ಬೆಂಗಳೂರು, (ಜೂನ್ 19): ಬಸ್ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು (Food stalls) ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ (Expiry date food) ಮಾರಾಟ ಮಾಡಿದರೆ ನಿರ್ದಾಕ್ಷಿಣ್ಯವಾಗಿ (Food safety) ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು (CM Siddaramaiah) ಎಚ್ಚರಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳ ಕಚೇರಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಬಸ್ ನಿಲ್ದಾಣಗಳಲ್ಲಿನ ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳ ಮಾರಾಟ, ನೈರ್ಮಲ್ಯದ ಕೊರತೆ ಮುಂತಾದ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬಿತ್ತರವಾದ ವರದಿಗಳನ್ನು ಆಧರಿಸಿ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ನಿಯಮಗಳು 2011 ಅನ್ನು ಪಾಲಿಸುತ್ತಿರುವ ಬಗ್ಗೆ ಪರಿಶೀಲನೆ ಮಾಡಲು 2024ರ ಜೂನ್ ತಿಂಗಳಲ್ಲಿ ವಿಶೇಷ ಅಭಿಯಾನವನ್ನು ಕೈಗೊಳ್ಳಲಾಗಿರುತ್ತದೆ. ಅದರಂತೆ ರಾಜ್ಯಾದ್ಯಂತ 201 ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ಕಚೇರಿ ಹಾಗೂ ಖಾಸಗಿ ಬಸ್ ನಿಲ್ದಾಣಗಳಲ್ಲಿ ಇರುವ 748 ವ್ಯಾಪಾರ ಮಳಿಗೆಗಳು ಮತ್ತು ಆಹಾರ ಉದ್ದಿಮೆಗಳನ್ನು ಪರಿಶೀಲನೆ ಮಾಡಲಾಗಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಮತ್ತು ನಿಯಮಗಳು 2011 ಅನ್ನು ಪಾಲಿಸುವಂತೆ ಅರಿವು ಮೂಡಿಸಲಾಗಿರುತ್ತದೆ. ಮುಂದಿನ ದಿನಗಳಲ್ಲಿ ಪುನರ್ ಪರಿಶೀಲನೆ ಸಂದರ್ಭದಲ್ಲಿ ಲೋಪದೋಷಗಳನ್ನು ಸರಿಪಡಿಸಿಕೊಳ್ಳದೇ ಇದ್ದಲ್ಲಿ ನಿಯಾಮಾನುಸಾರ ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ: ಇನ್ನೂ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರಿಗೆ ಗುಡ್ನ್ಯೂಸ್
ಬಸ್ ನಿಲ್ದಾಣಗಳ ಸ್ಟಾಲ್‌ಗಳಲ್ಲಿ ಮಾರಾಟವಾಗುವ ಆಹಾರ ಪದಾರ್ಥಗಳ ಬಗ್ಗೆ ಹಲವು ಬಳಕೆದಾರರು ಸಾಮಾಜಿಕ ಜಾಲತಾಣಗಳಲ್ಲಿ ದೂರು ತೋಡಿಕೊಂಡಿದ್ದರು. ಲಘು ಪಾನೀಯಗಳು, ತೆರೆದಿಟ್ಟ ಆಹಾರ ಪದಾರ್ಥಗಳ ಸ್ವಚ್ಛತೆ, ನೈರ್ಮಲ್ಯದ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ