ಪಿಎಂ ಜನಾರೋಗ್ಯ, ಸಿಎಂ ಆರೋಗ್ಯ ಕರ್ನಾಟಕ ಯೋಜನೆಯ ನೂತನ ಕಾರ್ಡ್ ಬಿಡುಗಡೆ ಮಾಡಿದ ಸಿಎಂ

| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 06, 2023 | 6:18 PM

ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಯೋಜನೆಗೆ ಹೊಸ ರೂಪ ನೀಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪರಿಷ್ಕೃತ ಕಾರ್ಡ್ ಲೋಕಾರ್ಪಣೆ ಮಾಡಲಾಗಿದೆ. ಅದರಂತೆ ಬರೊಬ್ಬರಿ 5.54 ಕೋಟಿ ಮಂದಿಗೆ ಪರಿಷ್ಕೃತ ಕಾರ್ಡ್ ವಿತರಣೆಗೆ ಚಾಲನೆ ಸಿಕ್ಕಿದೆ.

ಪಿಎಂ ಜನಾರೋಗ್ಯ, ಸಿಎಂ ಆರೋಗ್ಯ ಕರ್ನಾಟಕ ಯೋಜನೆಯ ನೂತನ ಕಾರ್ಡ್ ಬಿಡುಗಡೆ ಮಾಡಿದ ಸಿಎಂ
ಸಿದ್ದರಾಮಯ್ಯ
Follow us on

ಬೆಂಗಳೂರು, ಡಿ.06: ಪಿಎಂ ಜನಾರೋಗ್ಯ ಹಾಗೂ ಸಿಎಂ ಆರೋಗ್ಯ ಕರ್ನಾಟಕ ಯೋಜನೆಯ ನೂತನ ಕಾರ್ಡ್​ನ್ನು ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ(Siddaramaiah) ಅವರು ಲೋಕಾರ್ಪಣೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು ‘ಈ ಮೂಲಕ APL 1.5 ಲಕ್ಷ ರೂ, BPL ಕಾರ್ಡ್​ದಾರರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ದೊರೆಯುತ್ತದೆ. ಅದರಲ್ಲಿ ಶೇಕಡಾ 64 ರಿಂದ 70ರಷ್ಟು ಚಿಕಿತ್ಸಾ ವೆಚ್ಚವನ್ನು ಕರ್ನಾಟಕ ಸರ್ಕಾರ ಭರಿಸುತ್ತದೆ. ಉಳಿದ ಮೊತ್ತವನ್ನು ಕೇಂದ್ರ ಸರ್ಕಾರ ಭರಿಸಲಿದೆ ಎಂದು ಹೇಳಿದರು.

ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಯೋಜನೆಗೆ ಹೊಸ ರೂಪ

ಆಯುಷ್ಮಾನ್ ಭಾರತ್ ಹಾಗೂ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಯೋಜನೆಗೆ ಹೊಸ ರೂಪ ನೀಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪರಿಷ್ಕೃತ ಕಾರ್ಡ್ ಲೋಕಾರ್ಪಣೆ ಮಾಡಲಾಗಿದೆ. ಅದರಂತೆ ಬರೊಬ್ಬರಿ 5.54 ಕೋಟಿ ಮಂದಿಗೆ ಪರಿಷ್ಕೃತ ಕಾರ್ಡ್ ವಿತರಣೆಗೆ ಚಾಲನೆ ಸಿಕ್ಕಿದೆ. ಇನ್ನು ಈ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇಲಾಖೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:ಮುಂದಿನ ವರ್ಷಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಕಾರ್ಯಗತಗೊಳಿಸಲಾಗುವುದು: ಸಿದ್ದರಾಮಯ್ಯ


ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:13 pm, Wed, 6 December 23