AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕ್ಫ್ ಆಸ್ತಿ ಕಾಪಾಡುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲೇ ಘೋಷಿಸಿತ್ತು: ಸಿಎಂ ವಾಗ್ದಾಳಿ

ಕರ್ನಾಟಕದಲ್ಲಿ ವಕ್ಫ್​ ಆಸ್ತಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ಒಂದು ಕಡೆ ರೈತರ ಜಮೀನಿನ ಪಹಣಿಗಳಲ್ಲಿ ವಕ್ಪ್ ಹೆಸರು ಬರುತ್ತುದ್ದರೆ, ಇನ್ನು ಕೆಲವೆಡೆ ಲೇಔಟ್, ಮಠ ಮಾನ್ಯಗಳ ಆಸ್ತಿಗಳಲ್ಲೂ ಸಹ ವಕ್ಫ್​ ಎಂದು ಹೆಸರು ನಮೂದಾಗಿದೆ. ಇದರಿಂದ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದ್ದು, ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ. ಇನ್ನು ಇದಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ವಕ್ಫ್ ಆಸ್ತಿ ಕಾಪಾಡುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲೇ ಘೋಷಿಸಿತ್ತು: ಸಿಎಂ ವಾಗ್ದಾಳಿ
ಸಿದ್ದರಾಮಯ್ಯ
ರಮೇಶ್ ಬಿ. ಜವಳಗೇರಾ
|

Updated on: Nov 04, 2024 | 4:41 PM

Share

ಹುಬ್ಬಳ್ಳಿ, (ನವೆಂಬರ್ 04) : ವಕ್ಫ್ ಆಸ್ತಿ (Waqf Board) ಒತ್ತುವರಿ ತೆರವುಗೊಳಿಸುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲೇ ಘೋಷಿಸಿತ್ತು. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು. ಅವರೇ ಹೇಳಿದ್ದ ಮಾತುಗಳಿಗೆ ಈಗ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜಕಾರಣಕ್ಕಾಗಿ ಈ ವಿಚಾರವನ್ನು ಇಟ್ಟುಕೊಂಡು ಹೋರಾಡುತ್ತಿದ್ದಾರೆ. ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟಿಸ್‌ ಕೊಟ್ಟಿದ್ದಾರೆ, ಎಲ್ಲಾ ಕಾಲದಲ್ಲಿಯೂ ನೋಟಿಸ್‌ ನೀಡಲಾಗಿದೆ ಎಂದು ಜನರಿಗೆ ಅರ್ಥವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ವಕ್ಫ್​ ವಿವಾದ ಬೆನ್ನಲ್ಲೇ ರೈತರ ಪಹಣಿ ಸಿಗದಂತೆ ಸರ್ವರ್ ಡೌನ್: ಸರ್ಕಾರದ ವಿರುದ್ಧ ಯತ್ನಾಳ್​ ಆರೋಪ

ನಾನು ಸಚಿವರಾದ ಎಚ್.ಕೆ ಪಾಟೀಲ್, ಕೃಷ್ಣ ಬೈರೇಗೌಡ ಅವರೊಂದಿಗೆ ಸಭೆ ನಡೆಸಿ ಯಾವುದೇ ನೋಟಿಸ್‌ ನೀಡಿದ್ದಲ್ಲಿ ಅದನ್ನು ವಾಪಸ್ಸು ಪಡೆಯಬೇಕು ಅಥವಾ ವಿಚಾರಣೆ ಇಲ್ಲದೆಯೇ ಯಾವುದಾದರೂ ಪಹಣಿ ದಾಖಲೆ ಬದಲಾವಣೆಯಾಗಿದ್ದರೆ ಅದನ್ನು ರದ್ದು ಮಾಡಬೇಕು ಹಾಗೂ ಯಾವುದೇ ಕಾರಣಕ್ಕೂ ರೈತರನ್ನು ಒಕ್ಕಲೆಬ್ಬಿಸಬಾರದು ಎಂದು ಸ್ಪಷ್ಟ ನಿರ್ದೇಶನ ನೀಡಿದ್ದಾಗಿದೆ. ಮುಸ್ಲಿಂ , ಹಿಂದು, ಕ್ರಿಶ್ಚಿಯನ್ ಆಗಿರಲಿ, ಒಕ್ಕಲೆಬ್ಬಿಸಬಾರದು ಎಂದು ಬಹಳ ಸ್ಪಷ್ಟವಾಗಿ ಹೇಳಿದ್ದೇನೆ ಎಂದರು.

ವಕ್ಫ್ ಆಸ್ತಿ ವಿಚಾರ ನಮಗೆ ಗೊತ್ತಾದ ತಕ್ಷಣವೇ ನೋಟಿಸ್‌ ಹಿಂಪಡೆಯಲಾಗಿದೆ. ಬಿಜೆಪಿ ಅವಧಿಯಲ್ಲಿ 216 ಪ್ರಕರಣಗಳಲ್ಲಿ ನೋಟಿಸ್‌ ಕೊಟ್ಟಿದ್ದರು. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಎಚ್.ಡಿ ಕುಮಾಸ್ವಾಮಿ ಇದ್ದಾಗ ಏಕೆ ನೋಟಿಸ್‌ ಕೊಟ್ಟಿದ್ದಾರೆ. ಬಿಜೆಪಿಯ ಈ ಡಬ್ಬಲ್ ಗೇಮ್ ವಿಚಾರವನ್ನು ಜನರಿಗೆ ನಾವು ತಲುಪಿಸುತ್ತಿದ್ದೇವೆ ಎಂದು ತಿಳಿಸಿದರು.

16ನೇ ಹಣಕಾಸು ಆಯೋಗದವರು ಬೆಂಗಳೂರಿಗೆ ಭೇಟಿ ನೀಡಿದಾಗ 15ನೇ ಹಣಕಾಸು ಆಯೋಗದಿಂದ ಕರ್ನಾಟಕಕ್ಕೆ ಅನ್ಯಾಯವಾಗಿರುವ ಬಗ್ಗೆ ಗಮನ ಸೆಳೆದಿದ್ದೇವೆ. ಸುಮಾರು 4.50 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಮೊತ್ತವನ್ನು ವರ್ಷಕ್ಕೆ ತೆರಿಗೆ ನೀಡುತ್ತಿದ್ದೇವೆ. ಅದರಲ್ಲಿ ನಮಗೆ ವಾಪಸ್ಸು ಬರುವುದು ₹55 ರಿಂದ ₹60 ಸಾವಿರ ಕೋಟಿ ಮಾತ್ರ. ಇದು ನ್ಯಾಯವೇ? ಈ ಬಗ್ಗೆ ನಾವು ನ್ಯಾಯಕ್ಕಾಗಿ ಹೋರಾಡುತ್ತಿದ್ದೇವೆ. ಬಿಜೆಪಿಯ ಪ್ರಹ್ಲಾದ್ ಜೋಶಿ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರು ಈ ಬಗ್ಗೆ ಮಾತನಾಡಿದ್ದಾರೆಯೇ? ಎಂದು ಪ್ರಶ್ನಿಸಿದರು.

ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದರೆ ಅದು ರಾಜಕೀಯ ಎಂದರು, ಇದಕ್ಕೆ ಏನು ಹೇಳಬೇಕು? ನ್ಯಾಯಾಲಯಕ್ಕೆ ಹೋದರೆ ನ್ಯಾಯ ಸಿಗುತ್ತದೆ ಎಂದು ಭಾವಿಸಿಲ್ಲ, ಏಕೆಂದರೆ 5 ವರ್ಷಕ್ಕೊಮ್ಮೆ ಸಂವಿಧಾನದ ಪ್ರಕಾರ ಹಣಕಾಸಿನ ಆಯೋಗ ರಚನೆಯಾಗುತ್ತದೆ. ಅವರ ಶಿಫಾರಸ್ಸಿನ ಮೇಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಹೋಗಬೇಕಾದ ತೆರಿಗೆ ಬಗ್ಗೆ ನಿರ್ಧಾರವಾಗುತ್ತದೆ. 15ನೇ ಹಣಕಾಸು ಆಯೋಗದವರು ಕೆಲವು ಶಿಫಾರಸ್ಸು ಮಾಡಿದ್ದಾರೆ. ₹5,495 ಕೋಟಿ ರೂಪಾಯಿಗಳನ್ನು ವಿಶೇಷ ಅನುದಾನ ನೀಡಬೇಕೆಂದು ಹೇಳಿದ್ದರು. ಪೇರಿಫೆರಲ್ ರಿಂಗ್ ರೋಡ್ ಹಾಗೂ ಕೆರೆಗಳ ಅಭಿವೃದ್ಧಿಗೆ ತಲಾ 3000 ಕೋಟಿ ರೂಪಾಯಿ ನೀಡಲು ಶಿಫಾರಸ್ಸು ಮಾಡಿದ್ದರು. ಒಟ್ಟು 11,495 ಕೋಟಿಗಳನ್ನು ಕೊಡಬೇಕಿತ್ತು, ಆದರೆ ಕೊಟ್ಟಿಲ್ಲ. ಪ್ರಹ್ಲಾದ ಜೋಶಿಯವರು ಇದನ್ನು ಕೇಂದ್ರದಿಂದ ಕೇಳಬೇಕಲ್ಲವೇ? ಎಂದು ವಾಗ್ದಾಳಿ ನಡೆಸಿದರು.

11,495 ಕೋಟಿ ಕೊಟ್ಟಿದ್ದಾರೆಯೇ? ಕೊಟ್ಟಿದ್ದರೆ ನಾನು ರಾಜಕೀಯ ಬಿಟ್ಟುಬಿಡುವೆ. ಈ ಸವಾಲು ಸ್ವೀಕರಿಸಿ ಪ್ರಹ್ಲಾದ ಜೋಶಿ ರಾಜಕೀಯ ಬಿಡುತ್ತಾರೆಯೇ? ಬಿಜೆಪಿಯವರು ಗ್ಯಾರಂಟಿಗೆ ವಿರುದ್ಧವಾಗಿದ್ದಾರೆ. ಗ್ಯಾರಂಟಿ ಯೋಜನೆಗಳ ಮೂಲಕ ಎಲ್ಲಾ ಜಾತಿ ಧರ್ಮದವರಿಗೆ ಆರ್ಥಿಕ ಹಾಗೂ ಸಾಮಾಜಿಕ ಶಕ್ತಿ ತುಂಬುತ್ತಿದ್ದೇವೆ. ಅವರು ಮುಖ್ಯವಾಹಿನಿಗೆ ಬರಬೇಕೆಂದು ಈ ಕಾರ್ಯ ಮಾಡುತ್ತಿದ್ದೇವೆ. ಬಿಜೆಪಿಯವರಿಗೆ ಸಮಾನತೆ ಬರಬಾರದು. ಬಡವರು ಇರಬೇಕು. ಅದಕ್ಕೆ ಅವರನ್ನು ಬಡವರ ವಿರೋಧಿಗಳು ಎಂದು ಕರೆಯುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಕ್ತಿ ಇಲ್ಲದಿದ್ದರೆ ತಾನೇ ದುರುಪಯೋಗ ಮಾಡಿಕೊಳ್ಳಲು ಸಾಧ್ಯವಾಗುವುದು. ಆರ್ಥಿಕ, ಸಾಮಾಜಿಕ ಶಕ್ತಿ ಬಡವರಿಗೆ ಬರಬಾರದೆಂಬ ತತ್ವದಲ್ಲಿ ಬಿಜೆಪಿಗೆ ನಂಬಿಕೆ ಇದೆ. ಬಿಜೆಪಿ ಪಕ್ಷ 600 ಭರವಸೆಗಳನ್ನು 2018 ರಲ್ಲಿ ನೀಡಿತ್ತು. ಅವುಗಳಲ್ಲಿ ಎಷ್ಟು ಈಡೇರಿಸಿದ್ದಾರೆ? ನಾವು 165 ಭರವಸೆ ಕೊಟ್ಟು 158 ಈಡೇರಿಸಿದ್ದಾಗಿ ಲೆಕ್ಕ ಕೊಡುತ್ತಿದ್ದೇವೆ. ಅವರು ಎಷ್ಟು ಭರವಸೆ ನೀಡಿ ಎಷ್ಟನ್ನು ಈಡೇರಿಸಿದ್ದಾರೆ ಎನ್ನುವ‌ ಲೆಕ್ಕ ಕೊಡುತ್ತಾರೆಯೇ? ವಕ್ಫ್ ವಿಚಾರವಾಗಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತಿದೆ. ಅವರು ಯಾವಾಗಲೂ ನೈಜ ವಿಷಯಗಳನ್ನು ಬಿಟ್ಟು ಸುಳ್ಳು ಆರೋಪಗಳನ್ನು ಮಾಡುವುದು, ರಾಜಕಾರಣಕ್ಕಾಗಿ ಪ್ರತಿಭಟನೆ ಮಾಡುವುದು ಇದನ್ನು ಮಾತ್ರ ಮಾಡುತ್ತಾರೆ

ಮಾಜಿ ಸಂಸದ ಪ್ರತಾಪ್ ಸಿಂಹ ಒಬ್ಬ ಮಹಾನ್ ಕೋಮುವಾದಿ. ಕೋಮುವಾದಿಗಳಿಂದ ಇನ್ನೇನು ನಿರೀಕ್ಷೆ ಮಾಡಲಾಗುತ್ತದೆ? ಅವರಿಗೆ ಸಂವಿಧಾನ, ಪ್ರಜಾಪ್ರಭುತ್ವದ ಬಗ್ಗೆ ಗೌರವವಿಲ್ಲ. ಕೋಮುವಾದ ಮಾಡುವುದೇ ಅವರ ಕಸುಬು. ಸಮಾಜವನ್ನು ಜಾತಿ, ಧರ್ಮದ ಹೆಸರಿನಲ್ಲಿ ಒಡೆಯುವುದೇ ಅವರ ರಾಜಕಾರಣ. ಕೋಮುವಾದದಲ್ಲಿ ತೊಡಗಿ ರಾಜಕೀಯದಲ್ಲಿ ಬದುಕಲು ಹಾಗೂ ಮತ ಪಡೆಯಲು ಪ್ರಯತ್ನ ಮಾಡುತ್ತಾರೆ ಎಂದು ತಿರುಗೇಟು ನೀಡಿದರು.

ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಯಲ್ಲವೇ? ಹಿಂದೆ ಮುಖ್ಯಮಂತ್ರಿ ಆಗಿದ್ದಾಗ 165 ಭರವಸೆ ಕೊಟ್ಟು 158 ಭರವಸೆಗಳನ್ನು ಈಡೇರಿಸಿದೆವು.. ಅವು ಅಭಿವೃದ್ಧಿಯಲ್ಲವೆ? 3 ಲಕ್ಷದ 71 ಸಾವಿರ ಕೋಟಿ ರೂಪಾಯಿಗಳಲ್ಲಿ 52 ಸಾವಿರ ಕೋಟಿ ಗ್ಯಾರಂಟಿಗಳಿಗೆ ವೆಚ್ಚ ಮಾಡುತ್ತಿದ್ದೇವೆ. ಸುಮಾರು 60 ಸಾವಿರ ಕೋಟಿ ಅಭಿವೃದ್ಧಿಗೆ ವೆಚ್ಚ ಮಾಡುತ್ತಿದ್ದೇವೆ. ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ರಸ್ತೆ, ಸೇತುವೆ, ನಿರ್ಮಾಣಕ್ಕಾಗಿ ವೆಚ್ಚವಾಗುತ್ತಿದೆ. ಇವೆಲ್ಲ ಅಭಿವೃದ್ದಿಯಲ್ಲವೇ? ಎಂದು ಪ್ರಶ್ನಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ