AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಡಳಿತ ಯಂತ್ರಕ್ಕೆ ಚುರುಕು: ವಾರಕ್ಕೊಮ್ಮೆ ಜನ ಸಂಪರ್ಕ ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಜನರ ನಿರೀಕ್ಷೆಗಳಿಗೆ ತಕ್ಕಂತೆ ಅಧಿಕಾರಿಗಳು ಕೆಲಸ ಮಾಡಬೇಕು. ಶಾಸಕರು, ಮಂತ್ರಿಗಳು, ಅಧಿಕಾರಿಗಳು ಜನ ಸೇವಕರು. ಈ ಸಾಮಾನ್ಯ ತಿಳಿವಳಿಕೆ ಪ್ರತಿಯೊಬ್ಬರಲ್ಲೂ ಇರಬೇಕು. ನಾವು ರಾಜರುಗಳಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ.

ಆಡಳಿತ ಯಂತ್ರಕ್ಕೆ ಚುರುಕು: ವಾರಕ್ಕೊಮ್ಮೆ ಜನ ಸಂಪರ್ಕ ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ
ಸಿಎಂ ಸಿದ್ದರಾಮಯ್ಯ
ಪ್ರಸನ್ನ ಗಾಂವ್ಕರ್​
| Edited By: ವಿವೇಕ ಬಿರಾದಾರ|

Updated on: Sep 12, 2023 | 1:01 PM

Share

ಬೆಂಗಳೂರು ಸೆ.12: ದಕ್ಷತೆ, ಪ್ರಾಮಾಣಿಕತೆಯಿಂದ ಅಧಿಕಾರಿಗಳು (Officers) ಕೆಲಸ ಮಾಡಬೇಕು. ನಾಡಿನ ಜನರ ನಿರೀಕ್ಷೆಗೆ ಸ್ಪಂದಿಸಬೇಕು. ಸರ್ಕಾರ (Karnataka Government) ಎಂದರೆ ನಾಡಿನ ಜನರ ಭರವಸೆ ಇದ್ದ ಹಾಗೆ ಎಂಬುವುದನ್ನು ನೆನಪಿಡಿ. ಸ್ಥಳೀಯ ಸಮಸ್ಯೆಗಳಿಗೆ ನೀವು ಸ್ಪಂದಿಸದಿದ್ದರೆ ಜನ ನನ್ನ ಬಳಿಗೆ ಬರುತ್ತಾರೆ. ಜಿಲ್ಲಾಧಿಕಾರಿಗಳು, ಸಿಇಒಗಳು, ತಹಶೀಲ್ದಾರರು ಜನ ಸಂಪರ್ಕ ಸಭೆ ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಖಡಕ್ ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಇಂದು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳ ಜೊತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಸಿ ಅಧಿಕಾರಿಗಳಿಗೆ ಕೆಲವು ಸೂಚನೆ ನೀಡಿದರು. ತಾಲ್ಲೂಕು ಮಟ್ಟದಲ್ಲಿ ಸಚಿವರು, ಶಾಸಕರನ್ನು ಆಹ್ವಾನಿಸಿ, ವಾರಕ್ಕೊಮ್ಮೆ ಜನ ಸಂಪರ್ಕ ಸಭೆ ನಡೆಸಿ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ. ಕೇವಲ ಬದಲಾವಣೆಗಾಗಿ ಜನತೆ ಸರ್ಕಾರವನ್ನು ಬದಲಾಯಿಸಿಲ್ಲ. ಬಹಳ ನಿರೀಕ್ಷೆಗಳನ್ನು ಇಟ್ಟುಕೊಂಡು ಹಿಂದಿನ ಸರ್ಕಾರವನ್ನು ಬದಲಾಯಿಸಿ ನಮ್ಮನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದರು.

ಜನರ ನಿರೀಕ್ಷೆಗಳಿಗೆ ತಕ್ಕಂತೆ ಅಧಿಕಾರಿಗಳು ಕೆಲಸ ಮಾಡಬೇಕು. ಶಾಸಕರು, ಮಂತ್ರಿಗಳು, ಅಧಿಕಾರಿಗಳು ಜನ ಸೇವಕರು. ಈ ಸಾಮಾನ್ಯ ತಿಳಿವಳಿಕೆ ಪ್ರತಿಯೊಬ್ಬರಲ್ಲೂ ಇರಬೇಕು. ನಾವು ರಾಜರುಗಳಲ್ಲ. ತಹಸೀಲ್ದಾರ್‌, ಉಪವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ಬರುವ ಅರ್ಜಿಗಳು ಐದು ವರ್ಷಕ್ಕೂ ಹೆಚ್ಚು ಅವಧಿಗೆ ಬಾಕಿ ಉಳಿದಿರುವುದನ್ನು ಗಮನಿಸಲಾಗಿದೆ. ಐದು ವರ್ಷವಾದರೂ ಪ್ರಕರಣ ಇತ್ಯರ್ಥಪಡಿಸದೆ ಇದ್ದರೆ, ನೀವು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದು ಅರ್ಥ ಎಂದರು.

ಇದನ್ನೂ ಓದಿ: ರಾಜ್ಯಾದ್ಯಂತ ಡೆಂಗ್ಯೂ ಉಲ್ಬಣ: ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ನ್ಯಾಯ ವಿಳಂಬವಾದರೆ ನ್ಯಾಯ ನಿರಾಕರಣೆಯಾಗಿದೆ ಎಂದರ್ಥ. ವಿಳಂಬ ಜಾಸ್ತಿಯಾದಷ್ಟು ಭ್ರಷ್ಟಾಚಾರಕ್ಕೆ ಅವಕಾಶ ಸಿಗುತ್ತೆ. ವಿಳಂಬವೂ ಭ್ರಷ್ಟಾಚಾರವೇ. ತಹಸೀಲ್ದಾರರು ಒಂದು ಅರ್ಜಿಯನ್ನು ಸ್ವೀಕರಿಸಿದರೆ, ಮೂರು ತಿಂಗಳಲ್ಲಿ ಇತ್ಯರ್ಥವಾಗಬೇಕು. ಉಪವಿಭಾಗಾಧಿಕಾರಿಗಳ ಬಳಿ ಬರುವ ಮನವಿಗಳ ಇತ್ಯರ್ಥಕ್ಕೆ ಬಹಳ ವಿಳಂಬ ಮಾಡುತ್ತಾರೆ. ಇದನ್ನು ಕನಿಷ್ಠ ಆರು ತಿಂಗಳಲ್ಲಿ ಹಾಗೂ ಜಿಲ್ಲಾಧಿಕಾರಿಗಳು ಒಂದು ವರ್ಷದಲ್ಲಿ ಇತ್ಯರ್ಥ ಮಾಡಬೇಕು ತಾಕೀತು ಮಾಡಿದರು.

ಜಿಲ್ಲಾಧಿಕಾರಿಗಳು ಅನಗತ್ಯವಾಗಿ ಪ್ರಕರಣ ಮುಂದೂಡುವುದು, ಕಕ್ಷಿದಾರರನ್ನು ಕಾಯಿಸುವುದು, ವಾದ-ವಿವಾದಗಳನ್ನು ಆಲಿಸಿದ ನಂತರ ತೀರ್ಪು ಬರೆಯಲು ವಿಳಂಬ ಮಾಡುವುದು ತರವಲ್ಲ. ಪ್ರಕರಣ ಇತ್ಯರ್ಥಗೊಳಿಸಲು ವಿಳಂಬ ಮಾಡಿದರೆ ನಮ್ಮ ಸರ್ಕಾರ ಸಹಿಸಲ್ಲ. ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​, ಸಚಿವರಾದ ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್​, ಜಮೀರ್ ಅಹ್ಮದ್ ಖಾನ್​, ದಿನೇಶ್​ ಗುಂಡೂರಾವ್​​, ಚಲುವರಾಯಸ್ವಾಮಿ, ಶಿವಾನಂದ ಪಾಟೀಲ್ ಸೇರಿ ಹಲವರು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್