AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಚಿತ ಕಣ್ಣಿನ ಚಿಕಿತ್ಸೆ ನೀಡುವ ‘ಆಶಾಕಿರಣ’ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

Asha kirana scheme: ಕಣ್ಣಿನ ಸಮಸ್ಯೆ ಇರುವವರಿಗೆ ನೆರವಾಗುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಕಣ್ಣಿನ ಸಮಸ್ಯೆ ಇರುವವರಿಗೆ ಉಚಿತ ಚಿಕಿತ್ಸೆ ನೀಡುವ ಆಶಾಕಿರಣ ಯೋಜನೆಗೆ ಹಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಆಶಾ ಕಿರಣ ಯೋಜನೆ ವಿಸ್ತರಣೆ ಮಾಡಲಾಗುತ್ತದೆ.

ಉಚಿತ ಕಣ್ಣಿನ ಚಿಕಿತ್ಸೆ ನೀಡುವ 'ಆಶಾಕಿರಣ' ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ
ಸಿದ್ದರಾಮಯ್ಯ
TV9 Web
| Edited By: |

Updated on:Feb 18, 2024 | 8:54 PM

Share

ಹಾವೇರಿ, ಫೆ.18: ಉಚಿತ ಕಣ್ಣಿನ ಚಿಕಿತ್ಸೆ ನೀಡುವ ಆಶಾ ಕಿರಣ ಯೋಜನೆಗೆ (Asha Kirana Scheme) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಚಾಲನೆ ನೀಡಿದರು. ಹಾವೇರಿ ನಗರದ ಕೊಳ್ಳಿ‌ ಕಾಲೇಜು ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆಶಾಕಿರಣ ಯೋಜನೆಯಡಿ ಸಿದ್ದರಾಮಯ್ಯ ಅವರು ನೇತ್ರ ಸಮಸ್ಯೆವುಳ್ಳ ಮಕ್ಕಳಿಗೆ ಕನ್ನಡಕ ವಿತರಿಸಿದರು. ಕಣ್ಣಿನ ಸಮಸ್ಯೆ ಇರುವವರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಯೋಜನೆ ರಾಜ್ಯಾದ್ಯಂತ ವಿಸ್ತರಿಸಲು ಸರ್ಕಾರ ಚಿಂತಿಸಿದೆ.

ಯೋಜನೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಸಿದ್ದರಾಮಯ್ಯ, ಕಣ್ಣಿನ ದೋಷ ಇರುವವರಿಗೆ ದೋಷ ಸರಿಪಡಿಸಲು ಆಶಾ ಕಿರಣ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟಿದ್ದೇವೆ. ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದೇವೆ. ಹಾವೇರಿ ಜಿಲ್ಲೆಗೆ 1400 ಕೋಟಿ ರೂಪಾಯಿ ಹಣ ಗ್ಯಾರಂಟಿ ಯೋಜನೆಗಳಿಗೆ ಕೊಟ್ಟಿದ್ದೇವೆ. ಇದೊಂದೇ ಜಿಲ್ಲೆಗೆ 1400 ಕೋಟಿ ಹಣ ಕೊಟ್ಟಿದ್ದೇವೆ. ಬಜೆಟ್​ನಲ್ಲಿ 52000 ಕೋಟಿ ರೂಪಾಯಿ ಹಣ ಗ್ಯಾರಂಟಿಗಾಗಿ ಘೋಷಣೆ ಮಾಡಿದ್ದೇನೆ ಎಂದರು.

ಜನರ ಕೈಗೆ ಹಣ ಕೊಡುವ ಕಾರ್ಯಕ್ರಮ ಯಾರೂ ಕೂಡಾ ಇದುವರೆಗೂ ಮಾಡಿಲ್ಲ. ನಮ್ಮ ವಿರೋಧಿಗಳು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದಾಗ ಗ್ಯಾರಂಟಿ ಯೋಜನೆ ಜಾರಿ ಸಾಧ್ಯವಿಲ್ಲ ಅಂತಾ ಇದ್ದರು. ರಾಜ್ಯ ದಿವಾಳಿ ಆಗುತ್ತೆ ಅಂದರು. ನಾವು ಈ ವರ್ಷ 36000 ಕೋಟಿ ಹಣ ಖರ್ಚು ಮಾಡಿದರೂ ದಿವಾಳಿ ಆಗಿಲ್ಲ. ಈ ವರ್ಷಕ್ಕೆ ಬಜೆಟ್ ಗಾತ್ರ 46000 ಕೋಟಿ ಹೆಚ್ಚಾಗಿದೆ. ಹಾಗಾದರೆ ಈ ರಾಜ್ಯದ ಆರ್ಥಿಕ ಪರಿಸ್ಥಿತಿ ದಿವಾಳಿ ಆಗೋಕೆ ಸಾಧ್ಯಾನಾ ಎಂದು ಪ್ರಶ್ನಸಿದರು.

ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿದ್ದ ಮಾಜಿ ಸಿಎಂ ಸೇರಿ ಎಲ್ಲರನ್ನೂ ಸಿದ್ದರಾಮಯ್ಯ ಬಿಜೆಪಿಗೆ ಕಳಿಸುತ್ತಿದ್ದಾರೆ ಎಂದ ಕುಮಾರಸ್ವಾಮಿ

ವಿರೋಧ ಪಕ್ಷದವರು ಸುಳ್ಳು ಹೇಳಿದರೆ ದಾರಿ ತಪ್ಪಿಸಿದರೆ ಅದಕ್ಕೆ ನೀವೇ ಉತ್ತರ ಕೊಡಬೇಕು. ಅವರಿಗೆ ಅಧಿಕಾರದಲ್ಲಿದ್ದಾಗ ಮಾಡೋಕಾಗಲಿಲ್ಲ, ಕೋಮುವಾದದ ವಿಷ ಬೀಜ ಬಿತ್ತಿ, ಧರ್ಮ ಧರ್ಮಗಳ ನಡುವೆ ಸಂಘರ್ಷ ಮಾಡಿಸಿ ಸಮಾಜದ ಶಾಂತಿ ಹಾಳು ಮಾಡಿದವರಿಂದ ಈ ದೇಶದ ಸಾಮಾಜಿಕ ಪರಿಸ್ಥಿತಿ ಬದಲಾವಣೆ ಆಗಲು ಸಾಧ್ಯವಿಲ್ಲ ಎಂದರು.

ಜನವರಿ 26, 1950 ರಂದು ಹೊಸ ಸಂವಿಧಾನ ಜಾರಿ ಆಗುತ್ತದೆ. ಆರ್ಥಿಕ ಸಮಾಜಿಕ ಅಸಮಾನತೆ ಈ ದೇಶದಲ್ಲಿದೆ. ಸಾಮಾಜಿಕ ಆರ್ಥಿಕ ಅಸಮಾನತೆ ಎಲ್ಲಿವರೆಗೂ ಇರುತ್ತೋ ಅಲ್ಲಿವರೆಗೆ ಸ್ವಾತಂತ್ರ್ಯ ಸಿಕ್ಕರೂ ಸಾರ್ಥಕ ಆಗಲ್ಲ ಅಂತ ಅಂಬೇಡ್ಕರ್ ಹೇಳಿದ್ದರು. ಐದು ಗ್ಯಾರಂಟಿಗಳಿಂದ ಸುಮಾರು 5 ಕೋಟಿ ಜನ ಲಾಭ ಪಡೆಯುತ್ತಿದ್ದಾರೆ. ಬಡತನದಿಂದ ನರಳುತ್ತಿರುವ 5 ಕೋಟಿ ಜನ ಗ್ಯಾರಂಟಿ ಯೋಜನೆಗಳಿಂದ ಮಧ್ಯಮ ವರ್ಗ ತಲುಪುತ್ತಾರೆ ಎಂದರು.

ಬಾಯ್ ಮಾತಲ್ಲಿ ಬಿಜೆಪಿಯವರು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಂತ ಹೇಳುತ್ತಾರೆ. ಬುರ್ಕಾ ಹಾಕಿಕೊಂಡಿರುವವರು, ಟೋಪಿ ಹಾಕಿಕೊಂಡವರು ನಮ್ಮ ಕಚೇರಿಗೆ ಬರಬೇಡಿ ಅಂತಾ ಯತ್ನಾಳ್ ಹೇಳುತ್ತಾರೆ. ಇದೇನಾ ಸಬ್ ಕಾ ಸಾಥ್ ಸಬ್ ಕಾ ವಿಕಾಸ್? ಇವರಿಗೆ ಮಾನ ಮರ್ಯಾದೆ ಇದೆಯಾ? ಎಂದರು.

ನಾವು ತೆರಿಗೆ ಕೊಡುವುದರಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ. 4 ಲಕ್ಷ 30 ಸಾವಿರ ಕೋಟಿ ತೆರಿಗೆ ಕೊಡುತ್ತಿದ್ದೇವೆ. ಮಾತೆತ್ತಿದ್ದರೆ ನಮ್ಮ ದುಡ್ಡು ಕೊಡಲ್ಲ ಅಂತಾರೆ. ನಿಮ್ಮದಲ್ಲಪ್ಪ ದುಡ್ಡು, ನಮ್ಮ ದುಡ್ಡು. ನಾವು ಕೊಟ್ಟಿರುವುದನ್ನ ನಾವು ವಾಪಾಸ್ ಕೇಳುತ್ತಿದ್ದೇವೆ. 100 ರೂಪಾಯಿ ತೆರಿಗೆ ನಾವು ಕಟ್ಟಿದರೆ ನಮಗೆ ವಾಪಾಸ್ ಕೊಡೋದು ಕೇವಲ 13 ರೂಪಾಯಿ. ಇದನ್ನು ಕೇಳಿದರೆ ಬಿಜೆಪಿಯವರು ಮೈ ಪರಚಿಕೊಳ್ಳುತ್ತಾರೆ. 16 ನೇ ಹಣಕಾಸು ಆಯೋಗ ಈಗ ರಚನೆ ಆಗಿದೆ. ಆಯೋಗದ ಮುಂದೆ ಸಮರ್ಥವಾಗಿ ವಾದ ಮಾಡುತ್ತೇವೆ ಎಂದರು.

ನಿಮ್ಮ ಮನೆ ಬಾಗಿಲಿಗೆ ಕಣ್ಣಿನ ಆರೈಕೆ’ ಧ್ಯೇಯ ವಾಕ್ಯ ಹೊಂದಿರುವ ಯೋಜನೆ ಇದಾಗಿದೆ. ಮಗುವಿನಿಂದ ಹಿಡಿದು ಎಲ್ಲಾ ವಯೋಮಾನದವರಿಗೆ ಕಣ್ಣಿನ ತಪಾಸಣೆ ನಡೆಸಲಾಗುತ್ತದೆ. ದೃಷ್ಟಿದೋಷ ಇರುವವರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗುತ್ತದೆ. ಅವಶ್ಯಕತೆ ಇರುವವರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ ಎಂದು ನಿನ್ನೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದರು.

ಮೊದಲ ಹಂತದಲ್ಲಿ ಚಿಕ್ಕಬಳ್ಳಾಪುರ, ಕಲಬುರಗಿ, ಚಾಮರಾಜನಗರ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಈ ಯೋಜನೆ ಜಾರಿ ಮಾಡುತ್ತಿದ್ದೇವೆ. ಎರಡನೇ ಹಂತದಲ್ಲಿ ಚಿತ್ರದುರ್ಗ, ಮಂಡ್ಯ, ರಾಯಚೂರು, ಉತ್ತರಕನ್ನಡ ಜಿಲ್ಲೆಗಳಲ್ಲಿ ಆಶಾಕಿರಣ ಅಭಿಯಾನ ಆರಂಭವಾಗುತ್ತದೆ. ಮುಂದೆ ರಾಜ್ಯದ ಉಳಿದ ಜಿಲ್ಲೆಗಳಲ್ಲೂ ಈ ಯೋಜನೆ ವಿಸ್ತರಣೆ ಆಗಲಿದೆ ಎಂದು ಹೇಳಿದ್ದರು.

ವರದಿ: ಅಣ್ಣಪ್ಪ ಬರ್ಕಿ, ಟಿವಿ9 ಹಾವೇರಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:44 pm, Sun, 18 February 24

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್