ಮೋದಿ ಆಯ್ತು ಈಗ ಅಮಿತ್ ಶಾ ಭೇಟಿಯಾದ ಸಿದ್ದರಾಮಯ್ಯ, ಬೇಡಿಕೆ ಇಟ್ಟಿದ್ದೇನು?

Siddaramaiah Meets Amit Shah: ನವದೆಹಲಿ(New Delhi) ಪ್ರವಾಸದಲ್ಲಿ ಕರ್ನಾಟಕ ಸಿಎಂ ಸಿದ್ದರಾಮಯ್ಯ (Siddaramaiah) ಅವರು ನಿನ್ನೆ(ಡಿಸೆಂಬರ್ 19) ಅಷ್ಟೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಭೇಟಿ ಮಾಡಿ ಬರಗಾಲ ಹಾಗೂ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿದ್ದರು. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಇಂದು(ಡಿಸೆಂಬರ್ 20) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಭೇಟಿ ಮಾಡಿದ್ದಾರೆ.

ಮೋದಿ  ಆಯ್ತು ಈಗ ಅಮಿತ್ ಶಾ ಭೇಟಿಯಾದ ಸಿದ್ದರಾಮಯ್ಯ, ಬೇಡಿಕೆ ಇಟ್ಟಿದ್ದೇನು?
ಅಮಿತ್ ಶಾ ಭೇಟಿಯಾದ ಸಿದ್ದರಾಮಯ್ಯ
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: ರಮೇಶ್ ಬಿ. ಜವಳಗೇರಾ

Updated on:Dec 20, 2023 | 3:18 PM

ನವದೆಹಲಿ, (ಡಿಸೆಂಬರ್ 20): ನವದೆಹಲಿ(New Delhi) ಪ್ರವಾಸದಲ್ಲಿ ಕರ್ನಾಟಕ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಇಂದು ಇಂದು(ಡಿಸೆಂಬರ್ 20) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಭೇಟಿಯಾಗಿ ರಾಜ್ಯದಲ್ಲಿನ ಬರದ ಬಗ್ಗೆ ಮಾತುಕತೆ ನಡೆಸಿದ್ದು, ಕೂಡಲೇ ಪ್ರಕೃತಿ ವಿಕೋಪ ಕುರಿತಂತೆ ಉನ್ನತ ಮಟ್ಟದ ಸಮಿತಿ ಸಭೆ ಕರೆದು, ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರ ಪೀಡಿತವಾಗಿವೆ. ಸುಮಾರು 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. ಇದರಿಂದಾಗಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರವು ಎನ್.ಡಿ.ಆರ್.ಎಫ್. ಮಾರ್ಗಸೂಚಿಯನ್ವಯ ಬರ ಪರಿಹಾರ ಬಿಡುಗಡೆಗಾಗಿ ಮೊದಲ ಪ್ರಸ್ತಾವನೆ ಸಲ್ಲಿಸಿ ಮೂರು ತಿಂಗಳು ಕಳೆದಿದೆ. ಆದ್ದರಿಂದ ಕೂಡಲೇ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ,,18,177.44 ಕೋಟಿ ರೂಪಾಯಿ ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ, 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ

ಇದರಲ್ಲಿ 4663.12 ಕೋಟಿ ರೂ. ಇನ್‌ಪುಟ್‌ ಸಬ್ಸಿಡಿ, 12,577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಿದರು ಎಂದು ತಿಳಿದುಬಂದಿದೆ.

ಬರ ಪರಿಹಾರಕ್ಕಾಗಿ ರಾಜ್ಯದ ಮೊದಲ ಪ್ರಸ್ತಾವನೆಯನ್ನು ಕೇಂದ್ರ ಕೃಷಿ ಸಚಿವಾಲಯಕ್ಕೆ ದಿನಾಂಕ 22-09-2023 ರಂದ ಸಲ್ಲಿಸಲಾಗಿತ್ತು ಕೇಂದ್ರದ ಬರ ಅಧ್ಯಯನ ತಂಡವು ಅಕ್ಟೋಬರ್‌ ತಿಂಗಳ 4 ರಿಂದ 9ರ ನಡುವೆ ಭೇಟಿ ನೀಡಿ, ವರದಿಯನ್ನು ಸಲ್ಲಿಸಿದೆ. ಅದರ ನಂತರ ಇನ್ನೂ 21 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಆದ್ದರಿಂದ ಅಕ್ಟೋಬರ್‌ 20 ರಂದು ಕೇಂದ್ರ ಕೃಷಿ ಸಚಿವಾಲಯಕ್ಕೆ ಎನ್‌.ಡಿ.ಆರ್.ಎಫ್. ಅಡಿ 17,901.73 ಕೋಟಿ ರೂ. ಪರಿಹಾರ ಒದಗಿಸುವಂತೆ ಪ್ರಸ್ತಾವನೆ ಸಲ್ಲಿಸಲಾಯಿತು. ಇದರಲ್ಲಿ ತುರ್ತು ಪರಿಹಾರದ12,577.86 ಕೋಟಿ ರೂ. ಮೊತ್ತವೂ ಸೇರಿದೆ. ನವೆಂಬರ್‌ 4 ರಂದು ಹೆಚ್ಚುವರಿಯಾಗಿ 7 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಯಿತು. ಈ ಹಿನ್ನೆಲೆಯಲ್ಲಿ ಸಲ್ಲಿಸಿದ ಪೂರಕ ಮನವಿಯೊಂದಿಗೆ ಕೇಂದ್ರದಿಂದ 18,177.44 ಕೋಟಿ ರೂ. ಪರಿಹಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ದೇಶದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:16 pm, Wed, 20 December 23

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್