AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಖಡಕ್ ಸೂಚನೆ: ಅನರ್ಹ ಬಿಪಿಎಲ್ ಕಾರ್ಡುದಾರರಿಗೆ ಬಿಗ್ ಶಾಕ್

ಅನರ್ಹರು ಬಿಪಿಎಲ್ ಕಾರ್ಡುದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಗ್ ಶಾಕ್ ಕೊಟ್ಟಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಿಪಿಎಲ್ ಕಾರ್ಡ್​ ಬಗ್ಗೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಸಿದ್ದರಾಮಯ್ಯ  ಖಡಕ್ ಸೂಚನೆ: ಅನರ್ಹ ಬಿಪಿಎಲ್ ಕಾರ್ಡುದಾರರಿಗೆ ಬಿಗ್ ಶಾಕ್
Siddaramaiah
ರಮೇಶ್ ಬಿ. ಜವಳಗೇರಾ
|

Updated on: Sep 10, 2025 | 9:51 PM

Share

ಬೆಂಗಳೂರು, (ಸೆಪ್ಟೆಂಬರ್ 10): ಕರ್ನಾಟಕದಲ್ಲಿ ಅನರ್ಹರಿಗೆ ನೀಡಲಾಗಿದ್ದ ಬಿಪಿಎಲ್ ಪಡಿತರ ಕಾರ್ಡ್ (BPL Cards)​ ಗಳ ಪೈಕಿ ಈಗಾಗಲೇ 3.65 ಲಕ್ಷ ಕಾರ್ಡ್​ ಗಳನ್ನು ಪತ್ತೆ ಮಾಡಿ ರದ್ದುಪಡಿಸಲಾಗಿದ್ದು, ಇನ್ನೂ ಸಾಕಷ್ಟ ಅನರ್ಹರು ಬಿಪಿಎಲ್ ಕಾರ್ಡ್​ ಗಳನ್ಜು ಹೊಂದಿದ್ದಾರೆ. ಅವುಗಳನ್ನು ಪತ್ತೆ ಮಾಡಿ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ಆಹಾರ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈಗಾಗಲೇ ಗುರುತಿಸಲಾಗಿರುವ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಪೈಕಿ 3,65,614 ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯ, ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ಒದಗಿಸುವ ಕುರಿತು ಪರಿಶೀಲನೆ ನಡೆಸಲಾಗುವುದು. ಈ ಕುರಿತು ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಲಿ ಎಂದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಹೊಸ ನ್ಯಾಯ ಬೆಲೆ ಅಂಗಡಿಗಳನ್ನು ಆದ್ಯತೆ ಮೇಲೆ ನೀಡಲು ಕ್ರಮ ಕೈಗೊಳ್ಳಬೇಕು. ಆಹಾರ ಧಾನ್ಯಗಳನ್ನು ಸರಬರಾಜು ಮಾಡುತ್ತಿರುವ ವಾಹನಗಳಿಗೆ ಜಿಪಿಎಸ್ ಟ್ರಾಕರ್‌ಗಳನ್ನು ಅಳವಡಿಸಬೇಕು. ರಾಜ್ಯದಲ್ಲಿರುವ ಎಲ್ಲಾ ಗೋದಾಮುಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕನಿಷ್ಠ ಬೆಂಬಲ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಆಹಾರಧಾನ್ಯಗಳ ಖರೀದಿ ಪ್ರಕ್ರಿಯೆ ನಡೆಸಬೇಕು. ಇದೇ ಪ್ರಥಮ ಬಾರಿಗೆ 0.29 ಲಕ್ಷ ಮೆಟ್ರಿಕ್ ಟನ್ ಕಿರು ಸಿರಿಧಾನ್ಯಗಳನ್ನು ಖರೀದಿಸಲಾಗುತ್ತಿದೆ. ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಖಾಲಿಯಿರುವ ಅಗತ್ಯ ಸಿಬ್ಬಂದಿಗಳ ನೇಮಕಾತಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ