ಸೂಚನೆ ಕೊಟ್ಟ 1 ವರ್ಷವಾದರೂ ಕೆಲಸ ಮಾಡದ ಅಧಿಕಾರಿಗಳು: ಸಿಎಂ ಫುಲ್ ಕ್ಲಾಸ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ತರಬೇತುದಾರರ ನೇಮಕಾತಿ ವಿಳಂಬ, ಪೌಷ್ಠಿಕ ಆಹಾರದ ಕೊರತೆ, ಕ್ರೀಡಾ ಪ್ರಾಧಿಕಾರದ ನಿಷ್ಕ್ರಿಯತೆ ಮುಂತಾದ ವಿಷಯಗಳ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಕ್ರೀಡಾಂಗಣಗಳ ಸುಧಾರಣೆ ಮತ್ತು ರಾಷ್ಟ್ರೀಯ/ಅಂತರರಾಷ್ಟ್ರೀಯ ಕ್ರೀಡಾಕೂಟಗಳ ಆಯೋಜನೆಗೆ ಸೂಚನೆಗಳನ್ನು ನೀಡಿದರು.

ಸೂಚನೆ ಕೊಟ್ಟ 1 ವರ್ಷವಾದರೂ ಕೆಲಸ ಮಾಡದ ಅಧಿಕಾರಿಗಳು: ಸಿಎಂ ಫುಲ್ ಕ್ಲಾಸ್
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​
Edited By:

Updated on: May 05, 2025 | 7:40 PM

ಬೆಂಗಳೂರು, ಮೇ 05: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸೋಮವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ (Department of Youth Empowerment and Sports) ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. “176 ತರಬೇತುದಾರರ ನೇಮಕಾತಿಗೆ ನಾನೇ ಸೂಚಿಸಿ ಒಂದು ವರ್ಷವಾದರೂ ಇನ್ನೂ ನೇಮಕಾತಿ ಏಕೆ ಆಗಿಲ್ಲ?” ಎಂದು ಪ್ರಶ್ನಿಸಿದರು.

“ಎಲ್ಲ ಜಿಲ್ಲೆಗಳಲ್ಲೂ ಉಪ ನಿರ್ದೇಶಕರು ಇರಲೇಬೇಕು. ಕ್ರೀಡಾಪಟುಗಳಿಗೆ ಅಗತ್ಯವಾದಷ್ಟು ಪೌಷ್ಠಿಕಾಂಶ ಮತ್ತು ಪ್ರೋಟೀನ್ ಯುಕ್ತ ಆಹಾರ ಕೊಡಬೇಕು. ಪದೇ ಪದೇ ಪರಿಶೀಲನೆ ನಡೆಸಿ, ಲೋಪ ಕಂಡರೆ ವಾರ್ಡನ್​ಗಳ ವಿರುದ್ಧ ಕ್ರಮ ಕೈಗೊಂಡು ವರದಿ ನೀಡಿ” ಎಂದು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

“ನಿಗಧಿತವಾಗಿ ಪ್ರಾಧಿಕಾರದ ಸಭೆಗಳನ್ನು ನಡೆಸಬೇಕು. ಭಾರತೀಯ ಕ್ರೀಡಾ ಪ್ರಾಧಿಕಾರದ ಕಾರ್ಯ ಚಟುವಟಿಗಳನ್ನು ಸಮಗ್ರವಾಗಿ ಅಧ್ಯಯನ ಮಾಡಿ, ಅದಕ್ಕಿಂತ ಉತ್ತಮ ರೀತಿಯಲ್ಲಿ ನಮ್ಮ ಮಿತಿಯೊಳಗೆ ಕ್ರೀಡಾ ಕಾರ್ಯ ಚಟುವಟಿಕೆಗಳನ್ನು ನಡೆಸುವ ಬಗ್ಗೆ ಕ್ರಮವಹಿಸಿ. ಮುಂದಿನ ಐದಾರು ತಿಂಗಳಲ್ಲಿ, ದಸರಾ ಕ್ರೀಡಾಕೂಟ ಆರಂಭವಾಗುವುದರೊಳಗೆ ಪ್ರಾಧಿಕಾರ ಕ್ರಿಯಾಶೀಲ ಆಗಬೇಕೆಂದು” ತಾಕೀತು ಮಾಡಿದರು.

ಇದನ್ನೂ ಓದಿ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯನ ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದ ಹೋಂ ಗಾರ್ಡ್​ ಅರೆಸ್ಟ್​​
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸುಹಾಸ್ ಶೆಟ್ಟಿ ಹತ್ಯೆ: ಡಿಜಿಯಿಂದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ

“ರಾಷ್ಟ್ರೀಯ ಕ್ರೀಡಾಕೂಟ ಸಂಘಟಿಸಲು ಅನುಧಾನ ನಿಗಧಿ ಪಡಿಸಲು ಮತ್ತು ಅಂತಾರಾಷ್ಟ್ರೀಯ ಕ್ರೀಡಾಕೂಟ ಸಂಘಟಿಸುವ ಮೊದಲು ಕನಿಷ್ಠ 15 ರಾಷ್ಟ್ರಗಳು ಪಾಲ್ಗೊಳ್ಳುವಿಕೆಯನ್ನು ಖಚಿತಪಡಿಸಿಕೊಳ್ಳಬೇಕು. ಇದಕ್ಕೆ ಸರಿಯಾದ ರೂಪು ರೇಷೆಗಳನ್ನು ಸಿದ್ಧಪಡಿಸಿ. ಕೇವಲ ಲೆಟರ್ ಹೆಡ್​ಗಳಲ್ಲಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕ್ರೀಡಾಕೂಟ ಎಂದು ಬರುವ ಸಂಸ್ಥೆಗಳಿಗೆ ಕಡಿವಾಣ ಹಾಕಿ. ಪ್ರಾಮಾಣಿಕವಾಗಿ ಕ್ರೀಡಾಕೂಟ ನಡೆಸುವವರಿಗೆ ಪ್ರೋತ್ಸಾಹ ನೀಡಬೇಕೆಂದು” ಸೂಚನೆ ನೀಡಿದರು.

ಇದನ್ನೂ ಓದಿ: ಕರ್ನಾಟಕ ಒಳಮೀಸಲಾತಿ ಜಾತಿ ಗಣತಿ ಇಂದಿನಿಂದ ಶುರು: ಸಿಎಂ ಸಿದ್ದರಾಮಯ್ಯ ಮಾಹಿತಿ

“ಕಂಠೀರವ ಕ್ರೀಡಾಂಗಣ ಹವಾ ನಿಯಂತ್ರಿತ ವ್ಯವಸ್ಥೆ ಶೀರ್ಘ್ರದಲ್ಲಿ ಜಾರಿಗೊಳಿಸಿ. ಕಂಠೀರವ ಕ್ರೀಡಾಂಗಣ ನಿರ್ಮಾಣವಾಗಿ 29 ವರ್ಷಗಳಾಗಿರುವುದರಿಂದ ಪ್ರೇಕ್ಷಕರ ಸುರಕ್ಷತೆಗೆ ಗ್ಯಾಲರಿಗಳ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸುವಂತೆ” ಅಧಿಕಾರಿಗಳಿಗೆ ಹೇಳಿದರು. ಚನ್ನಪಟ್ಟಣದಿಂದ ಆನ್​ಲೈನ್ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಸಭೆಯಲ್ಲಿ ಭಾಗಿಯಾದರು.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ