AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಧಿ ಮೀರಿದ ಆಹಾರ ಪದಾರ್ಥ ಮಾರಾಟ ಮಾಡಿದ್ರೆ ಹುಷಾರ್!‌ ಸಿಎಂ ಎಚ್ಚರಿಕೆ

ಬಸ್‌ ನಿಲ್ದಾಣಗಳ ಸ್ಟಾಲ್‌ಗಳಲ್ಲಿ ಮಾರಾಟವಾಗುವ ಆಹಾರ ಪದಾರ್ಥಗಳ ಬಗ್ಗೆ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ದೂರು ತೋಡಿಕೊಂಡಿದ್ದರು. ಪಾನೀಯಗಳು, ತೆರೆದಿಟ್ಟ ಆಹಾರ ಪದಾರ್ಥಗಳ ಸ್ವಚ್ಛತೆ, ನೈರ್ಮಲ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಕೋರಿದ್ದರು. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಕಚೇರಿ ಎಚ್ಚೆತ್ತುಕೊಂಡಿದ್ದು, ಸೂಕ್ತ ಕ್ರಮಕ್ಕೆ ಮುಂದಾಗಿದೆ.

ಅವಧಿ ಮೀರಿದ ಆಹಾರ ಪದಾರ್ಥ ಮಾರಾಟ ಮಾಡಿದ್ರೆ ಹುಷಾರ್!‌ ಸಿಎಂ ಎಚ್ಚರಿಕೆ
ಸಿಎಂ ಸಿದ್ದರಾಮಯ್ಯ
ಅನಿಲ್​ ಕಲ್ಕೆರೆ
| Edited By: |

Updated on: Jun 19, 2024 | 3:42 PM

Share

ಬೆಂಗಳೂರು, (ಜೂನ್ 19): ಬಸ್‌ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು (Food stalls) ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ  ಆಹಾರ ಪದಾರ್ಥಗಳ (Expiry date food) ಮಾರಾಟ ಮಾಡಿದರೆ ನಿರ್ದಾಕ್ಷಿಣ್ಯವಾಗಿ (Food safety) ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು (CM Siddaramaiah) ಎಚ್ಚರಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳ ಕಚೇರಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಬಸ್‌ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ, ನೈರ್ಮಲ್ಯದ ಕೊರತೆ ಮುಂತಾದ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರವಾದ ವರದಿಗಳನ್ನು ಆಧರಿಸಿ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ನಿಯಮಗಳು 2011 ಅನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡಲು 2024ರ ಜೂನ್‌ ತಿಂಗಳಲ್ಲಿ ವಿಶೇಷ ಅಭಿಯಾನವನ್ನು ಕೈಗೊಳ್ಳಲಾಗಿರುತ್ತದೆ. ಅದರಂತೆ ರಾಜ್ಯಾದ್ಯಂತ 201 ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಕಚೇರಿ ಹಾಗೂ ಖಾಸಗಿ ಬಸ್‌ ನಿಲ್ದಾಣಗಳಲ್ಲಿ ಇರುವ 748 ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳನ್ನು ಪರಿಶೀಲನೆ ಮಾಡಲಾಗಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುವಂತೆ ಅರಿವು ಮೂಡಿಸಲಾಗಿರುತ್ತದೆ. ಮುಂದಿನ ದಿನಗಳಲ್ಲಿ ಪುನರ್‌ ಪರಿಶೀಲನೆ ಸಂದರ್ಭದಲ್ಲಿ ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ನಿಯಾಮಾನುಸಾರ ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ: ಇನ್ನೂ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರಿಗೆ ಗುಡ್​ನ್ಯೂಸ್

ಬಸ್‌ ನಿಲ್ದಾಣಗಳ ಸ್ಟಾಲ್‌ಗಳಲ್ಲಿ ಮಾರಾಟವಾಗುವ ಆಹಾರ ಪದಾರ್ಥಗಳ ಬಗ್ಗೆ ಹಲವು ಬಳಕೆದಾರರು ಸಾಮಾಜಿಕ ಜಾಲತಾಣಗಳಲ್ಲಿ ದೂರು ತೋಡಿಕೊಂಡಿದ್ದರು. ಲಘು ಪಾನೀಯಗಳು, ತೆರೆದಿಟ್ಟ ಆಹಾರ ಪದಾರ್ಥಗಳ ಸ್ವಚ್ಛತೆ, ನೈರ್ಮಲ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅನಿಲ್​ ಕಲ್ಕೆರೆ
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More
ಬಿಗ್ ಬಾಸ್: ನಾಮಿನೇಟ್ ಆದವರಲ್ಲಿ ಈ ವಾರ ಮನೆಯಿಂದ ಹೊರಹೋಗುವವರು ಯಾರು?
ಬಿಗ್ ಬಾಸ್: ನಾಮಿನೇಟ್ ಆದವರಲ್ಲಿ ಈ ವಾರ ಮನೆಯಿಂದ ಹೊರಹೋಗುವವರು ಯಾರು?
ಮೇಷ, ಕರ್ಕಾಟಕ ರಾಶಿಗೆ ಭಾರಿ ಧನಯೋಗ
ಮೇಷ, ಕರ್ಕಾಟಕ ರಾಶಿಗೆ ಭಾರಿ ಧನಯೋಗ
ಎಲ್‌ಎಸಿಯಲ್ಲಿ ಸೈನ್ಯದ ಗಸ್ತು ಮಾದರಿ ಬದಲಾವಣೆ; ಚೀನಾ ನಡೆಗೆ ಭಾರತ ಆಕ್ಷೇಪ
ಎಲ್‌ಎಸಿಯಲ್ಲಿ ಸೈನ್ಯದ ಗಸ್ತು ಮಾದರಿ ಬದಲಾವಣೆ; ಚೀನಾ ನಡೆಗೆ ಭಾರತ ಆಕ್ಷೇಪ
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ