Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಕಂಟಕ ಬೆನ್ನಲ್ಲೇ ಪತ್ನಿ ಹೆಸರಲ್ಲಿ ಸಿದ್ದರಾಮಯ್ಯ ವಿಶೇಷ ಪೂಜೆ: ತಾವೇ ಕುಂಕುಮ ಹಚ್ಚಿಸಿಕೊಂಡ ಸಿಎಂ

ಮೂರು ದಿನಗಳಿಂದ ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ನಿನ್ನೆ ಮೈಸೂರಿಗೆ ಭೇಟಿ ನೀಡಿ ದಸರಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಇಂದು ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮ ದೇವಿ ದರ್ಶನ ಪಡೆದುಕೊಂಡಿದ್ದಾರೆ. ಇದೇ ವೇಳೆ ತಮ್ಮ ಪತ್ನಿ ಪಾರ್ವತಿ ಹೆಸರಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದು, ಹಣೆಗೆ ತಾವೇ ಕುಂಕುಮ ಹಚ್ಚಿಕೊಂಡಿದ್ದಾರೆ.

ಮುಡಾ ಕಂಟಕ ಬೆನ್ನಲ್ಲೇ ಪತ್ನಿ ಹೆಸರಲ್ಲಿ ಸಿದ್ದರಾಮಯ್ಯ ವಿಶೇಷ ಪೂಜೆ: ತಾವೇ ಕುಂಕುಮ ಹಚ್ಚಿಸಿಕೊಂಡ ಸಿಎಂ
ಮುಡಾ ಕಂಟಕ ಬೆನ್ನಲ್ಲೇ ಪತ್ನಿ ಹೆಸರಲ್ಲಿ ಸಿದ್ದರಾಮಯ್ಯ ವಿಶೇಷ ಪೂಜೆ: ತಾವೇ ಕುಂಕುಮ ಹಚ್ಚಿಸಿಕೊಂಡ ಸಿಎಂ
Follow us
Sahadev Mane
| Updated By: ಗಂಗಾಧರ​ ಬ. ಸಾಬೋಜಿ

Updated on:Oct 13, 2024 | 3:58 PM

ಬೆಳಗಾವಿ, ಅಕ್ಟೋಬರ್​ 13: ಸಿಎಂ ಸಿದ್ದರಾಮಯ್ಯ (Siddaramaiah) ತಮ್ಮ ರಾಜ್ಯ ರಾಜಕೀಯವನ್ನು ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಅತ್ಯಂತ ಅಚ್ಚುಕಟ್ಟಾಗಿ ನಡೆಸಿಕೊಂಡು ಬಂದಿದ್ದರು. ಅವರ ಮೇಲೆ ಯಾವುದೇ ರೀತಿಯ ಹಗರಣಗಳ ಆರೋಪ ಕೇಳಿಬಂದಿರಲಿಲ್ಲ. ಆದರೆ ರಾಜ್ಯ ರಾಜಕಾರಣದಲ್ಲಿ ಮುಡಾ ಹಗರಣ ಬಿರುಗಾಳಿ ಎಬ್ಬಿಸಿತ್ತು. ಅವರ ಮೇಲೆ ನೇರವಾಗಿ ಆರೋಪ ಮಾಡಲಾಗಿತ್ತು. ಬಳಿಕ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿದ್ದರು. 14 ಸೈಟ್‌ಗಳನ್ನ ಸಿಎಂ ಪತ್ನಿ ಪಾರ್ವತಿ ಮುಡಾಗೆ ವಾಪಸ್‌ ನೀಡಿದ್ದರು. ಬಳಿಕ ಸಿಎಂ ವಿರುದ್ಧ ಎಫ್​ಐಆರ್​ ದಾಖಲಿದ್ದು, ಕಾನೂನು ಸಮರ ನಡೆಸಿದ್ದಾರೆ. ಇದೆಲ್ಲದರ ಮಧ್ಯೆ ಇದೀಗ ಸಿದ್ದರಾಮಯ್ಯ ತಮ್ಮ ಪತ್ನಿ ಹೆಸರಲ್ಲಿ ರೇಣುಕಾ ಯಲ್ಲಮ್ಮ ದೇವಿಗೆ ಅರ್ಚನೆ ಮಾಡಿಸಿದ್ದಾರೆ.

ಪತ್ನಿ ಹೆಸರಿನಲ್ಲಿ ಸಿದ್ದರಾಮಯ್ಯ ವಿಶೇಷ ಪೂಜೆ

ಇಂದು ಬೆಳಗಾವಿಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ಸವದತ್ತಿಯ ರೇಣುಕಾ ಯಲ್ಲಮ್ಮ ದೇವಿ ದರ್ಶನ ಪಡೆದುಕೊಂಡಿದ್ದಾರೆ. ಸಿದ್ದರಾಮಯ್ಯ ಬರುತ್ತಿದ್ದಂತೆ ವಿಶೇಷ ಅರ್ಚನೆ ಮಾಡಿದ ಅರ್ಚಕರು, ಆರತಿ ಆಗುವವರೆಗೆ ಗರ್ಭಗುಡಿಯಲ್ಲೇ ನಿಂತು ದರ್ಶನ ಪಡೆದುಕೊಂಡರು. ಆರತಿ ತಟ್ಟೆಗೆ 500 ರೂ. ನೋಟು ಹಾಕಿದರು. ಈ ವೇಳೆ ಪತ್ನಿ ಪಾರ್ವತಿ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಹಣೆಗೆ ತಾವೇ ಕುಂಕುಮ ಹಚ್ಚಿಕೊಂಡಿದರು.

ಇದನ್ನೂ ಓದಿ: ಸರ್ಕಾರದಿಂದ ಯಾವುದೇ ರೈತಪರ ಯೋಜನೆ ಇಲ್ಲ: ಸ್ವಪಕ್ಷದ ವಿರುದ್ಧವೇ ಶಾಸಕ ರಾಜು ಕಾಗೆ ವಾಗ್ದಾಳಿ!

ಸಿಎಂ ತಲೆ ಮೇಲೆ ನಾಗಮುದ್ರಿಕೆ ಇಟ್ಟು ಆಶೀರ್ವದಿಸಿದರು. ಇನ್ನು ಗರ್ಭಗುಡಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್​ ಸಾಷ್ಟಾಂಗ ನಮಸ್ಕಾರ ಹಾಕಿದರು. ಯಲ್ಲಮ್ಮ ದೇವಿ ಸನ್ನಿಧಾನದಲ್ಲಿ ಶಾಸಕ ವಿಶ್ವಾಸ ವೈದ್ಯರಿಂದ ಸಿಎಂ ಮತ್ತು ಡಿಸಿಎಂಗೆ ಹೂವಿನ ಹಾರ ಹಾಕಿ ಶಾಲು ಹೊದಿಸಿ ಸನ್ಮಾನ ಮಾಡಲಾಯಿತು.

ವೇತನ ಹೆಚ್ಚಿಸುವಂತೆ ದೇಗುಲದಲ್ಲೇ ಅರ್ಚಕರಿಂದ ಸಿಎಂಗೆ ಮನವಿ

ಸಿಎಂ ಸಿದ್ದರಾಮಯ್ಯ ರೇಣುಕಾ ಯಲ್ಲಮ್ಮ ದೇವಿ ದರ್ಶನ ಪಡೆಯುವಾಗ ವೇತನ ಹೆಚ್ಚಿಸುವಂತೆ ದೇಗುಲದಲ್ಲೇ ಅರ್ಚಕರು‌ ಮನವಿ ನೀಡಿದರು. ಈ ವೇಳೆ ಸಂಬಂಧಪಟ್ಟವರ ಜೊತೆಗೆ ಮಾತನಾಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ.

ಮನವಿ ಕೊಡಲು ಬಂದವನಿಗೆ ಥೂ ಎಂದ ಸಿದ್ದರಾಮಯ್ಯ

ಇನ್ನು ಇದೇ ವೇಳೆ ಮನವಿ ಕೊಡಲು ಬಂದವನಿಗೆ ಥೂ ಎಂದಿದ್ದಾರೆ. 3 ಡಿಸಿಗಳು ಬದಲಾದರೂ ಇನ್ನೂ ಕೆಲಸ ಆಗಿಲ್ಲ ಎಂದು ವ್ಯಕ್ತಿ ಅಳಲುತೊಡಿಕೊಂಡಿದ್ದಾರೆ. ಈ ವೇಳೆ ಎಲ್ಲಿದ್ದೇವೆ ಗೊತ್ತಾಗಲ್ವಾ ಎಂದು ಸಿಎಂ ಗದರಿ ಮುಂದೆ ಸಾಗಿದ್ದಾರೆ.

ಇದನ್ನೂ ಓದಿ: ಹಳೇ ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದಿರುವುದಕ್ಕೆ ಸ್ಪಷ್ಟ ಕಾರಣ ಕೊಟ್ಟ ಸಿಎಂ

ದೇವಿ ದರ್ಶನ ಬಳಿಕ ಅತಿಥಿ ಗೃಹವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಬಳಿಕ ಮಾಧ್ಯಮದವರನ್ನ ಹೊರಗಿಟ್ಟು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳ ಜತೆ ಸಭೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:56 pm, Sun, 13 October 24

ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಈ ನಾಯಿ ಮುಖ ನೋಡಿ ನಿಮ್ಗೆ ದಂಡ ಹಾಕ್ತಿಲ್ಲ:ಟ್ರಾಫಿಕ್ ಪೊಲೀಸ್
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಶ್ರೀನಗರ-ಜಮ್ಮು ಹೆದ್ದಾರಿಯ ನವಯುಗ್ ಸುರಂಗ ಮಾರ್ಗದಲ್ಲಿ ಭೀಕರ ಅಪಘಾತ
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಏರ್ ಕಂಪ್ರೆಸರ್ ಬ್ರೇಕ್​ಗಳು ಏರ್ ಲೀಕಾಗುತ್ತಿದ್ದರೆ ಬ್ರೇಕ್ ಹತ್ತಲ್ಲ?
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ
ಕೊಲೆ ಆರೋಪಿಗೆ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಾತಿಥ್ಯ