ಹಿಂದುಳಿದ ದಲಿತ ಮಠಾಧೀಶರ ನಿಯೋಗದಿಂದ ಸಿಎಂ ಸಿದ್ದರಾಮಯ್ಯ ಭೇಟಿ: ಜಾತಿ ಗಣತಿ ವರದಿ ಜಾರಿಗೆ ಒತ್ತಾಯ

ಕಾಂತರಾಜು ಸಿದ್ಧಪಡಿಸಿರುವ ಜಾತಿ ಗಣತಿ ವರದಿ ಜಾರಿಗೊಳಿಸುವಂತೆ ಹಿಂದುಳಿದ ದಲಿತ ಮಠಾಧೀಶರ ನಿಯೋಗದಿಂದ ಸಿಎಂ ಸಿದ್ದರಾಮಯ್ಯಗೆ ಒತ್ತಾಯಿಸಲಾಗಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಹಿಂದುಳಿದ ದಲಿತ ಮಠಾಧೀಶರ ನಿಯೋಗ ಮನವಿ ಸಲ್ಲಿಸಿದೆ.

ಹಿಂದುಳಿದ ದಲಿತ ಮಠಾಧೀಶರ ನಿಯೋಗದಿಂದ ಸಿಎಂ ಸಿದ್ದರಾಮಯ್ಯ ಭೇಟಿ: ಜಾತಿ ಗಣತಿ ವರದಿ ಜಾರಿಗೆ ಒತ್ತಾಯ
ಮಠಾಧೀಶರ ನಿಯೋಗದೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jan 06, 2024 | 9:49 PM

ಬೆಂಗಳೂರು, ಜನವರಿ 06: ಕಾಂತರಾಜು ಸಿದ್ಧಪಡಿಸಿರುವ ಜಾತಿ ಗಣತಿ ವರದಿ ಜಾರಿಗೊಳಿಸುವಂತೆ ಹಿಂದುಳಿದ ದಲಿತ ಮಠಾಧೀಶರ ನಿಯೋಗದಿಂದ ಸಿಎಂ ಸಿದ್ದರಾಮಯ್ಯ (Siddaramaiah)ಗೆ ಒತ್ತಾಯಿಸಲಾಗಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಹಿಂದುಳಿದ ದಲಿತ ಮಠಾಧೀಶರ ನಿಯೋಗ ಮನವಿ ಸಲ್ಲಿಸಿದೆ. ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದ ನಿಯೋಗದಿಂದ ಭೇಟಿ ಮಾಡಲಾಗಿದೆ.

ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಾತಿ ಗಣತಿ ವರದಿ ಸ್ವೀಕಾರಕ್ಕೆ 2 ತಿಂಗಳ ಸಮಯಾವಕಾಶ ಕೊಡಿ. ಕೆಲ ಸಮುದಾಯಗಳ ವಿರೋಧವಿದೆ, ಅವರನ್ನು ವಿಶ್ವಾಸಕ್ಕೆ ಪಡೆದು ಜಾತಿಗಣತಿ ವರದಿ ಸ್ವೀಕರಿಸುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಯಂದು ಕರ್ನಾಟಕದಲ್ಲಿ ವಿಶೇಷ ಪೂಜೆ ನಡೆಸಲು ರಾಜ್ಯ ಸರ್ಕಾರ ಚಿಂತನೆ

ಕಾಂತರಾಜು ವರದಿಯನ್ನೇ ಜಯಪ್ರಕಾಶ್ ಹೆಗ್ಡೆ ಸಲ್ಲಿಸಲು ಸಾಧ್ಯವಿಲ್ಲ. ಕಾನೂನು ಸಲಹೆ ಪಡೆದು ಮುಂದುವರಿಯಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆಸ್ತಿ ತೆರಿಗೆ ಪಾವತಿಗೆ ಹೆಚ್ಚಿನ ಕಾಲಾವಕಾಶ, ಸರಳ ವಿಧಾನಕ್ಕೆ ಕಾನೂನು ತಿದ್ದುಪಡಿ: ಡಿಸಿಎಂ ಡಿಕೆ ಶಿವಕುಮಾರ್

ಈ ವೇಳೆ ಮಠಗಳಿಗೆ ಜಮೀನು ನೀಡುವ ಬಗ್ಗೆಯೂ ಸ್ವಾಮೀಜಿಗಳು ಪ್ರಸ್ತಾಪ ಮಾಡಿದ್ದು, ಈ ಬಗ್ಗೆ ಶೀಘ್ರವೇ ವರದಿ ನೀಡುವಂತೆ ಬೆಂಗಳೂರು ಗ್ರಾಮಾಂತರ ತಹಶೀಲ್ದಾರ್‌ಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಖನಿಜ ನಿಗಮ ನಿಯಮಿತ, ರೇಷ್ಮೆ ಇಲಾಖೆ ಅಧಿಕಾರಿಗಳ ಜತೆ ಸಿಎಂ ಸಭೆ

ಖನಿಜ ನಿಗಮ ನಿಯಮಿತ, ರೇಷ್ಮೆ ಇಲಾಖೆ ಅಧಿಕಾರಿಗಳ ಜತೆ ಸಿಎಂ ಸಭೆ ಮಾಡಿದ್ದು, ಓಕಳಿಪುರಂನಲ್ಲಿನ ರೇಷ್ಮೆ ಇಲಾಖೆ ಜಾಗದಲ್ಲಿ ರೇಷ್ಮೆ ಭವನ ನಿರ್ಮಾಣ ಕುರಿತು ಚರ್ಚಿಸಿದ್ದಾರೆ. ಸಭೆಯಲ್ಲಿ ಸಚಿವರಾದ ವೆಂಕಟೇಶ್, ಎಸ್​.ಎಸ್​.ಮಲ್ಲಿಕಾರ್ಜುನ್​, ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ತೋಟಗಾರಿಕೆ, ಗಣಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.