ಪಲ್ಲಕ್ಕಿ ಬಸ್​ಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ, ವಿಶೇಷತೆಗಳು ಹೀಗಿವೆ

ಕೆಎಸ್​ಆರ್​ಟಿಸಿಯಲ್ಲಿ ಇಂದಿನಿಂದ ಪಲ್ಲಕ್ಕಿ ಉತ್ಸವ ಆರಂಭವಾಗಲಿದೆ. ಹೌದು, ಪಲ್ಲಕ್ಕಿ ಬಸ್​ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ಅಧಿಕೃತವಾಗಿ ಚಾಲನೆ ನೀಡಿದರು. 148 ಬಸ್​ಗಳ ಪೈಕಿ 40 ನಾನ್ ಎಸಿ ಸ್ಲೀಪರ್ ಬಸ್​ಗಳಾಗಿದ್ದು, ಈ ಬಸ್​ಗಳನ್ನು ಹೊರತು ಪಡಿಸಿ ಉಳಿದ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಇರಲಿದೆ.

ಪಲ್ಲಕ್ಕಿ ಬಸ್​ಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ, ವಿಶೇಷತೆಗಳು ಹೀಗಿವೆ
ಪಲ್ಲಕ್ಕಿ ಬಸ್​
Follow us
| Updated By: ವಿವೇಕ ಬಿರಾದಾರ

Updated on: Oct 07, 2023 | 10:47 AM

ಬೆಂಗಳೂರು, ಅ.7: ಪಲ್ಲಕ್ಕಿ ಬಸ್​ಗಳಿಗೆ (Pallakki Bus) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ವಿಧಾನಸೌಧದ ಮುಂಭಾಗದಲ್ಲಿ ಅಧಿಕೃತವಾಗಿ ಚಾಲನೆ ನೀಡಿದರು. ಒಟ್ಟು 148 ಬಸ್​ಗಳಿಗೆ ಚಾಲನೆ ನೀಡಲಾಗಿದ್ದು, 44 ಎಸಿ ಸ್ಲೀಪರ್ ಮತ್ತು ನಾಲ್ಕು ನಾನ್ ಎಸಿ ಸ್ಪೀಪರ್ ಬಸ್​ಗಳು ಒಳಗೊಂಡಿವೆ. ಆದರೆ, ಸ್ಲೀಪರ್ ಬಸ್​ಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿದೆ.

40 ನಾನ್ ಎಸಿ ಸ್ಲೀಪರ್ ಹಾಗೂ 100 ನಗರ ಸಾರಿಗೆ ಬಸ್ಸುಗಳು, ಅಶೋಕ ಲೇಲ್ಯಾಂಡ್ ಕಂಪನಿಗೆ ಸೇರಿದ್ದು, ನಾಲ್ಕು ನಾನ್ ಎಸಿ ಸ್ಲೀಪರ್, ನಾಲ್ಕು ಎಸಿ ಸ್ಲೀಪರ್ ಬಸ್​ಗಳು ಟಾಟಾ ಕಂಪನಿಯದ್ದಾಗಿವೆ. ಈ ಪೈಕಿ 44 ಎಸಿ ಸ್ಲೀಪರ್, ನಾಲ್ಕು ನಾನ್ ಎಸಿ ಸ್ಲೀಪರ್ ಬಸ್​ಗಳನ್ನು ಹೊರತುಪಡಿಸಿ ಉಳಿದ 100 ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿದೆ.

ಪಲ್ಲಕ್ಕಿ ಬಸ್​ ವಿಶೇಷತೆಗಳು

  • 11.3 ಮೀಟರ್ ಉದ್ದದ ನಾನ್ ಎಸಿ ಬಸ್
  • ಬಿಎಸ್-6 ತಂತ್ರಜ್ಞಾನದ ಮಾದರಿಯ ಹೆಚ್.ಪಿ. ಇಂಜಿನ್
  • ಹೈಟೆಕ್ ವಿನ್ಯಾಸದ 30 ಸ್ಲೀಪರ್ ಬರ್ತ್ ಸೀಟ್​ಗಳು
  • ಪ್ರತಿ ಸೀಟಿಗೆ ಮೊಬೈಲ್ ಹಾಗೂ ಲ್ಯಾಪ್ ಟಾಪ್​ಗಳ ಚಾರ್ಜಿಂಗ್ ಹಾಗೂ ಮೊಬೈಲ್ ಸ್ಟ್ಯಾಂಡ್ ವ್ಯವಸ್ಥೆ
  • ಸೀಟ್ ನಂಬರ್ ಮೇಲೆ ಎಲ್​ಇಡಿ ಅಳವಡಿಕೆ
  • ಓದಲು ಉತ್ತಮ ಬೆಳಕಿನ ಎಲ್​ಇಡಿ ಲೈಟ್ ಅಳವಡಿಕೆ
  • ಬಸ್​ನಲ್ಲಿ ಅಡಿಯೋ ಸ್ವೀಕರ್​ಗಳ ಮೂಲಕ ಜನರಿಗೆ ಮಾಹಿತಿ ನೀಡುವ ವ್ಯವಸ್ಥೆ
  • ಡಿಜಿಟಲ್ ಗಡಿಯಾರ, ಹಾಗೆ ಎಲ್​ಇಡಿ ಫ್ಲೋರ್
  • ಪ್ರತಿ ಪ್ರಯಾಣಿಕರಿಗೆ ಚಪ್ಪಳಿ‌ ಇಡಲು ಸ್ಥಳಾವಕಾಶದ ವ್ಯವಸ್ಥೆ
  • ಪ್ರಯಾಣಿಕರಿಗೆ ತಲೆದಿಂಬಿನ ವ್ಯವಸ್ಥೆ
  • ಚಾಲಕರಿಗೆ ಸಹಾಯವಾಗಲೂ ಬಸ್ ಹಿಂಭಾಗದಲ್ಲಿ ಹೈಟೆಕ್ ಕ್ಯಾಮರಾ ಅಳವಡಿಕೆ
  • 40 ಬಸ್‌ಗಳ ಪೈಕಿ 30 ಬಸ್‌ಗಳು ರಾಜ್ಯದೊಳಗೆ ಸಂಚರಿಸಲಿವೆ
  • ಉಳಿದ 10 ಬಸ್‌ಗಳು ಬೆಂಗಳೂರಿನಿಂದ‌ ಹೊರರಾಜ್ಯಗಳಿಗೆ ಸಂಚರಿಸಲಿವೆ.
  • ಈ ಬಸ್‌ ಸೇವೆಯು‌ ಇಂದಿನಿಂದಲೇ ಆರಂಭವಾಗಲಿದೆ
  • ಕೆಎಸ್‌ಆರ್‌ಟಿಸಿಯಲ್ಲಿ ನಾನ್‌ ಎಸಿ ಸ್ಲೀಪರ್‌ ಬಸ್‌ಗಳು ಆರಂಭವಾಗಿ ಸಾಕಷ್ಟು ವರ್ಷಗಳಾಗಿವೆ
  • ನಾನ್ ಎಸಿ ಸ್ಲೀಪರ್ ಬಸ್‌ಗಳಿಗೆ ಯಾವುದೇ ಹೆಸರಿಟ್ಟು ಬ್ರ್ಯಾಂಡಿಂಗ್‌ ಮಾಡಿರಲಿಲ್ಲ
  • ಸದ್ಯ ಪಲ್ಲಕ್ಕಿ (‘ಸಂತೋಷವು ಪ್ರಯಾಣಿಸುತ್ತಿದೆ’ ಎಂಬ ಉಪಶೀರ್ಷಿಕೆ) ಎಂಬ ಬ್ರ್ಯಾಂಡ್ ನೇಮ್‌ ಇಡಲಾಗಿದೆ.
  • ಈ ಹೆಸರನ್ನು ಸ್ವತಃ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು