AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯ, ಪಾಠಗಳಿಗೆ ಅವಕಾಶ ಕೊಡುವುದಿಲ್ಲ; ಸಿಎಂ ಸಿದ್ದರಾಮಯ್ಯ

ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯ ಮತ್ತು ಪಾಠಗಳಿಗೆ ಅವಕಾಶ ಕೊಡುವುದಿಲ್ಲ. ಭಯದ ವಾತಾವರಣ ಅಳಿಸಿ ನೆಮ್ಮದಿಯ ವಾತಾವರಣ ಸೃಷ್ಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೇಳಿದರು.

ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯ, ಪಾಠಗಳಿಗೆ ಅವಕಾಶ ಕೊಡುವುದಿಲ್ಲ; ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
ಗಣಪತಿ ಶರ್ಮಾ
|

Updated on:May 29, 2023 | 8:50 PM

Share

ಮುಖ್ಯಾಂಶಗಳು

  • ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯ ಮತ್ತು ಪಾಠಗಳಿಗೆ ಅವಕಾಶ ಕೊಡುವುದಿಲ್ಲ; ಸಿದ್ದರಾಮಯ್ಯ
  • ಸುಳ್ಳು ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗುವುದು ಎಂದ ಸಿಎಂ
  • ಅನೈತಿಕ ಪೊಲೀಸ್ ಗಿರಿ, ದ್ವೇಷದ ರಾಜಕಾರಣಕ್ಕೆ ಬ್ರೇಕ್

ಬೆಂಗಳೂರು: ಮಕ್ಕಳ ಮನಸ್ಸಿಗೆ ವಿಷ ತುಂಬುವ ಪಠ್ಯ ಮತ್ತು ಪಾಠಗಳಿಗೆ ಅವಕಾಶ ಕೊಡುವುದಿಲ್ಲ. ಭಯದ ವಾತಾವರಣ ಅಳಿಸಿ ನೆಮ್ಮದಿಯ ವಾತಾವರಣ ಸೃಷ್ಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ ಹೇಳಿದರು. ಗೃಹ ಕಚೇರಿ ಕೃಷ್ಣದಲ್ಲಿ ಸೋಮವಾರ ಸುಮಾರು 40 ಕ್ಕೂ ಹೆಚ್ಚು ಮಂದಿ ಸಾಹಿತಿ ಬರಹಗಾರರು ಹಾಗೂ ನಾನಾ ಜನಪರ ಸಂಘಟನೆಗಳ ಮುಖ್ಯಸ್ಥರ ಜತೆಗೆ ನಡೆದ ಸಭೆಯಲ್ಲಿ ಈ ಭರವಸೆ ನೀಡಿದರು. ಕನ್ನಡ ನಾಡಿನ ಸೌಹಾರ್ದ ಮತ್ತು ಜಾತ್ಯತೀತ ಪರಂಪರೆಯ ರಕ್ಷಣೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ದ್ವೇಷ ರಾಜಕಾರಣವನ್ನು ಬಲಿ ಹಾಕಿ, ಭಯದ ವಾತಾವರಣ ಅಳಿಸಲಾಗುವುದು ಎಂದು ಅವರು ತಿಳಿಸಿದರು.

ದೇಶವನ್ನು ಅಪಾಯದ ಸುಳಿಗೆ ದೂಡುತ್ತಾ, ಈ‌ ಮಣ್ಣಿನ ಬಹುತ್ವವನ್ನು ನಾಶ ಮಾಡುತ್ತಿರುವ ಬಿಜೆಪಿ ಪರಿವಾರದ ವಿರುದ್ಧ ಖಚಿತ ನಿಲುವು ತೆಗೆದುಕೊಂಡು ಸ್ವಯಂಪ್ರೇರಿತವಾಗಿ ಈ ಚುನಾವಣೆಯಲ್ಲಿ ಜನರನ್ನು ಎಚ್ಚರಿಸುವ ಕೆಲಸ ಮಾಡಿದ್ದಕ್ಕಾಗಿ ಸಾಹಿತಿ-ಬರಹಗಾರರಿಗೆ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದರು.

ಸುಳ್ಳು ಮೊಕದ್ದಮೆ ವಾಪಸ್

ಸಾಹಿತಿ, ಬರಹಗಾರ, ಕನ್ನಡ ಹೋರಾಟಗಾರರು, ದಲಿತ ಚಳವಳಿಗಳ ಹೋರಾಟಗಾರರು, ರೈತ-ಕಾರ್ಮಿಕರ ಮೇಲೆ ಹಾಕಿದ್ದ ಸುಳ್ಳು ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗುವುದು. ಮಕ್ಕಳ ಮನಸ್ಸನ್ನು ಕಲುಷಿತಗೊಳಿಸಲು ನಡೆಸಿರುವ ಕೃತ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ. ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಹೊಸ ಶಿಕ್ಷಣ ನೀತಿ ಹೆಸರಲ್ಲಿ ಶಿಕ್ಷಣ ಕ್ಷೇತ್ರವನ್ನು ಗಬ್ಬೆಬ್ಬಿಸಲು ಅವಕಾಶ ಕೊಡುವುದಿಲ್ಲ. ಈ ಬಗ್ಗೆ ಮತ್ತೊಮ್ಮೆ ಪ್ರತ್ಯೇಕವಾದ ಸಭೆ ಚರ್ಚಿಸಿ ನಿಷ್ಠುರ ತೀರ್ಮಾನ ತೆಗೆದುಕೊಳ್ಳಲಾಗುವುದು. ಅನೈತಿಕ ಪೊಲೀಸ್ ಗಿರಿ, ದ್ವೇಷದ ರಾಜಕಾರಣ, ತೇಜೋವಧೆ ಮಾಡುವ ಟ್ರೋಲ್ ಗಳು, ಸಾಹಿತಿಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಖಡಕ್ ಸೂಚನೆ ನೀಡಿದ್ದೇನೆ. ಬರಹಗಾರರು ನೀಡಿರುವ ಮನವಿ ಪತ್ರದಲ್ಲಿನ ಸಂಗತಿಗಳನ್ನು ಗಂಭೀರವಾಗಿ ಪರಿಗಣಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಸಿಎಂ ಸಿದ್ದರಾಮಯ್ಯ ನೀಡಿದ ಭರವಸೆಗಳು

  • ಪಠ್ಯ ಮತ್ತು ಪಾಠಗಳ ಮೂಲಕ ಮಕ್ಕಳ ಮನಸ್ಸನ್ನು ಕಲುಷಿತಗೊಳಿಸಲು ನಡೆಸಿರುವ ಕೃತ್ಯವನ್ನು ಕ್ಷಮಿಸಲು ಸಾಧ್ಯವಿಲ್ಲ. ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗದಂತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ.
  • ಕನ್ನಡ ಹೋರಾಟಗಾರರು, ರೈತ-ಕಾರ್ಮಿಕ-ದಲಿತ ಚಳವಳಿಗಳ ಹೋರಾಟಗಾರರು ಮತ್ತು ಸಾಹಿತಿ, ಬರಹಗಾರರ ಮೇಲೆ ಹಾಕಿರುವ ಸುಳ್ಳು ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲಾಗುವುದು.
  • ಹೊಸ ಶಿಕ್ಷಣ ನೀತಿ ಹೆಸರಲ್ಲಿ ಶಿಕ್ಷಣ ಕ್ಷೇತ್ರವನ್ನು ಗಬ್ಬೆಬ್ಬಿಸಲು ಅವಕಾಶ ಕೊಡುವುದಿಲ್ಲ. ಈ ಬಗ್ಗೆ ಮತ್ತೊಮ್ಮೆ ಪ್ರತ್ಯೇಕವಾದ ಸಭೆ ಕರೆದು ಸಮಗ್ರವಾಗಿ ಚರ್ಚಿಸಿ ನಿಷ್ಠುರವಾದ ಮತ್ತು ಖಚಿತವಾದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು.
  • ಅನೈತಿಕ ಪೊಲೀಸ್ ಗಿರಿ, ದ್ವೇಷದ ರಾಜಕಾರಣ, ತೇಜೋವಧೆ ಮಾಡುವ ಟ್ರೋಲ್ ಗಳು ಮತ್ತು ಸಾಹಿತಿಗಳಿಗೆ ಬೆದರಿಕೆ ಹಾಕುವವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಈಗಾಗಲೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಖಡಕ್ ಸೂಚನೆ ನೀಡಿದ್ದೇನೆ.
  • ಉಳಿದಂತೆ ಸಾಹಿತಿ ಬರಹಗಾರರು ನೀಡಿರುವ ಮನವಿ ಪತ್ರದಲ್ಲಿನ ಸಂಗತಿಗಳನ್ನು ಗಂಭೀರವಾಗಿ ಪರಿಗಣಿಸುತ್ತೇನೆ. ಅಗತ್ಯಕ್ಕೆ ತಕ್ಕಂತೆ ನಮ್ಮ ಸರ್ಕಾರ ಕ್ರಮ ಕೈಗೊಳ್ಳಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:50 pm, Mon, 29 May 23

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ