ಹಾಲು ಒಕ್ಕೂಟಗಳ ದರ ಏರಿಕೆ ಒತ್ತಡಕ್ಕೆ ಮಣಿಯದ ಸಿಎಂ: ಸಭೆಯಲ್ಲಿ ಸಿದ್ದರಾಮಯ್ಯ ಹೇಳಿದ್ದೇನು?

| Updated By: ಗಂಗಾಧರ​ ಬ. ಸಾಬೋಜಿ

Updated on: Mar 24, 2025 | 7:36 PM

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ನಂದಿನಿ ಹಾಲಿನ ದರ ಏರಿಕೆ ಕುರಿತ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಮಾಡಲಾಗಿದೆ. ಈ ವೇಳೆ ಒಕ್ಕೂಟದ ಬೇಡಿಕೆಗಳನ್ನು ಆಲಿಸಿ, ಹಾಲಿನ ಬೆಲೆಯೇರಿಕೆಯ ಸಂಬಂಧ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಹಾಲು ಒಕ್ಕೂಟಗಳ ದರ ಏರಿಕೆ ಒತ್ತಡಕ್ಕೆ ಮಣಿಯದ ಸಿಎಂ: ಸಭೆಯಲ್ಲಿ ಸಿದ್ದರಾಮಯ್ಯ ಹೇಳಿದ್ದೇನು?
ಹಾಲು ಒಕ್ಕೂಟಗಳ ದರ ಏರಿಕೆ ಒತ್ತಡಕ್ಕೆ ಮಣಿಯದ ಸಿಎಂ: ಸಭೆಯಲ್ಲಿ ಸಿದ್ದರಾಮಯ್ಯ ಹೇಳಿದ್ದೇನು?
Follow us on

ಬೆಂಗಳೂರು, ಮಾರ್ಚ್​ 24: ನಂದಿನಿ ಹಾಲಿನ ದರ (Nandini milk Prce) ಏರಿಕೆ ಸಂಬಂಧ ಇಂದು ಸಿಎಂ  ಸಿದ್ದರಾಮಯ್ಯ (Siddaramaiah) ಮಹತ್ವದ ಸಭೆ ಮಾಡಿದ್ದಾರೆ. ಪ್ರತಿ ಲೀಟರ್ ಹಾಲಿಗೆ 5 ರೂ. ದರ ಹೆಚ್ಚಿಸುವಂತೆ ಒಕ್ಕೂಟದ ಒತ್ತಾಯಕ್ಕೆ ಮಣಿಯದ ಸಿಎಂ, ಹಾಲು ಒಕ್ಕೂಟಗಳು ಇರುವುದು ರೈತರಿಗೆ  ಅನುಕೂಲ ಮಾಡುವುದಕ್ಕೆ ಮಾತ್ರ, ಲಾಭ ಮಾಡುವುದಕ್ಕಲ್ಲ. ದರ ಏರಿಕೆ ಮಾಡಿದರೂ ನೇರವಾಗಿ ರೈತರಿಗೆ ತಲುಪಬೇಕು. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ದರ ಹೆಚ್ಚಳದ ಬಗ್ಗೆ ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ, ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿ, ಒಕ್ಕೂಟದ ಬೇಡಿಕೆಗಳನ್ನು ಆಲಿಸಿ, ಹಾಲಿನ ಬೆಲೆಯೇರಿಕೆಯ ಸಂಬಂಧ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಇಂದೇ ಮಹತ್ವದ ನಿರ್ಧಾರ ಸಾಧ್ಯತೆ
ಹಾಲು ಉತ್ಪಾದಕರ 656 ಕೋಟಿ ರೂ. ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡ ಸರ್ಕಾರ
ನಂದಿನಿ ಹಾಲಿನ ದರ ಏರಿಕೆ ಬಗ್ಗೆ KMF ಅಧ್ಯಕ್ಷ ನೀಡಿದ್ರು ಬಿಗ್​ ಅಪ್ಡೇಟ್​
ಇಂದಿನಿಂದ ದೆಹಲಿಯಲ್ಲೂ ನಂದಿನಿ ಉತ್ಪನ್ನಗಳ ಮಾರಾಟ, ಸಿದ್ದರಾಮಯ್ಯ ಚಾಲನೆ

ಇದನ್ನೂ ಓದಿ: Nandini milk Price: ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ, ಮಹತ್ವದ ನಿರ್ಧಾರ ಸಾಧ್ಯತೆ

ಹಾಲಿನ ದರ ಹೆಚ್ಚಳ ಕುರಿತು ಒಕ್ಕೂಟಗಳ ಅಭಿಪ್ರಾಯ ಸಂಗ್ರಹಿಸಲಾಗಿದೆ. ದರ ಏರಿಕೆ ಮಾಡಬೇಕು ಎಂಬ ಒತ್ತಾಯವಿದೆ ಆದರೆ ದರ ಹೆಚ್ಚಳ ಮಾಡಿದರೆ ಮೊತ್ತವು ಸಂಪೂರ್ಣವಾಗಿ ರೈತರಿಗೆ ಮಾತ್ರವೇ ವರ್ಗಾವಣೆಯಾಗಬೇಕು ಎಂಬುದು ಸರ್ಕಾರದ ದೃಢ ನಿಲುವಾಗಿದೆ. ಹಾಲು ಒಕ್ಕೂಟಗಳು ಖರ್ಚು ವೆಚ್ಚ ಕಡಿಮೆ ಮಾಡಬೇಕು. ಪಾರದರ್ಶಕತೆಯನ್ನು ಪಾಲಿಸಬೇಕು. ಒಕ್ಕೂಟಗಳು ಅಗತ್ಯಕ್ಕಿಂತ ಹೆಚ್ಚು ಜನರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಬಾರದು. ಇದರಿಂದಾಗಿಯೇ ವೆಚ್ಚ ಹೆಚ್ಚಾಗುತ್ತಿದೆ. ಅನಗತ್ಯ ಆಡಳಿತಾತ್ಮಕ ವೆಚ್ಚಗಳಿಂದಾಗಿಯೇ ಕೆಲವು ಒಕ್ಕೂಟಗಳು ನಷ್ಟ ಅನುಭವಿಸುವಂತಾಗಿದೆ ಎಂದಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್ 

ಮುಂದಿನ ಮೂರು ತಿಂಗಳಲ್ಲಿ ಆಡಳಿತಾತ್ಮಕ ವೆಚ್ಚವನ್ನು 2.5% ಕಡ್ಡಾಯವಾಗಿ ಇಳಿಸಬೇಕು. ಅಲ್ಲಿಂದ ಮುಂದಿನ ಮೂರು ತಿಂಗಳ ಒಳಗಾಗಿ ಎಲ್ಲಾ ಒಕ್ಕೂಟಗಳು ಆಡಳಿತಾತ್ಮಕ ವೆಚ್ಚವನ್ನು ಶೇ.2ಕ್ಕಿಂತ ಕೆಳಗೆ ಇಳಿಸಲೇಬೇಕು ಎಂದು ಸೂಚಿಸಿದ್ದಾರೆ.

ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆಯಿದೆ ಎನ್ನುವುದು ನಿಜ. ಹಾಲಿನ ದರ ಹೆಚ್ಚಳ ಮಾಡಿದರೆ ಉತ್ಪಾದನೆ ಹೆಚ್ಚಾಗುತ್ತದೆ. ಇದರ ಲಾಭ ಪೂರ್ಣವಾಗಿ ರೈತರಿಗೆ ತಲುಪಬೇಕು ಎಂಬುವುದು ನಮ್ಮ ಸರ್ಕಾರದ ನಿಲುವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಾಲು ಉತ್ಪಾದಕರ 656 ಕೋಟಿ ರೂ. ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡ ಸರ್ಕಾರ

ಬಳ್ಳಾರಿ ಹಾಲಿನ ಒಕ್ಕೂಟ 1.43 ಕೋಟಿಯಷ್ಟು ನಷ್ಟದಲ್ಲಿದ್ದು, ಫೆಬ್ರವರಿ ಅಂತ್ಯಕ್ಕೆ ಒಟ್ಟು 3 ಒಕ್ಕೂಟಗಳು ನಷ್ಟದಲ್ಲಿವೆ. ನಿರ್ವಹಣಾ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಲಿನ ದರ ಹೆಚ್ಚಳ ಮಾಡಿದರೆ ಸ್ವಲ್ಪ ಮೊತ್ತವನ್ನು ಒಕ್ಕೂಟಗಳಿಗೆ ವರ್ಗಾಯಿಸಲು ಮನವಿ ಮಾಡಿದ್ದು, ಆದರೆ ಹಾಲು ಒಕ್ಕೂಟಗಳ ಮನವಿಗೆ ಸಿಎಂ ಒಪ್ಪಿಗೆ ನೀಡಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವರದಿ: ಈರಣ್ಣ ಬಸವ

Published On - 7:30 pm, Mon, 24 March 25