ನೀತಿ ಆಯೋಗದ ಸಭೆಗೆ ಸಿದ್ದರಾಮಯ್ಯ ಹೋಗದಿರುವುದು ಅಕ್ಷಮ್ಯ ಅಪರಾಧ: ಜಗದೀಶ್ ಶೆಟ್ಟರ್

ಅರುಣ್​ ಕುಮಾರ್​ ಬೆಳ್ಳಿ

Updated on: May 26, 2025 | 12:07 PM

ಸಿದ್ದರಾಮಯ್ಯ ಮತ್ತು ಒಂದೆರಡು ರಾಜ್ಯಗಳ ಮುಖ್ಯಮಂತ್ರಿಗಳನ್ನು ಬಿಟ್ಟರೆ ಎಲ್ಲ ಸಿಎಂಗಳು ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಂಡಿದ್ದಾರೆ, ಹಗಲೆಲ್ಲ ಕೇಂದ್ರ ಸರ್ಕಾರವನ್ನು ಟೀಕಿಸುವ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರೂ ಸಭೆಯಲ್ಲಿ ಪಾಲ್ಗೊಂಡಿದ್ದಾರೆ, ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಶೆಟ್ಟರ್ ಹೇಳಿದರು.

ದೆಹಲಿ, ಮೇ 26: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಮಹತ್ವದ ನೀತಿ ಆಯೋಗದ ಸಭೆಗೆ (Niti Aayog meeting) ಕರ್ನಾಟದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೋಗದಿರುವುದು ಅಕ್ಷಮ್ಯ ಅಪರಾಧ ಮತ್ತು ಕನ್ನಡನಾಡಿನ ಜನತೆಗೆ ತೋರಿದ ಆಗೌರವ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ದೆಹಲಿಯಲ್ಲಿ ನಮ್ಮ ವರದಿಗಾರನೊಂದಿಗೆ ಮಾತಾಡಿದ ಅವರು, ಸಿದ್ದರಾಮಯ್ಯ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುವ ಬದಲು, ನೀತಿ ಆಯೋಗದ ಸಭೆಗೆ ಹಾಜರಾಗಿ ತಮ್ಮ ದೂರು ದುಮ್ಮಾನಗಳನ್ನು ಹೇಳಿಕೊಳ್ಳಬೇಕಿತ್ತು, ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿದ್ದರೆ ಆಯೋಗದ ಗಮನಕ್ಕೆ ತರಬೇಕಿತ್ತು ಎಂದು ಶೆಟ್ಟರ್ ಹೇಳಿದರು.

ಇದನ್ನೂ ಓದಿ:  ಕಾಂಗ್ರೆಸ್ ಸೇರಿದಾಗ ಜಗದೀಶ್ ಶೆಟ್ಟರ್ ಬಿಜೆಪಿ ಬಗ್ಗೆ ಏನೇನು ಹೇಳಿದ್ದರು ಗೊತ್ತಾ? ಸಿದ್ದರಾಮಯ್ಯ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.