ಡಿಕೆ ಶಿವಕುಮಾರ್, ಲಿಂಗಾಯತರು, ಒಕ್ಕಲಿಗರ ವಿರೋಧದ ನಡುವೆಯೂ ಜಾತಿ ಗಣತಿ ವರದಿ ಸ್ವೀಕರಿಸಲಾಗುವುದು ಎಂದ ಸಿದ್ದರಾಮಯ್ಯ

ನಾವು 162 ಕೋಟಿ ರೂಪಾಯಿ ಖರ್ಚು ಮಾಡಿದ್ದೇವೆ. ನಾವು ವರದಿ ತೆಗೆದುಕೊಳ್ಳಬೇಕು. ಅವರಿಗೆ (ವೊಕ್ಕಲಿಗರಿಗೆ) ಇರುವ ಅನುಮಾನಗಳು ವರದಿಯಲ್ಲಿವೆಯೇ ಇಲ್ಲವೇ ಎಂಬುದನ್ನು ನೋಡಬೇಕು. ನಾನು ವರದಿಯನ್ನು ನೋಡಿಲ್ಲ. ನಾನೇ ನೋಡದಿದ್ದರೆ ಬೇರೆಯವರು ಅದನ್ನು ಹೇಗೆ ನೋಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಡಿಕೆ ಶಿವಕುಮಾರ್, ಲಿಂಗಾಯತರು, ಒಕ್ಕಲಿಗರ ವಿರೋಧದ ನಡುವೆಯೂ ಜಾತಿ ಗಣತಿ ವರದಿ ಸ್ವೀಕರಿಸಲಾಗುವುದು ಎಂದ ಸಿದ್ದರಾಮಯ್ಯ
ಸಿದ್ದರಾಮಯ್ಯ
Follow us
TV9 Web
| Updated By: Ganapathi Sharma

Updated on: Nov 22, 2023 | 5:59 PM

ಬೆಂಗಳೂರು, ನವೆಂಬರ್ 22: ಕಾಂತರಾಜ್ ಸಮಿತಿ ಸಿದ್ಧಪಡಿಸಿರುವ ಜಾತಿ ಗಣತಿ ವರದಿಯು (Caste Census Report) ಕರ್ನಾಟಕ ಸರ್ಕಾರದ ಕಾಂಗ್ರೆಸ್ ಶಾಸಕರಲ್ಲಿ ಒಡಕು ಮೂಡಿಸಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಲಿಂಗಾಯತರು ಮತ್ತು ಒಕ್ಕಲಿಗರ ವಿರೋಧದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು, ಸರ್ಕಾರವು ಇತರ ಹಿಂದುಳಿದ ವರ್ಗಗಳ ಆಯೋಗದಿಂದ (OBC) ವರದಿಯನ್ನು ಸ್ವೀಕರಿಸಲಿದೆ ಎಂದು ಬುಧವಾರ ಹೇಳಿದ್ದಾರೆ.

ವಿಧಾನಸೌಧದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಮೀಕ್ಷೆಗೆ 162 ಕೋಟಿ ರೂಪಾಯಿ ಖರ್ಚು ಮಾಡಲಾಗಿದ್ದು, ಸರ್ಕಾರ ವರದಿ ತರಿಸಿಕೊಂಡು ನಂತರ ತೀರ್ಮಾನಿಸಲಿದೆ ಎಂದರು.

ನಾವು 162 ಕೋಟಿ ರೂಪಾಯಿ ಖರ್ಚು ಮಾಡಿದ್ದೇವೆ. ನಾವು ವರದಿ ತೆಗೆದುಕೊಳ್ಳಬೇಕು. ಅವರಿಗೆ (ವೊಕ್ಕಲಿಗರಿಗೆ) ಇರುವ ಅನುಮಾನಗಳು ವರದಿಯಲ್ಲಿವೆಯೇ ಇಲ್ಲವೇ ಎಂಬುದನ್ನು ನೋಡಬೇಕು. ನಾನು ವರದಿಯನ್ನು ನೋಡಿಲ್ಲ. ನಾನೇ ನೋಡದಿದ್ದರೆ ಬೇರೆಯವರು ಅದನ್ನು ಹೇಗೆ ನೋಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ವರದಿ ಸಲ್ಲಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಅವರು ವರದಿ ಸಲ್ಲಿಸುವವರೆಗೆ ಒಬಿಸಿ ಆಯೋಗದ ಅವಧಿಯನ್ನು ವಿಸ್ತರಿಸಲಾಗುವುದು ಎಂದು ಹೇಳಿದ್ದಾರೆ.

‘ಜಯಪ್ರಕಾಶ್ ಹೆಗ್ಡೆ (ಒಬಿಸಿ ಆಯೋಗದ ಅಧ್ಯಕ್ಷ) ನನ್ನನ್ನು ಭೇಟಿ ಮಾಡಿದ್ದರು. ಡಿಸೆಂಬರ್‌ನಲ್ಲಿ ವರದಿ ಸಲ್ಲಿಸುವುದಾಗಿ ತಿಳಿಸಿದರು. ಅವರು ವರದಿ ಸಲ್ಲಿಸುವವರೆಗೂ ಅವರ ಸೇವಾವಧಿಯನ್ನು ವಿಸ್ತರಿಸುತ್ತೇವೆ ಎಂದು ಹೇಳಿದ್ದೆ. ಜನವರಿಯೊಳಗೆ ಸಲ್ಲಿಸುವಂತೆ ಹೇಳಿದ್ದೇನೆ’ ಎಂದು ಸಿಎಂ ತಿಳಿಸಿದರು.

ಡಿಸಿಎಂ ಡಿಕೆ ಶಿವಕುಮಾರ್ ವರದಿಗೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಇಬ್ಬರ ನಡುವೆ ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಸಿಎಂ ಹೇಳಿದರು.

ಇದನ್ನೂ ಓದಿ: ಜಾತಿಗಣತಿ ವರದಿ ಜಾರಿ ವಿಚಾರದಲ್ಲಿ ನನ್ನ ನಿರ್ಧಾರ ಅಚಲ: ಸಿದ್ದರಾಮಯ್ಯ

ಈ ಬಗ್ಗೆ ಡಿಸಿಎಂ ನನ್ನೊಂದಿಗೆ ಯಾವತ್ತೂ ಮಾತನಾಡಿಲ್ಲ. ಒಕ್ಕಲಿಗ ಸಂಘದ ಮುಖಂಡರು ನನ್ನನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ವರದಿ ಬಂದ ನಂತರ ಅವರ ಮನವಿಯನ್ನು ಪರಿಗಣಿಸುತ್ತೇನೆ ಎಂದು ಸಿಎಂ ಹೇಳಿದರು.

ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಸುಮಾರು 15 ಕಾಂಗ್ರೆಸ್ ಶಾಸಕರು ಸಿಎಂಗೆ ಬರೆದ ಪತ್ರಕ್ಕೆ ಸಹಿ ಮಾಡಿ ವರದಿ ತಿರಸ್ಕರಿಸುವಂತೆ ಮನವಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?