ಬ್ಯಾಡಗಿ ಮೆಣಸಿನಕಾಯಿ ದರ ಹಠಾತ್ ಕುಸಿತಕ್ಕೆ ಕಾರಣವೇನು? ವರದಿ ಸಲ್ಲಿಸವಂತೆ ಸಿದ್ದರಾಮಯ್ಯ ಸೂಚನೆ

|

Updated on: Mar 12, 2024 | 12:00 PM

ಬ್ಯಾಡಗಿ ಮೆಣಸಿಕಾಯಿ ಮಾರುಕಟ್ಟೆ ಮೆಣಸಿನಕಾಯಿ ದರ ಧಿಡೀರನೆ ಕುಸಿತವಾಗಿದ್ದು, ಕಳೆದ ವಾರ ಒಂದು ಕ್ವಿಂಟಾಲ್‌ 20 ಸಾವಿರವಿದ್ದ ಮೆಣಸಿನಕಾಯಿ ದರ, ಇದೀಗ ಧಿಡೀರನೆ 12 ಸಾವಿರಕ್ಕೆ ಇಳಿಕೆಯಾಗಿದೆ. ಇದರಿಂದ ಆಕ್ರೋಶಗೊಂಡ ರೈತರು 12ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಅಲ್ಲದೇ ಕಚೇರಿಯಲ್ಲಿನ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ.

ಬ್ಯಾಡಗಿ ಮೆಣಸಿನಕಾಯಿ ದರ ಹಠಾತ್ ಕುಸಿತಕ್ಕೆ ಕಾರಣವೇನು? ವರದಿ ಸಲ್ಲಿಸವಂತೆ ಸಿದ್ದರಾಮಯ್ಯ ಸೂಚನೆ
ಸಿಎಂ ಸಿದ್ದರಾಮಯ್ಯ
Follow us on

ಬೆಂಗಳೂರು, ಮಾರ್ಚ್​​ 12: ಬ್ಯಾಡಗಿ ಮೆಣಸಿನಕಾಯಿ (Byadgi Menasinakai) ಬೆಲೆ ಕುಸಿತಕ್ಕೆ ಕಾರಣವೇನೆಂದು ತಿಳಿದು, ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದೇನೆ. ವರದಿ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಗ್ನಿಶಾಮಕ ವಾಹನ ಸೇರಿದಂತೆ ಕನಿಷ್ಠ ಮೂರು ವಾಹನಗಳಿಗೆ ರೈತರು ಬೆಂಕಿ ಹಚ್ಚಿದ್ದಾರೆ. ಮತ್ತು ಎಪಿಎಂಸಿ ಕಚೇರಿಯಲ್ಲಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ ಎಂದು ತಿಳಿಸಿದರು.

ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ವಾಹನವನ್ನು ಮಾರುಕಟ್ಟೆ ಒಳಗೆ ಪ್ರವೇಶಿಸದಂತೆ ತಡೆದಿದ್ದಾರೆ. ಈ ವೇಳೆ ಪೊಲೀಸರು ಮತ್ತು ರೈತರ ನಡುವೆ ವಾಗ್ವಾದ ನಡೆದಿದೆ. ಕೆಲ ಹೊತ್ತಿನ ಬಳಿಕ ಪೊಲೀಸರು ಗುಂಪನ್ನು ಚದುರಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು.

ಗೃಹ ಸಚಿವ ಜಿ.ಪರಮೇಶ್ವರ ಸುದ್ದಿಗಾರರೊಂದಿಗೆ ಮಾತನಾಡಿ, ಒಂದೇ ದಿನದಲ್ಲಿ ಮೆಣಸಿನಕಾಯಿ ಬೆಲೆ ಕ್ವಿಂಟಲ್ ಗೆ 20 ಸಾವಿರದಿಂದ 8 ಸಾವಿರಕ್ಕೆ ಕುಸಿದಿದ್ದು, ಹಾವೇರಿ ಎಪಿಎಂಸಿ ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಿದೆ. ಈ ರೀತಿಯ ಬೆಲೆ ಕುಸಿತ ಎಲ್ಲ ಎಪಿಎಂಸಿ ಮಾರುಕಟ್ಟೆಗಳಲ್ಲಿ ನಡೆದಿದೆಯೇ ಅಥವಾ ಹಾವೇರಿ ಮಾರುಕಟ್ಟೆಯಲ್ಲಿ ಮಾತ್ರವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.

ಇದನ್ನೂ ಓದಿ: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಗಲಾಟೆ: ಆರೋಪಿ ನಾಶಿಪುಡಿಗೂ ಇದಕ್ಕೂ ಸಂಬಂಧವಿಲ್ಲ; ಪರಮೇಶ್ವರ್​​

ಹಾವೇರಿ ಜಿಲ್ಲೆಯ ಎಪಿಎಂಸಿ ಕಚೇರಿಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಲಾಗಿದೆ. ಕರ್ನಾಟಕ ಮತ್ತು ನೆರೆಯ ಆಂಧ್ರಪ್ರದೇಶದ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಬ್ಯಾಡಗಿ ಮಾರುಕಟ್ಟೆಗೆ ಆಗಮಿಸಿದ್ದು, ಮೆಣಸಿನಕಾಯಿ ಬೆಲೆಯಲ್ಲಿ ದಿಢೀರ್ ಕುಸಿತ ಕಂಡು ಆಘಾತಕ್ಕೊಳಗಾಗಿದ್ದಾರೆ.
ಹಿಂಸಾಚಾರದಲ್ಲಿ 12 ವಾಹನಗಳು ಸುಟ್ಟು ಕರಕಲಾಗಿವೆ. ಪ್ರಕರಣ ದಾಖಲಾಗಿದ್ದು, ಇದುವರೆಗೆ 25ಕ್ಕೂ ಹೆಚ್ಚು ರೈತರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ಏನಿದು ಘಟನೆ

ಮೆಣಸಿನಕಾಯಿ ಬೆಲೆ ದಿಢೀರ್ ಕುಸಿದಿರುವುದಕ್ಕೆ ಆಕ್ರೋಶಗೊಂಡ ರೈತರು ಹಾವೇರಿ ಜಿಲ್ಲೆಯ ಬ್ಯಾಡಗಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (APMC) ಮಾರುಕಟ್ಟೆಯಲ್ಲಿನ 12ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಅಲ್ಲದೇ ಕಚೇರಿಯಲ್ಲಿನ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ