರಾಹುಲ್ ಪಾದಯಾತ್ರೆ ಮಾಡುತ್ತಿದ್ದಾರೆ. ಅದನ್ನು ತಡೆಯುವ ಕೆಲಸ ಬಿಜೆಪಿ, ಹಲವು ಪುಂಡರು ಮಾಡುತ್ತಿದ್ದಾರೆ. ಇದಕ್ಕಾಗಿ ಬಿಜೆಪಿಯ ವಿರುದ್ಧ ಕಾಂಗ್ರೆಸ್ ಪಕ್ಷ ಪ್ರತಿಭಟನೆ ಮಾಡುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ಖನಿಜ ಬ್ಲಾಕ್​ಗಳ ಹರಾಜು, ನಿರ್ವಹಣೆಯಲ್ಲಿ ಕರ್ನಾಟಕಕ್ಕೆ 3ನೇ ಸ್ಥಾನ: ಪ್ರಶಸ್ತಿ ಸ್ವೀಕರಿಸಿದ ಸಚಿವ ಎಸ್​ಎಸ್​ ಮಲ್ಲಿಕಾರ್ಜುನ

ನಿಗಮ ಮಂಡಳಿಗಳಿಗೆ ಶಾಸಕರ ನೇಮಕ ಎಲ್ಲಾ ಕ್ಲಿಯರ್ ಆಗಿದೆ. ಪಕ್ಷದ ಕಾರ್ಯಕರ್ತರ ನೇಮಕದ ಬಗ್ಗೆ ಚರ್ಚೆಯಾಗುತ್ತಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಜತೆ ಚರ್ಚೆ ನಡೆಸುತ್ತಿದ್ದೇವೆ. ಪಟ್ಟಿಗೆ AICC ಪ್ರ. ಕಾರ್ಯದರ್ಶಿ ವೇಣುಗೋಪಾಲ್ ಸಹಿ ಆಗಬೇಕಿದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.