AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಕಚೇರಿಗಳಲ್ಲಿ ಫೆಬ್ರವರಿ 17ರಂದು ಬಸವಣ್ಣರ ಭಾವಚಿತ್ರ ಹಾಕಲು ಸಿಎಂ ಸಿದ್ದರಾಮಯ್ಯ ಸೂಚನೆ

Basavanna's Portrait: ಇದೇ 17ರಂದು ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ವಿಶ್ವ ಗುರು ಬಸವಣ್ಣನವರ ಭಾವಚಿತ್ರವನ್ನು ಹಾಕುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು ಬಸವಣ್ಣ, ಬುದ್ಧ, ಅಂಬೇಡ್ಕರ್, ಗಾಂಧಿ ಅವರನ್ನು ದೇಶ ಮರೆಯಲಾಗದು ಎಂದು ಹೇಳಿದರು.

ಸರ್ಕಾರಿ ಕಚೇರಿಗಳಲ್ಲಿ ಫೆಬ್ರವರಿ 17ರಂದು ಬಸವಣ್ಣರ ಭಾವಚಿತ್ರ ಹಾಕಲು ಸಿಎಂ ಸಿದ್ದರಾಮಯ್ಯ ಸೂಚನೆ
ಸಿದ್ದರಾಮಯ್ಯ
Follow us
Anil Kalkere
| Updated By: Ganapathi Sharma

Updated on: Feb 13, 2024 | 12:14 PM

ಬೆಂಗಳೂರು, ಫೆಬ್ರವರಿ 13: ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೆಬ್ರವರಿ 17ರಂದು ವಿಶ್ವ ಗುರು ಬಸವಣ್ಣನವರ (Basavanna) ಭಾವಚಿತ್ರ ಹಾಕುವಂತೆ ಸಿಎಂ ಸಿದ್ದರಾಮಯ್ಯ (Siddaramaiah) ಮಂಗಳವಾರ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಸವಣ್ಣ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದ ಅವರು, ಬಸವಣ್ಣನವರ ಭಾವಚಿತ್ರದಲ್ಲಿ ‘ವಿಶ್ವ ಗುರು ಬಸವಣ್ಣ -ಸಾಂಸ್ಕೃತಿಕ ನಾಯಕ’ ಎಂದು ನಮೂದಿಸಲು ಸೂಚನೆ ನೀಡಲಾಗಿದೆ. ಮನುಷ್ಯ ಮನುಷ್ಯನನ್ನು ಪ್ರೀತಿಸಿದರೆ ಸದ್ಗುಣ. ಮನುಷ್ಯ ಮನುಷ್ಯರನ್ನು ದ್ವೇಷಿಸಿದರೆ ದುರ್ಗುಣ ಎಂದು ಹೇಳಿದರು.

ನಾನೇನು ಕುರುಬ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿದ್ದೆನಾ? ನಾನು ಹುಟ್ಟಿದ್ದೇನೆ, ಜಾತಿ ವ್ಯವಸ್ಥೆ ಇದೆ. ಕರ್ಮ ಅನ್ನೋದು ಇದು ಪಟ್ಟಭದ್ರ ಹಿತಾಸಕ್ತಿಗಳು ಮಾಡಿದ್ದು. ಬಸವಣ್ಣನವರ ಕಾರ್ಯಕ್ರಮಕ್ಕೆ ಸರ್ಕಾರದಲ್ಲಿ ದುಡ್ಡು ಇಲ್ಲ ಎಂಬುದಾಗಿ ಹೇಳುವುದಿಲ್ಲ ಎಂದು ಸಿಎಂ ಹೇಳಿದರು.

ಬುದ್ಧ, ಬಸವ, ಅಂಬೇಡ್ಕರ್, ಗಾಂಧಿ ಮರೆಯಲು ಆಗುವುದಿಲ್ಲ. ಈ 4 ಜನರ ಹೆಸರನ್ನು ದೇಶ ಮರೆಯುವುದಕ್ಕೆ ಆಗುವುದಿಲ್ಲ. ಇವರೆಲ್ಲ ಸಮಾಜದಲ್ಲಿರುವ ಅಂಕು ಡೊಂಕು ತಿದ್ದಿದವರು. ಸಮಾಜದ ಬದಲಾವಣೆಗಾಗಿ ಅಸಮಾನತೆ ಹೋಗಬೇಕು ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದರು.

ಇದನ್ನೂ ಓದಿ: ಚುನಾವಣೆ ಹೊತ್ತಲ್ಲೇ ಬೆಳಗಾವಿ ಜಿಲ್ಲೆ ವಿಭಜನೆಗೆ ಆಸಕ್ತಿ ತೋರಿಸಿದ ಸರ್ಕಾರ

ಸಂಸದೀಯ ವ್ಯವಸ್ಥೆ ನಮ್ಮಿಂದ ಬಂತು ಎಂದು ಬ್ರಿಟಿಷರು ಹೇಳುತ್ತಾರೆ. ಆದರೆ ಅದು ನಮ್ಮ ಬಸವಣ್ಣನವರ ಕಾಲದಲ್ಲೇ ಬಂದಿದೆ. ಅನುಭವ ಮಂಟಪದ ಮೂಲಕ ಸಂಸದೀಯ ವ್ಯವಸ್ಥೆ ತಂದಿದ್ದಾರೆ. ನಾವೀಗ ಸಂಸತ್ತು ಅಂತ ಯಾವುದನ್ನು ಹೇಳುತ್ತೇವೆಯೋ, ಆಗಲೇ ಜನರ ಧ್ವನಿ ಎತ್ತಲು ಬಸವಣ್ಣ ಅನುಭವ ಮಂಟಪವನ್ನು ಮಾಡಿದ್ದರು. ಮಹಿಳೆಯರಿಗೆ ಸ್ವಾತಂತ್ರ್ಯ ಇರಲಿಲ್ಲ. ಮನವಾದಿಗಳು ಕೆಲವು ಕೆಟ್ಟ ಸಂಪ್ರದಾಯಗಳನ್ನ ಮಾಡಿಬಿಟ್ಟಿದ್ದರು. ಇದರಿಂದ ಅಸಮಾನತೆ ಹುಟ್ಟು ಹಾಕಿದ್ದರು. 850 ವರ್ಷಗಳ ಹಿಂದೆಯೇ ಬಸವಣ್ಣವರು ಕಂದಚಾರವನ್ನು ಹೊಗಲಾಡಿಸಲು ಶ್ರಮಿಸಿದ್ದರು ಎಂದು ಅವರು ಹೇಳಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ