ಬೆಂಗಳೂರು, ಫೆಬ್ರುವರಿ 1: ರಾಜ್ಯ ರಾಜಕೀಯದಲ್ಲಿ ಲೋಕಸಭೆ ಚುನಾವಣಾ ತಯಾರಿಗಳು ನಡೆಯುತ್ತಿವೆ. ಇದೀಗ ಸಿಎಂ ಸಿದ್ದರಾಮಯ್ಯ (Siddaramaiah) ನಿವಾಸದಲ್ಲಿ ಇಂದು ಸಂಪುಟ ಸಚಿವರ ಡಿನ್ನರ್ ಮೀಟಿಂಗ್ ಮಾಡಲಾಗಿದೆ. ಲೋಕಸಭೆ ಚುನಾವಣೆ ವಿಚಾರವಾಗಿ ಅನೌಪಚಾರಿಕವಾಗಿ ಚರ್ಚೆ ಮಾಡುವ ಸಾಧ್ಯತೆಗಳಿದ್ದು, ಮುಂದಿನ ಚುನಾವಣಾ ತಂತ್ರಗಾರಿಕೆ, ಕ್ಷೇತ್ರಗಳ ಬಗ್ಗೆ ಚರ್ಚೆ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ಭಾರಿ ಕುತೂಹಲ ಕೆರಳಿಸಿದೆ.
ಸಚಿವರನ್ನ ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆಗೆ ಸಜ್ಜುಗೊಳಿಸಲು ಸಭೆ, ಸರ್ಕಾರಕ್ಕೆ ಡ್ಯಾಮೆಜ್ ಆಗುವ ರೀತಿ ಸಚಿವರು ಹೇಳಿಕೆ ನೀಡಬಾರದು. ಲೋಕಸಭೆ ಚುನಾವಣೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ಚರ್ಚೆ, ಕಾರ್ಯಕರ್ತರನ್ನು ಲೋಕಸಭಾ ಚುನಾವಣೆಗೆ ಸಜ್ಜುಗೊಳಿಸಲು ತಯಾರಿ, ಕಾರ್ಯಕರ್ತರ ಆತ್ಮವಿಶ್ವಾಸ ದ್ವಿಗುಣಗೊಳಿಸಿ ಚುನಾವಣೆಗೆ ಸಜ್ಜುಗೊಳಿಸಲು ತಂತ್ರಗಾರಿಕೆ ಹೀಗೆ ಲೋಕಾ ಸಭಾ ಚುನಾವಣೆಗೆ ಸಂಬಂಧಿಸಿದಂತೆ ಹಲವು ಅಂಶಗಳನ್ನ ಸಿಎಂ ಸಿದ್ದರಾಮಯ್ಯ ಚರ್ಚಿಸಲಿದ್ದಾರೆ.
ಡಿನ್ನರ್ ಮೀಟಿಂಗ್ನಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಹೆಚ್.ಕೆ ಪಾಟೀಲ್, ಶಿವರಾಜ್ ತಂಗಡಗಿ ಸೇರಿದಂತೆ ಅನೇಕರು ಭಾಗವಹಿಸಿದ್ದಾರೆ.
ಬಿಜೆಪಿಯ 26 ಸಂಸದರಿಗೆ ಮೋದಿ, ಅಮಿತ್ ಶಾ ಕಂಡ್ರೆ ಭಯ ಎಂದು ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದಾರೆ. ಕೇಂದ್ರದ ಬಳಿ ಬಿಜೆಪಿ ನಾಯಕರು ಬರ ಪರಿಹಾರವನ್ನು ಬೊಮ್ಮಾಯಿ, ಅಶೋಕ್, ಬಿಎಸ್ವೈ, ವಿಜಯೇಂದ್ರ ಕೇಳಿದ್ದಾರಾ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಕಾಂತರಾಜ ವರದಿ ಪಡೆಯುವುದಕ್ಕೆ 1 ತಿಂಗಳ ಟೈಮ್ ನೀಡಿದ್ದೀನಿ: ಸಿಎಂ ಸಿದ್ದರಾಮಯ್ಯ
ರಾಜ್ಯದ ಬಿಜೆಪಿ ಸಂಸದರು ಸಂಸತ್ನಲ್ಲಿ ಒಂದು ದಿನವೂ ಕೇಳಿಲ್ಲ. ನಾನು ಡಿಸೆಂಬರ್ನಲ್ಲಿ ಪ್ರಧಾನಮಂತ್ರಿ ಮೋದಿ ಭೇಟಿ ಮಾಡಿದ್ದೆ. ಆಗ ಅಮಿತ್ ಶಾ 26 ಸಂಸದರ ಜತೆ ಸಭೆ ಮಾಡ್ತೀನಿ ಎಂದಿದ್ದರು. ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಇಷ್ಟೊಂದು ಅನ್ಯಾಯ ಮಾಡೋದಾ? ಆರ್ಥಿಕತೆ ಬಗ್ಗೆ ಶ್ವೇತಪತ್ರ ಹೊರಡಿಸುವ ಬಗ್ಗೆ ಯೋಚನೆ ಮಾಡ್ತಿದ್ದೇವೆ ಎಂದಿದ್ದಾರೆ.
ಬಿಬಿಎಂಪಿ ಗುತ್ತಿಗೆದಾರರ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ
ಬೆಂಗಳೂರಿನ ಕ್ಯಾಪಿಟಲ್ ಹೋಟೆಲ್ನಲ್ಲಿ ಬಿಬಿಎಂಪಿ ಗುತ್ತಿಗೆದಾರರ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ಮಾಡಿದ್ದಾರೆ. ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಎದುರು ಬಿಬಿಎಂಪಿ ಗುತ್ತಿಗೆದಾರರು ಅಳಲು ತೋಡಿಕೊಂಡಿದ್ದಾರೆ. ಬಾಕಿಯಿರುವ ಬಿಲ್ ಕ್ಲಿಯರ್ ಮಾಡಿಸುವಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಧಾರವಾಡ ಬಣ ರಾಜಕೀಯ ಶಮನಕ್ಕೆ ಮುಂದಾದ ಬಿವೈ ವಿಜಯೇಂದ್ರ: ಶೆಟ್ಟರ್, ಮುನೇನಕೊಪ್ಪ, ಬೆಲ್ಲದ್ ಜೊತೆ ಸಭೆ
ಬಿಬಿಎಂಪಿ ಗುತ್ತಿಗೆದಾರರ ಮನವಿಗೆ ಡಿಸಿಎಂ ಡಿಕೆ ಸಕಾರಾತ್ಮಕ ಸ್ಪಂದಿಸಿದ್ದು, ಮುಂದಿನ ದಿನಗಳಲ್ಲಿ ಸರ್ಕಾರ ಕೈಗೊಳ್ಳಲಿರುವ ಯೋಜನೆ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಈ ವೇಳೆ ಡಿ.ಕೆ.ಶಿವಕುಮಾರ್ಗೆ ಗುತ್ತಿಗೆದಾರರು ಅಭಿನಂದನೆ ಸಲ್ಲಿಸಿದ್ದಾರೆ.
ಮೈಸೂರಿನಲ್ಲಿ ಮಾಜಿ ಸಚಿವ ಎಸ್.ಎ.ರಾಮದಾಸ್ ಪ್ರತಿಕ್ರಿಯೆ ನೀಡಿದ್ದು, ನಾನು ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲ್ಲ. ಈ ಬಗ್ಗೆ ಪಕ್ಷದ ಹೈಕಮಾಂಡ್ಗೆ ತಿಳಿಸಿದ್ದೇನೆ. ಪಕ್ಷದ ನಿರ್ಧಾರಕ್ಕೆ ವಿರುದ್ಧವಾಗಿ ಯಾವತ್ತೂ ಹೋಗಿಲ್ಲ. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಲೋಕಸಭೆಗಳಿಗೆ ನನ್ನನ್ನ ಕ್ಲಸ್ಟರ್ ಮಾಡಿದ್ದಾರೆ ಎಂದು ಹೇಳಿದ್ದಾರೆ.
ನಾಲ್ಕು ಕ್ಷೇತ್ರದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ಮಾತ್ರ ನನ್ನದು. ಈ ಬಾರಿ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲುವ ಗುರಿ ಹೊಂದಿದೆ. ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ವೇಳೆ ಎಲ್ಲಾ ಅಂಶವನ್ನ ಗಮನದಲ್ಲಿಟ್ಟುಕೊಂಡು ಟಿಕೆಟ್ ನೀಡಲಾಗುತ್ತದೆ. ಪಕ್ಷ ಏನೇ ತೀರ್ಮಾನ ತೆಗೆದುಕೊಂಡರು ಪಕ್ಷದ ತೀರ್ಮಾನಕ್ಕೆ ಬದ್ಧ ಎಂದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:20 pm, Thu, 1 February 24