AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿಯನ್ನು ಪ್ರತಿಪಕ್ಷ ನಾಯಕನಾಗಿ ನೇಮಿಸಲು ಹೊರಟ ಬಿಜೆಪಿ; ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಬಿಜೆಪಿ ಅಧಿಕಾರದಲ್ಲಿದ್ದಾಗ ಹಲವಾರು ದುಷ್ಕೃತ್ಯಗಳನ್ನು ಮಾಡಿದೆ ಮತ್ತು ಆದ್ದರಿಂದ ಜನರು ಅವರನ್ನು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದ್ದಾರೆ. ಪ್ರಧಾನಿ ಮೋದಿ ಅವರ ಜನಪ್ರಿಯತೆ ಕಡಿಮೆಯಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಕುಮಾರಸ್ವಾಮಿಯನ್ನು ಪ್ರತಿಪಕ್ಷ ನಾಯಕನಾಗಿ ನೇಮಿಸಲು ಹೊರಟ ಬಿಜೆಪಿ; ಸಿಎಂ ಸಿದ್ದರಾಮಯ್ಯ ವ್ಯಂಗ್ಯ
ಸಿದ್ದರಾಮಯ್ಯ
TV9 Web
| Edited By: |

Updated on:Jul 14, 2023 | 5:21 PM

Share

ಬೆಂಗಳೂರು, ಜುಲೈ 14: ಚುನಾವಣಾ ಫಲಿತಾಂಶ ಪ್ರಕಟವಾಗಿ 60 ದಿನಗಳು ಕಳೆದರೂ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನನ್ನು (Leader of opposition) ನೇಮಿಸಲು ವಿಫಲವಾಗಿರುವ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ವಾಗ್ದಾಳಿ ನಡೆಸಿದರು. ‘ಅನ್ನ ಭಾಗ್ಯ’ ಯೋಜನೆಯಡಿ ರಾಜ್ಯಕ್ಕೆ ನೀಡಬೇಕಿದ್ದ ಅಕ್ಕಿಯನ್ನು ನೀಡಲು ಕೇಂದ್ರ ಸರ್ಕಾರ ವಿಫಲವಾಗಿದೆ ಸಿದ್ದರಾಮಯ್ಯ (Siddaramaiah) ಟೀಕಿಸಿದರು. ಇದಕ್ಕೆ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಮುಖ್ಯಮಂತ್ರಿಗಳು ಪ್ರತಿಪಕ್ಷದ ವಿರುದ್ಧ ಟೀಕಾ ಪ್ರಹಾರ ಮುಂದುವರಿಸಿದರು.

ವಿಧಾನ ಪರಿಷತ್ತಿನಲ್ಲಿ ಶುಕ್ರವಾರ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಸಂದರ್ಭದಲ್ಲಿ ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಿದ ಮುಖ್ಯಮಂತ್ರಿಗಳು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ದಾಸ್ತಾನು ಹೊಂದಿದ್ದರೂ ರಾಜ್ಯಕ್ಕೆ ಅಕ್ಕಿ ನೀಡಲು ಭಾರತೀಯ ಆಹಾರ ನಿಗಮ (ಎಫ್‌ಸಿಐ) ನಿರಾಕರಿಸಿರುವ ಕುರಿತು ಮುಖ್ಯಮಂತ್ರಿ ಪ್ರಸ್ತಾಪಿಸಿದರು. ಇದು ಎರಡು ಕಡೆಯವರ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು. ಇದಕ್ಕೆ ಉತ್ತರಿಸಿದ ಸಿಎಂ, ವಿರೋಧ ಪಕ್ಷದ ನಾಯಕರ ನೇಮಕ ಮಾಡದ ಬಿಜೆಪಿ ನಾಯಕರನ್ನು ಲೇವಡಿ ಮಾಡಿದರು.

ಬಿಜೆಪಿ ಶಿಸ್ತಿನ ಪಕ್ಷ ಎಂದು ನೀವು ಹೇಳುತ್ತೀರಿ ಮತ್ತು ಇನ್ನೂ ನಿಮಗೆ ವಿರೋಧ ಪಕ್ಷದ ನಾಯಕನನ್ನು ನೇಮಿಸಲು ಸಾಧ್ಯವಾಗಲಿಲ್ಲ. ಬಿಜೆಪಿ ರಾಜಕೀಯವಾಗಿ ದಿವಾಳಿಯಾಗುತ್ತದೆ ಎಂದು ನನಗೆ ತಿಳಿದಿರಲಿಲ್ಲ. ಹೆಚ್​​ಡಿ ಕುಮಾರಸ್ವಾಮಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಲು ನೀವು ನಿರ್ಧರಿಸಿದ್ದೀರಿ ಎಂದು ನಾನು ಭಾವಿಸುತ್ತೇನೆ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಏಳು ಜಿಲ್ಲೆಗಳಲ್ಲಿ ಬಿಜೆಪಿ ಒಂದೇ ಒಂದು ಸ್ಥಾನವನ್ನೂ ಗೆದ್ದಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ ಹಲವಾರು ದುಷ್ಕೃತ್ಯಗಳನ್ನು ಮಾಡಿದೆ ಮತ್ತು ಆದ್ದರಿಂದ ಜನರು ಅವರನ್ನು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದ್ದಾರೆ. ಪ್ರಧಾನಿ ಮೋದಿ ಅವರ ಜನಪ್ರಿಯತೆ ಕಡಿಮೆಯಾಗುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಮಾತು ಕೇಳಿದ್ದರೆ 5 ವರ್ಷ ಸಿಎಂ ಆಗಿರುತ್ತಿದ್ದೆ; 2019ರ ರಹಸ್ಯ ಬಿಚ್ಚಿಟ್ಟ ಹೆಚ್​​ಡಿ ಕುಮಾರಸ್ವಾಮಿ

ಕೆಲ ಸಮಯದ ನಂತರ ಬಿಜೆಪಿ ನಾಯಕರು ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ ಖಂಡಿಸಿ ಕಲಾಪ ಬಹಿಷ್ಕರಿಸಿ ಹೊರನಡೆದರು.

ಈ ಮಧ್ಯೆ, ಪ್ರತಿಪಕ್ಷ ನಾಯಕನ ಆಯ್ಕೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು, ಹೈಕಮಾಂಡ್ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

ಕೇಂದ್ರ ನಾಯಕರು ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ವಿರೋಧ ಪಕ್ಷದ ನಾಯಕನ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಿದ್ದಾರೆ. ಎಲ್ಲಾ 66 ಶಾಸಕರು ಈ ಸ್ಥಾನಕ್ಕೆ ಅರ್ಹರು ಎಂದು ಕಟೀಲ್ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:00 pm, Fri, 14 July 23