ರಾಜ್ಯಾದ್ಯಂತ ಡೆಂಗ್ಯೂ ಉಲ್ಬಣ: ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಡೆಂಗ್ಯೂ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯಾದ್ಯಂತ ಡೆಂಗ್ಯೂ ಉಲ್ಬಣ: ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಸಿಎಂ ಸಿದ್ದರಾಮಯ್ಯ
Follow us
Anil Kalkere
| Updated By: ವಿವೇಕ ಬಿರಾದಾರ

Updated on: Sep 11, 2023 | 11:04 AM

ಬೆಂಗಳೂರು: ರಾಜ್ಯಾದ್ಯಂತ ಡೆಂಗ್ಯೂ (Dengue) ರೋಗ ಪ್ರಕರಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು ಏಳು ಸಾವಿರಕ್ಕೂ ಅಧಿಕ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಡೆಂಗ್ಯೂ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಔಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ. ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ. ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸಿ. ಡೆಂಗ್ಯೂ ಬಗ್ಗೆ ಭಯ ಬೇಡ, ಜಾಗೃತೆಯಿರಲಿ ಎಂದರು.

ಡೆಂಗ್ಯೂ ರೋಗಕ್ಕೆ 7 ಜನ ಸಾವು

ಡೆಂಗ್ಯೂ ರೋಗದಿಂದ ಕಳೆದ ಮೂರು ತಿಂಗಳಲ್ಲಿ ನಗರದಲ್ಲಿ ಏಳು ಜನ ಮೃತಪಟ್ಟಿದ್ದರು. ಕಳೆದ ಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಾವು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಕಳೆದ ಒಂದು ತಿಂಗಳಿನಿಂದ ನಗರದಲ್ಲಿ ಡೆಂಗ್ಯೂ ರೋಗ ಆತಂಕಕಾರಿಯಾಗಿ ಏರಿಕೆ ಕಂಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಅಧಿಕಾರಿಗಳ ಪ್ರಕಾರ, ನಗರದಲ್ಲಿ ಈ ವರ್ಷ ಸೆ.08ರವರೆಗೆ 5,000 ಡೆಂಗ್ಯೂ ರೋಗ ಪ್ರಕರಣಗಳು ವರದಿಯಾಗಿದ್ದವು. ಆಗಸ್ಟ್‌ನಲ್ಲಿ 2,374 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದವು.

ಇದನ್ನೂ ಓದಿ: ಡೆಂಗ್ಯೂ ಪ್ರಕರಣ ಹೆಚ್ಚಾದರು ಅಧಿಕಾರಿಗಳ ನಿರ್ಲಕ್ಷ್ಯ: ಬೆಂಗಳೂರಿನ ಪ್ರತಿಷ್ಠಿತ ಏರಿಯಾ ಜನರ ಗೋಳು ಕೇಳೋರಿಲ್ಲ

ಡೆಂಗ್ಯೂ ಪ್ರಕರಣಗಳ ನಿಯಂತ್ರಣ ಕುರಿತು ಬಿಬಿಪಿಎಂ ಅಧಿಕಾರಿಗಳ ಜೊತೆ ಸೆ.7 ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಿ ಸೆಪ್ಟೆಂಬರ್​​ನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಈ ವೇಳೆ ಡೆಂಗ್ಯೂ ರೋಗ ಉಲ್ಬಣಗೊಳ್ಳದಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದ್ದರು.

ಡೆಂಗ್ಯೂ ಮುಖ್ಯವಾಗಿ ಮಳೆಗೆ ಸಂಬಂಧಿಸಿದೆ. ಮಳೆ ಹೆಚ್ಚಾದಾಗ ಪ್ರಕರಣಗಳು ಹೆಚ್ಚಾಗುತ್ತವೆ. 2022ರ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್‌ ತಿಂಗಳಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು. ಈ ವರ್ಷ ಜುಲೈ ಮತ್ತು ಆಗಸ್ಟ್‌ ತಿಂಗಳಿನಲ್ಲೇ ಹೆಚ್ಚು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಹಾಗೂ ಟೆಸ್ಟಿಂಗ್ ಸ್ಯಾಂಪಲ್ಸ್ ಹೆಚ್ಚಿಸುವಂತೆ ಸೂಚಿಸಿದ್ದರು.

ಹೆಚ್ಚಾಗಿ ಮಡಕೆಗಳು, ಮೀನಿನ ತೊಟ್ಟಿಗಳು, ಅಂಗಳದಲ್ಲಿ ನಿಂತ ನೀರು ಮತ್ತು ಉದ್ಯಾನವನದ ಕೊಳಗಳಲ್ಲಿ ಡೆಂಗ್ಯೋ ಸೊಳ್ಳೆ ವಾಸಿಸುತ್ತವೆ. ಈ ಹಿಂದೆ ಮಹದೇವಪುರ, ಬೊಮ್ಮನಹಳ್ಳಿ ಮತ್ತು ಪೂರ್ವ ವಲಯದ ಪ್ರದೇಶಗಳು ಡೆಂಗ್ಯೂ ಹಾಟ್‌ಸ್ಪಾಟ್‌ಗಳಾಗಿದ್ದವು. ಆದರೆ ಈ ವರ್ಷ ದಕ್ಷಿಣ ವಲಯದಲ್ಲಿ ಹೆಚ್ಚು ಸಂಖ್ಯೆಯ ಪ್ರಕರಣಗಳು ವರದಿಯಾಗಿದ್ದು, ಬೆಚ್ಚಿಬೀಳಿಸಿದೆ.

ಆರೋಗ್ಯ ಕಾರ್ಯಕರ್ತರ ಕೊರತೆ

ಬೆಂಗಳೂರಿನಾದ್ಯಂತ ಆರೋಗ್ಯ ಕಾರ್ಯಕರ್ತರ ಕೊರತೆ ಇದೆ. 1.3 ಕೋಟಿ ಜನಸಂಖ್ಯೆಯ ನಗರಕ್ಕೆ, ಕೇವಲ 1,000 ಆಶಾ ಕಾರ್ಯಕರ್ತೆಯರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಹೆಚ್ಚಿನ ಆಶಾ ಕಾರ್ಯಕರ್ತೆಯರನ್ನು ನೇಮಿಸುವಂತೆ ನಾವು ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಎಂದು ಬಿಬಿಎಂಪಿ ಅಧಿಕಾರಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ