ಒಂದೆರಡು ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದ ಸಿಎಂ ಸಿದ್ದರಾಮಯ್ಯ

| Updated By: ಗಂಗಾಧರ​ ಬ. ಸಾಬೋಜಿ

Updated on: Mar 07, 2024 | 3:11 PM

'ವಿಶ್ವಗುರು ಬಸವಣ್ಣನವರನ್ನ ಕರ್ನಾಟಕದ ಸಾಂಸ್ಕೃತಿಕ ನಾಯಕ' ಎಂದು ಘೋಷಿಸಿದ ಹಿನ್ನೆಲೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಭಾಗವಹಿಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಒಂದೆರಡು ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು  ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಒಂದೆರಡು ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Follow us on

ಬೀದರ್, ಮಾರ್ಚ್​ 7: ಒಂದೆರಡು ದಿನದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು  ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ವಿಶ್ವಗುರು ಬಸವಣ್ಣ ಅವರನ್ನು ಸಾಂಸ್ಕ್ರೃತಿಕ ನಾಯಕ ಎಂದು ಘೋಷಣೆ ಹಿನ್ನಲೆ‌ ಇಂದು ಬಳ್ಳಾರಿಯಲ್ಲಿ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಭಾಗವಹಿಸಿ ಬಳಿಕ ಬಸವಕಲ್ಯಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಲಿತ ಮುಖ್ಯಮಂತ್ರಿ ಆಗಬೇಕು ಎಂದು ಯಾರು ಹೇಳಿದ್ದಾರೆ ಎಂದು ಪ್ರಶ್ನಿಸಿದರು. ಕೆಲವರು ಅಂಬೇಡ್ಕರ್​ರವರ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ.

ರಾಮೇಶ್ವರ ಕೆಫೆ ಬಾಂಬ್ ಸ್ಟೋಟ್ ಪ್ರಕರಣ ಆರೋಪಿ ಪತ್ಯೆ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಆರೋಪಿ ಬಗ್ಗೆ ಸುಳಿವು ಸಿಕ್ಕಿದೆ. ಆದರೆ ಎಲ್ಲವನ್ನೂ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಬಾಂಬ್ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಹೇಳಿದ್ದಾರೆ.

ವಿಶ್ವಗುರು ಬಸವೇಶ್ವರರ ಸಮವಾಗಿ ಸಿದ್ದರಾಮಯ್ಯ ಬ್ಯಾನರ್​: ಬಸವಾಭಿಮಾನಿಗಳು ಬೇಸರ

ಸಿಎಂ ಸಿದ್ದರಾಮಯ್ಯ ಮತ್ತು ವಿಶ್ವಗುರು ಬಸವೇಶ್ವರರ ಬ್ಯಾನರ್ ಸಮವಾಗಿ ಹಾಲಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಬಸವಾಭಿಮಾನಿಗಳು ಬೇಸರ ವ್ಯಕ್ತ ಪಡಿಸಿದ್ದಾರೆ. ಜಗತಜ್ಯೋತಿ ಬಸವಣ್ಣನವರ ಹಾಗೆ ಸಿಎಂ ಸಿದ್ದರಾಮಯ್ಯ ಎಂದು ಬಿಂಬಿಸುವ ಬ್ಯಾನರ್​​ ಹಾಕಲಾಗಿದೆ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ  ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ಭಟ್ಕಳ: ಸಂಸದ ಅನಂತ್ ಕುಮಾರ್ ಹೆಗಡೆ ಹಾರಿಸಿದ್ದ ಹನುಮಧ್ವಜ ತೆರವು

‘ವಿಶ್ವಗುರು ಬಸವಣ್ಣನವರನ್ನ ಕರ್ನಾಟಕದ ಸಾಂಸ್ಕೃತಿಕ ನಾಯಕ’ ಎಂದು ಘೋಷಿಸಿದ ಹಿನ್ನೆಲೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ವಿಶ್ವ ಬಸವ ಧರ್ಮ ಟ್ರಸ್ಟ್ ಅನುಭವ ಮಂಟಪ ಬಸವಕಲ್ಯಾಣ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ (ರಿ) ಬೆಂಗಳೂರು.

ಇದನ್ನೂ ಓದಿ: Bengaluru Water Crisis: ಬೆಂಗಳೂರು ನೀರಿನ ಬಿಕ್ಕಟ್ಟು ಬಗೆಹರಿಸಲು ಸರ್ಕಾರ ಕೈಗೊಂಡ ಕ್ರಮಗಳೇನು? ಇಲ್ಲಿದೆ ವಿವರ

ಲಿಂಗಾಯತ ಮಠಾಧೀಶರ ಒಕ್ಕೂಟದಿಂದ ಆಯೋಜಿಸಲಾಗಿದೆ. ಈ ಸಮಾರಂಭ ವೇದಿಕೆಯ ಮುಂಭಾಗದಲ್ಲಿ ಬಸವಣ್ಣ ಹಾಗೂ ಸಿದ್ದರಾಮಯ್ಯ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಇದನ್ನು ಕಂಡ ಬಸವಾಭಿಮಾನಿಗಳು ಬೇಸರ ವ್ಯಕ್ತ ಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.