ತಾವು ಕಲಿತ ಶಾಲೆಗೆ 10 ಲಕ್ಷ ರೂ ವೈಯಕ್ತಿಕ ದೇಣಿಗೆ ನೀಡಿ ನನ್ನ ಶಾಲೆ ನನ್ನ ಜವಾಬ್ದಾರಿ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯನವರು ಬೆಂಗಳೂರಿನಲ್ಲಿ ನನ್ನ ಶಾಲೆ ನನ್ನ ಜವಾಬ್ದಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ತಾವು ಶಿಕ್ಷಣ ಕಲಿತ ಮೈಸೂರಿನ ವರುಣಾ ಹೋಬಳಿಯ ಕುಪ್ಪೆಗಾಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂಲ ಸೌಕರ್ಯ ಅಭಿವೃದ್ಧಿಗಾಗಿ 10 ಲಕ್ಷ ರೂಪಾಯಿ ವೈಯಕ್ತಿಕ ದೇಣಿಗೆ ನೀಡಿದ್ದಾರೆ.

ತಾವು ಕಲಿತ ಶಾಲೆಗೆ 10 ಲಕ್ಷ ರೂ ವೈಯಕ್ತಿಕ ದೇಣಿಗೆ ನೀಡಿ ನನ್ನ ಶಾಲೆ ನನ್ನ ಜವಾಬ್ದಾರಿ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟ ಸಿಎಂ ಸಿದ್ದರಾಮಯ್ಯ
ತಾವು ಕಲಿತ ಶಾಲೆಗೆ 10 ಲಕ್ಷ ರೂ ವೈಯಕ್ತಿಕ ದೇಣಿಗೆ ನೀಡಿದ ಸಿಎಂ
Follow us
Anil Kalkere
| Updated By: ಆಯೇಷಾ ಬಾನು

Updated on:Mar 05, 2024 | 1:26 PM

ಬೆಂಗಳೂರು, ಮಾರ್ಚ್.05: ಮುಖ್ಯಮಂತ್ರಿ ಸಿದ್ದರಾಮಯ್ಯನವರು (Siddaramaiah) ತಾವು ಕಲಿತ ಶಾಲೆಗೆ ವೈಯಕ್ತಿಕವಾಗಿ 10 ಲಕ್ಷ ರೂ. ದೇಣಿಗೆ ನೀಡಿದ್ದಾರೆ. ಈ ದೇಣಿಗೆಯನ್ನು ನೀಡುವ ಮೂಲಕ ನನ್ನ ಶಾಲೆ ನನ್ನ ಜವಾಬ್ದಾರಿ (My School My Responsibility) ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಮ್ಮ ಶಾಲೆ, ನಮ್ಮ ಜವಾಬ್ದಾರಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಸಿಎಂ ಚಾಲನೆ ನೀಡಿದರು.

ಕಾರ್ಯಕ್ರಮ ಚಾಲನೆ ವೇಳೆ ಸಿಎಂ ಸಿದ್ದರಾಮಯ್ಯ ತಾನು ಓದಿದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ‌ 10 ಲಕ್ಷ ದೇಣಿಗೆ ನೀಡಿದರು. ಸಿದ್ದರಾಮಯ್ಯ ಅವರು ತಾವು ಪ್ರಾಥಮಿಕ ಶಿಕ್ಷಣ ಪಡೆದ ಕುಪ್ಪೇಗಾಲ ಹಾಗೂ ಸಿದ್ದರಾಮನಹುಂಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ತಲಾ ₹ 10 ಲಕ್ಷ ವೈಯಕ್ತಿಕ ನೆರವು ನೀಡುವ ಮೂಲಕ ಯೋಜನೆ ಉದ್ಘಾಟನೆ ಮಾಡಿದರು. ಈ ವೇಳೆ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಉನ್ನತ ಶಿಕ್ಷಣ ಸಚಿವ ಸುಧಾಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಶಾಲೆಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ‘ನನ್ನ ಶಾಲೆ, ನನ್ನ ಜವಾಬ್ದಾರಿ’ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು, ಶಿಕ್ಷಣದಿಂದ ಜೀವನ ಉಜ್ವಲಗೊಳಿಸಿಕೊಂಡ ಹಳೆ ವಿದ್ಯಾರ್ಥಿಗಳು ನಾವು ಓದಿದ ಶಾಲೆಗಳ ಅಭಿವೃದ್ಧಿಗೆ ಹಣ ನೀಡಿ ಅಭಿವೃದ್ಧಿಯ ಜವಾಬ್ದಾರಿಯನ್ನು ಹೊತ್ತಿಕೊಳ್ಳಬೇಕು ಎಂಬ ಸಂದೇಶ ಸಾರಿದೆ.

ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ: ಡಿಸಿಎಂ ಡಿಕೆ ಶಿವಕುಮಾರ್​​ಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್

ಇನ್ನು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯನವರು ತಾವು ಕಲಿತ ಸಿದ್ದರಾಮನಹುಂಡಿ ಹಾಗೂ ಕುಪ್ಪೆಗಾಲ ಸರ್ಕಾರಿ ಶಾಲೆಯ ಮಕ್ಕಳೊಡನೆ ಸಂವಾದ ನಡೆಸಿದರು. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಸಿಎಂ ಸಲಹೆ ನೀಡಿದರು. ಮಕ್ಕಳು ಸಂವಿಧಾನ ಪೀಠಿಕೆ ಹೇಳಿದರು. ಆಗ ಸಂವಿಧಾನವನ್ನು ಅರಿತುಕೊಳ್ಳಬೇಕು ಎಂದ ಮುಖ್ಯಮಂತ್ರಿಗಳು ಮಕ್ಕಳಿಗೆ ಹೇಳಿದರು. ಸಂವಿಧಾನ ಏನು ಹೇಳುತ್ತದೆ ಹೇಳಿ ನೋಡೋಣ ಎಂದು ಮಕ್ಕಳನ್ನು ಕೇಳಿದಾಗ ಮಕ್ಕಳು ಸಂವಿಧಾನದ ಪೂರ್ಣ ಪೀಠಿಕೆಯನ್ನು ಹೇಳಿದರು.

ಕೇವಲ ಕಂಠಪಾಠ ಮಾಡಿದರೆ ಸಾಲದು, ಅದರ ತಿರುಳನ್ನು ಅರಿತು ಅದರಂತೆ ನಡೆಯಬೇಕು. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ತಿರುಳು. ಸಮಾನತೆ ಸಮಸಮಾಜ ನಿರ್ಮಾಣವಾಗಬೇಕು. ಬುದ್ಧ, ಬಸವ, ಅಂಬೇಡ್ಕರ್ ಅವರು ಇದನ್ನೇ ಹೇಳಿಕೊಂಡು ಬಂದಿದ್ದರೂ ಇದು ಪೂರ್ಣವಾಗಿ ಹೋಗಿಲ್ಲ. ಇದೆಲ್ಲ ಓದಿ ಅರ್ಥ ಮಾಡಿಕೊಂಡು ಮಕ್ಕಳು ಮನುಷ್ಯತ್ವ ಬೆಳೆಸಿಕೊಳ್ಳಬೇಕು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು. ಸರ್ಕಾರಿ ಶಾಲೆಗಳಲ್ಲಿ ಕೆಲವು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶಾಲೆಯ ಅಭಿವೃದ್ಧಿಗೆ ಸರ್ಕಾರ ಉಚಿತ ಶಿಕ್ಷಣ ನೀಡುತ್ತಿದೆ. ಸಂವಿಧಾನ ಜಾರಿಗೆ ಬಂದ ನಂತರ ಉಚಿತ ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿ ಮಾಡಿದೆ. ಹಾಗಾಗಿ ಎಲ್ಲರಿಗೂ ಶಿಕ್ಷಣ ಕಡ್ಡಾಯವಾಗಿದೆ ಎಂದು ಸಿಎಂ ಮಕ್ಕಳಿಗೆ ತಿಳಿ ಹೇಳಿದ‌ರು.

ಸಿಎಂ ಸಿದ್ದರಾಮಯ್ಯನವರು ಈ ಹಿಂದೆ ಕುಪ್ಪೆಗಾಲ ಶಾಲೆಗೆ 1 ಎಕರೆ ಜಾಗ ನೀಡಿ ಅಲ್ಲಿ 8 ಶಾಲಾ ಕೊಠಡಿಗಳನ್ನು, 2 ಶೌಚಾಲಯ ಹಾಗೂ ಕಾಂಪೌಂಡ್ ಒಳಗೊಂಡಂತೆ ಹೊಸ ಕಟ್ಟಡವನ್ನು ಕಟ್ಟಿಸಿದ್ದರು. ಇದೀಗ ಆ ಶಾಲೆಗೆ 10 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಇದರಿಂದ ಶಾಲೆಗೆ ಬೇಕಾದ ಕಂಪ್ಯೂಟರ್, ಸ್ಮಾರ್ಟ್ ಟಿವಿ, ಪ್ರೊಜೆಕ್ಟರ್, ಬ್ಯಾಂಡ್ ಸೆಟ್, ಮೇಜು, ಕುರ್ಚಿ, ಬೆಂಚು ಖರೀದಿ ಮಾಡಲು ನೆರವಾಗಲಿದೆ.

ಕುಪ್ಪೆಗಾಲ ಶಾಲೆಗೆ ಈ ಹಿಂದೆ ಜಾಗ ನೀಡಿ ಹೊಸ ಕಟ್ಟಡವನ್ನು ಸಿದ್ದರಾಮಯ್ಯ ನಿರ್ಮಿಸಿಕೊಟ್ಟಿದ್ದರು. ಅವರು ಇದೀಗ ನಮ್ಮ ಶಾಲೆಗೆ ದೇಣಿಗೆ ನೀಡುತ್ತಿರುವುದು ತುಂಬಾ ಖುಷಿಯ ವಿಚಾರ. ಈ ಹಣದಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಬೇಕಾದ ಪರಿಕರಗಳನ್ನು ಖರೀದಿಸಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಈ ಮೂಲಕ ಶ್ರಮಿಸಲಾಗುವುದು ಎಂದು ಶಾಲೆಯ ಮುಖ್ಯೋಪಾಧ್ಯಾಯ ಬಿ.ಭಾಗ್ಯ ಅವರು ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:19 pm, Tue, 5 March 24

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ