Kannada News Karnataka Cm Siddaramaiah launches pallakki buses in Bangalore features of the new buses are as follows
ಪಲ್ಲಕ್ಕಿ ಬಸ್‌ಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ, ವಿಶೇಷತೆಗಳು ಹೀಗಿವೆ
ಕೆಎಸ್‌ಆರ್‌ಟಿಸಿಯಲ್ಲಿ ಇಂದಿನಿಂದ ಪಲ್ಲಕ್ಕಿ ಉತ್ಸವ ಆರಂಭವಾಗಲಿದೆ. ಹೌದು, ಪಲ್ಲಕ್ಕಿ ಬಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ಅಧಿಕೃತವಾಗಿ ಚಾಲನೆ ನೀಡಿದರು. 148 ಬಸ್‌ಗಳ ಪೈಕಿ 40 ನಾನ್ ಎಸಿ ಸ್ಲೀಪರ್ ಬಸ್ಗಳಾಗಿದ್ದು, ಈ ಬಸ್ಗಳನ್ನು ಹೊರತು ಪಡಿಸಿ ಉಳಿದ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಇರಲಿದೆ.
ಬೆಂಗಳೂರು, ಅ.7: ಪಲ್ಲಕ್ಕಿ ಬಸ್‌ಗಳಿಗೆ (Pallakki Bus) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah)ಅವರು ವಿಧಾನಸೌಧದ ಮುಂಭಾಗದಲ್ಲಿ ಅಧಿಕೃತವಾಗಿ ಚಾಲನೆ ನೀಡಿದರು. ಒಟ್ಟು 148 ಬಸ್‌ಗಳಿಗೆ ಚಾಲನೆ ನೀಡಲಾಗಿದ್ದು, 44 ಎಸಿ ಸ್ಲೀಪರ್ ಮತ್ತು ನಾಲ್ಕು ನಾನ್ ಎಸಿ ಸ್ಪೀಪರ್ ಬಸ್‌ಗಳು ಒಳಗೊಂಡಿವೆ. ಆದರೆ, ಸ್ಲೀಪರ್ ಬಸ್ಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿದೆ.
40 ನಾನ್ ಎಸಿ ಸ್ಲೀಪರ್ ಹಾಗೂ 100 ನಗರ ಸಾರಿಗೆ ಬಸ್ಸುಗಳು, ಅಶೋಕ ಲೇಲ್ಯಾಂಡ್ ಕಂಪನಿಗೆ ಸೇರಿದ್ದು, ನಾಲ್ಕು ನಾನ್ ಎಸಿ ಸ್ಲೀಪರ್, ನಾಲ್ಕು ಎಸಿ ಸ್ಲೀಪರ್ ಬಸ್‌ಗಳು ಟಾಟಾ ಕಂಪನಿಯದ್ದಾಗಿವೆ. ಈ ಪೈಕಿ 44 ಎಸಿ ಸ್ಲೀಪರ್, ನಾಲ್ಕು ನಾನ್ ಎಸಿ ಸ್ಲೀಪರ್ ಬಸ್ಗಳನ್ನು ಹೊರತುಪಡಿಸಿ ಉಳಿದ 100 ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿದೆ.
ಪಲ್ಲಕ್ಕಿ ಬಸ್ ವಿಶೇಷತೆಗಳು
11.3 ಮೀಟರ್ ಉದ್ದದ ನಾನ್ ಎಸಿ ಬಸ್
ಬಿಎಸ್-6 ತಂತ್ರಜ್ಞಾನದ ಮಾದರಿಯ ಹೆಚ್.ಪಿ. ಇಂಜಿನ್
ಹೈಟೆಕ್ ವಿನ್ಯಾಸದ 30 ಸ್ಲೀಪರ್ ಬರ್ತ್ ಸೀಟ್ಗಳು
ಪ್ರತಿ ಸೀಟಿಗೆ ಮೊಬೈಲ್ ಹಾಗೂ ಲ್ಯಾಪ್ ಟಾಪ್ಗಳ ಚಾರ್ಜಿಂಗ್ ಹಾಗೂ ಮೊಬೈಲ್ ಸ್ಟ್ಯಾಂಡ್ ವ್ಯವಸ್ಥೆ
ಸೀಟ್ ನಂಬರ್ ಮೇಲೆ ಎಲ್ಇಡಿ ಅಳವಡಿಕೆ
ಓದಲು ಉತ್ತಮ ಬೆಳಕಿನ ಎಲ್ಇಡಿ ಲೈಟ್ ಅಳವಡಿಕೆ
ಬಸ್ನಲ್ಲಿ ಅಡಿಯೋ ಸ್ವೀಕರ್ಗಳ ಮೂಲಕ ಜನರಿಗೆ ಮಾಹಿತಿ ನೀಡುವ ವ್ಯವಸ್ಥೆ
ಡಿಜಿಟಲ್ ಗಡಿಯಾರ, ಹಾಗೆ ಎಲ್ಇಡಿ ಫ್ಲೋರ್
ಪ್ರತಿ ಪ್ರಯಾಣಿಕರಿಗೆ ಚಪ್ಪಳಿ ಇಡಲು ಸ್ಥಳಾವಕಾಶದ ವ್ಯವಸ್ಥೆ
ಪ್ರಯಾಣಿಕರಿಗೆ ತಲೆದಿಂಬಿನ ವ್ಯವಸ್ಥೆ
ಚಾಲಕರಿಗೆ ಸಹಾಯವಾಗಲೂ ಬಸ್ ಹಿಂಭಾಗದಲ್ಲಿ ಹೈಟೆಕ್ ಕ್ಯಾಮರಾ ಅಳವಡಿಕೆ
40 ಬಸ್‌ಗಳ ಪೈಕಿ 30 ಬಸ್‌ಗಳು ರಾಜ್ಯದೊಳಗೆ ಸಂಚರಿಸಲಿವೆ
ಉಳಿದ 10 ಬಸ್‌ಗಳು ಬೆಂಗಳೂರಿನಿಂದ ಹೊರರಾಜ್ಯಗಳಿಗೆ ಸಂಚರಿಸಲಿವೆ.
ಈ ಬಸ್ ಸೇವೆಯು ಇಂದಿನಿಂದಲೇ ಆರಂಭವಾಗಲಿದೆ
ಕೆಎಸ್‌ಆರ್‌ಟಿಸಿಯಲ್ಲಿ ನಾನ್ ಎಸಿ ಸ್ಲೀಪರ್ ಬಸ್‌ಗಳು ಆರಂಭವಾಗಿ ಸಾಕಷ್ಟು ವರ್ಷಗಳಾಗಿವೆ
ನಾನ್ ಎಸಿ ಸ್ಲೀಪರ್ ಬಸ್‌ಗಳಿಗೆ ಯಾವುದೇ ಹೆಸರಿಟ್ಟು ಬ್ರ್ಯಾಂಡಿಂಗ್ ಮಾಡಿರಲಿಲ್ಲ
ಸದ್ಯ ಪಲ್ಲಕ್ಕಿ (‘ಸಂತೋಷವು ಪ್ರಯಾಣಿಸುತ್ತಿದೆ’ ಎಂಬ ಉಪಶೀರ್ಷಿಕೆ) ಎಂಬ ಬ್ರ್ಯಾಂಡ್ ನೇಮ್ ಇಡಲಾಗಿದೆ.
ಈ ಹೆಸರನ್ನು ಸ್ವತಃ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ