AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುತ್ತಿರುವ ತಮಿಳುನಾಡು; ಸಿಎಂ ಸಿದ್ದರಾಮಯ್ಯ ಆಕ್ಷೇಪ

ಕರ್ನಾಟಕವು ಅನಿವಾರ್ಯವಾಗಿ ತಮಿಳುನಾಡಿಗೆ ನೀರು ಬಿಡಬೇಕಾಗಿ ಬಂದಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಕಾರಣ ನೀರು ಬಿಡಲಾಗಿದೆ. ರಾಜ್ಯದ ರೈತರ ಹಿತಾಸಕ್ತಿ ಕಾಪಾಡುವುದರ ಜತೆಗೆ ಮೈಸೂರು, ಬೆಂಗಳೂರು ಮತ್ತು ಇತರ ಹಲವಾರು ಜಿಲ್ಲೆಗಳ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಸರ್ಕಾರವು ಬದ್ಧವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸುತ್ತಿರುವ ತಮಿಳುನಾಡು; ಸಿಎಂ ಸಿದ್ದರಾಮಯ್ಯ ಆಕ್ಷೇಪ
ಸಿದ್ದರಾಮಯ್ಯ
Ganapathi Sharma
|

Updated on: Sep 11, 2023 | 6:08 PM

Share

ಮೈಸೂರು, ಸೆಪ್ಟೆಂಬರ್ 11: ಮೇಕೆದಾಟು ಅಣೆಕಟ್ಟೆ ನಿರ್ಮಾಣ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಮಿಳುನಾಡು (Tamil Nadu) ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಅನುಮತಿ ನೀಡಲು ಕೇಂದ್ರದ ಬಿಜೆಪಿ ಸರ್ಕಾರ ವಿಳಂಬ ಮಾಡುತ್ತಿದೆ. ನೆರೆಯ ತಮಿಳುನಾಡು ಅನಗತ್ಯ ತೊಂದರೆ ನೀಡುತ್ತಿದೆ ಎಂದು ಆರೋಪಿಸಿದ್ದಾರೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಕರ್ನಾಟಕ ಒತ್ತಾಯಿಸುತ್ತಿದ್ದು, ಉಭಯ ರಾಜ್ಯಗಳ ನಡುವಿನ ಕಾವೇರಿ ಜಲ ವಿವಾದಕ್ಕೆ (Cauvery Water Dispute) ಇದೊಂದೇ ಪರಿಹಾರ ಎಂದು ಹೇಳಿದೆ.

ಮೇಕೆದಾಟು ಯೋಜನೆಗೆ ಕೇಂದ್ರದ ಬಿಜೆಪಿ ಸರಕಾರ ಅನುಮತಿ ನೀಡಿಲ್ಲ. ತಮಿಳುನಾಡು ಯೋಜನೆಗೆ ವಿರೋಧ ವ್ಯಕ್ತಪಡಿಸಲು ಕಾರಣಗಳಿಲ್ಲ. ಮೇಕೆದಾಟು ಯೋಜನೆಯ ಪ್ರದೇಶ ನಮ್ಮ ವ್ಯಾಪ್ತಿಯಲ್ಲಿದೆ. ತಮಿಳುನಾಡಿಗೆ 177.25 ಟಿಎಂಸಿ ನೀರು ಹಂಚಿಕೆ ಮಾಡಿದ್ದು, ಸಾಮಾನ್ಯ ವರ್ಷಗಳಲ್ಲಿ ಅವರಿಗೆ ಅಷ್ಟು ನೀರು ಬಿಡಬೇಕು. ಸಂಕಷ್ಟದ ಸಮಯದಲ್ಲಿ ಅದಕ್ಕೆ ತಕ್ಕುದಾದ ಸೂತ್ರವನ್ನು ಅನುಸರಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ತಮಿಳುನಾಡು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದೆ ಎಂದು ಆರೋಪಿಸಿದ ಅವರು, ಕರ್ನಾಟಕ ವಿಸ್ತೃತ ಯೋಜನಾ ವರದಿ ಸಲ್ಲಿಸಿದ್ದರೂ ಕೇಂದ್ರ ಅನುಮತಿ ನೀಡುತ್ತಿಲ್ಲ ಎಂದು ದೂರಿದ್ದಾರೆ.

ಅವರು (ಕೇಂದ್ರ) ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಅನುಮತಿ ನೀಡಲು ಸೂಚಿಸಬೇಕು. ಅದು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುತ್ತದೆ. ಆದರೆ ಕೇಂದ್ರ ಸರ್ಕಾರ ಅದನ್ನು ಮಾಡುತ್ತಿಲ್ಲ. ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಕರ್ನಾಟಕವು ಅನಿವಾರ್ಯವಾಗಿ ತಮಿಳುನಾಡಿಗೆ ನೀರು ಬಿಡಬೇಕಾಗಿ ಬಂದಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ಕಾರಣ ನೀರು ಬಿಡಲಾಗಿದೆ. ರಾಜ್ಯದ ರೈತರ ಹಿತಾಸಕ್ತಿ ಕಾಪಾಡುವುದರ ಜತೆಗೆ ಮೈಸೂರು, ಬೆಂಗಳೂರು ಮತ್ತು ಇತರ ಹಲವಾರು ಜಿಲ್ಲೆಗಳ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸಲು ಸರ್ಕಾರವು ಬದ್ಧವಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸ್ಟಾಲಿನ್ ವಿರುದ್ಧ ಟೀಕೆ ಮಾಡಲಾಗದೆ ನಮ್ಮ ವಿರುದ್ಧ ಟೀಕೆ; ಸಿದ್ದರಾಮಯ್ಯ ವಿರುದ್ಧ ಆರ್ ಅಶೋಕ ವಾಗ್ದಾಳಿ

ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಲಾಗಿದ್ದು, ಬೆಳೆಗಳನ್ನು ಕೂಡ ಸಂರಕ್ಷಿಸಬೇಕಿದೆ. ನೀರು ಬಿಡುವಂತೆ ಪ್ರಾಧಿಕಾರ ಕೇಳಿದ್ದರಿಂದ ನೀರು ಬಿಟ್ಟಿದ್ದೇವೆ. ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರೂ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸೆಪ್ಟೆಂಬರ್ 12 ರಂದು ರಾಜ್ಯವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ತನ್ನ ನಿಲುವನ್ನು ಮುಂದಿಡಲಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ
ಮುಂಬೈನಲ್ಲಿ ಟೆಸ್ಲಾ ಕಾರು ಚಲಾಯಿಸಿದ ಡಿಸಿಎಂ ಏಕನಾಥ್ ಶಿಂಧೆ