ಆಧಿಕಾರಿಗಳು ಕೆಲಸದಲ್ಲಿ ನಿರ್ಲಕ್ಷ್ಯ ಮತ್ತು ಜನರಿಗೆ ಅಗೌರವ ತೋರಿದರೆ ಕಠಿಣ ಕ್ರಮ: ಸಿದ್ದರಾಮಯ್ಯ

|

Updated on: Feb 08, 2024 | 7:01 PM

ಪ್ರಮುಖವಾಗಿ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಬೇಕು, ಯಾರೇ ಆಗಲಿ ಕೆಲಸದಲ್ಲಿ ನಿರ್ಲಕ್ಷ್ಯ ತೋರಿದರೆ, ಜನರಿಗೆ ಅಗೌರವ ತೋರಿದರೆ ಅವರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ಖಡಕ್ ಎಚ್ಚರಿಕೆಯನ್ನು ಮುಖ್ಯಮಂತ್ರಿ ರವಾನಿಸಿದರು.

ಬೆಂಗಳೂರು: ಇಂದು ನಗರದ ವಿಧಾನಸೌಧ ಅವರಣದಲ್ಲಿ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಿ ರಾಜ್ಯದ ಬೇರೆ ಬೇರೆ ಭಾಗಗಳಿಂದ ದೂರು, ಸಮಸ್ಯೆಗಳನ್ನು ಹೊತ್ತು ಬಂದಿದ್ದ ಸಾವಿರಾರು ಜನರ ತೊಂದರೆಗಳನ್ನು ಅಲಿಸಿದ ಬಳಿಕ ಸುದ್ದಿಗೋಷ್ಟಿಯೊಂದನ್ನು ನಡೆಸಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಇವತ್ತು ಸ್ವೀಕರಿಸಿದ ಎಲ್ಲ ಅರ್ಜಿಗಳನ್ನು ಸಾಧ್ಯವಾದಷ್ಟು ಬೇಗ ಇತ್ಯರ್ಥಗೊಳಿಸಬೇಕೆಂದು ಅಧಿಕಾರಿಗಳಿಗೆ (officials) ಸೂಚನೆ ನೀಡಿದರು. ಕೆಳಮಟ್ಟದಲ್ಲಿ ಅಧಿಕಾರಿಗಳು ಸಮರ್ಥವಾಗಿ ಕೆಲಸ ಮಾಡಿದರೆ ಜನರು ತಮ್ಮ ಸಮಸ್ಯೆಗಳನ್ನು ತೆಗೆದುಕೊಂಡು ಬೆಂಗಳೂರುವರೆಗೆ ಬರುವ ಪರಿಸ್ಥಿತಿ ಉದ್ಭವಿಸುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಸರ್ಕಾರಿ ಅಧಿಕಾರಿಗಳಲ್ಲಿ ಜಡತ್ವ (laxity) ಇರಕೂಡದು, ಜಡತ್ವ ತಲೆದೋರಿದರೆ ಸಮಸ್ಯೆಗಳು ತಲೆದೋರುತ್ತವೆ, ಕೆಲಸ ಸರಿಯಾದ ನಿಟ್ಟಿನಲ್ಲಿ ಸಾಗಿದರೆ ಆಡಳಿತ ಯಂತ್ರ ಚುರುಕಾಗಿದೆ ಅಂತ ಜನರಿಗೆ ಮನವರಿಕೆಯಾಗತ್ತದೆ ಎಂದು ಸಿದ್ದರಾಮಯ್ಯ ಹೇಳಿದರು. ಪ್ರಮುಖವಾಗಿ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಬೇಕು, ಯಾರೇ ಆಗಲಿ ಕೆಲಸದಲ್ಲಿ ನಿರ್ಲಕ್ಷ್ಯ ತೋರಿದರೆ, ಜನರಿಗೆ ಅಗೌರವ ತೋರಿದರೆ ಅವರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ಖಡಕ್ ಎಚ್ಚರಿಕೆಯನ್ನು ಮುಖ್ಯಮಂತ್ರಿ ರವಾನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ